ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು
ಮಂಗಳೂರು : ಸುರಿದ ಭಾರೀ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಜೋಕಟ್ಟೆಯಲ್ಲಿ ನಡೆದಿದೆ. ಮಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತಪಟ್ಟ ಬಾಲಕ. ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಶೈಲೇಶ್ ಅತಿಥಿಯಾಗಿ ಬಂದಿದ್ದ ಎನ್ನಲಾಗಿದ್ದು, ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಮನೆಯ ಪಕ್ಕದ ತಡೆಗೋಡೆ ಕುಸಿದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮನೆ ಮೇಲೆ ತಡೆಗೋಡೆ ಕುಸಿತ : ಬಾಲಕ ಮೃತ್ಯು Read More »










