ಆಟೋ – ಬಸ್ಸಿನ ನಡುವೆ ಅಪಘಾತ
ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಆಟೋ ಮತ್ತು ಬಸ್ಸು ಗುದ್ದಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಆಟೋ – ಬಸ್ಸಿನ ನಡುವೆ ಅಪಘಾತ Read More »
ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಆಟೋ ಮತ್ತು ಬಸ್ಸು ಗುದ್ದಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಆಟೋ – ಬಸ್ಸಿನ ನಡುವೆ ಅಪಘಾತ Read More »
ಪುತ್ತೂರು: ದರ್ಬೆಯ ಹರ್ಷ ಮಳಿಗೆಯ ಸಮೀಪ ಇಂದು ಮಧ್ಯಾಹ್ನ ಅಟೋ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸವಾರ ಗಾಯಗೊಂಡಿದ್ದಾರೆ. ಸ್ಕೂಟಿ ಸವಾರ ಒಳ ರಸ್ತೆಯಿಂದ ಮುಖ್ಯರಸ್ತೆಗೆ ಸಂಪರ್ಕಿಸುತ್ತಿದ್ದು, ಆಟೋ ರಿಕ್ಷಾ ದರ್ಬೆಯಿಂದ ಪುತ್ತೂರಿಗೆ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಸ್ಕೂಟಿ ರಸ್ತೆಗೆ ಬಿದ್ದು ಸವಾರ ಮತ್ತು ಹಿಂಬದಿ ಸವಾರೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಇವರಿಗೆ ತರಚು ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ರಿಕ್ಷಾ ಚಾಲಕ ಮತ್ತು ಸ್ಕೂಟಿಯಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.
ದರ್ಬೆಯಲ್ಲಿ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ Read More »
ಮೂಡಬಿದ್ರೆ: ಕಳೆದ ವರ್ಷ ಅಕ್ಟೋಬರ್ನಲ್ಲಿ ಕಾರ್ಕಳದಲ್ಲಿ ನಡೆದಿದ್ದ ಆ್ಯಕ್ಸಿಡೆಂಟ್ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಚ ಘಟನೆ ನಡೆದಿದೆ. ಪಡುಮಾರ್ನಾಡು ನಿವಾಸಿ ಸಾತ್ವಿಕ್ ಕುಲಾಲ್(21) ಎಂಬವರೇ ಮೃತ ದುರ್ದೈವಿ. ಸಾತ್ವಿಕ್ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅವರಿಗೆ ಕಳೆದ 2025 ರ ಅಕ್ಟೋಬರ್ ತಿಂಗಳಿನಲ್ಲಿ ಬೈಕ್ ಆ್ಯಕ್ಸಿಡೆಂಟ್ ಸಂಭವಿಸಿತ್ತು. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ.
ಆಕ್ಸಿಡೆಂಟ್ನಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು Read More »
ಸುಳ್ಯ: ಮೊಬೈಲ್ ಫೋನ್ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು. ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್ನ ಜೇಬಿನೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್ ಸ್ಫೋಟಗೊಂಡಿದೆ. ಪ್ಯಾಂಟ್ ಜೇಬಿನೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.
ಜೇಬಿನಲ್ಲೇ ಸ್ಫೋಟಿಸಿದ ಮೊಬೈಲ್ : ಯುವಕನಿಗೆ ಗಾಯ Read More »
ಟ್ರಾನ್ಸ್ಫಾರ್ಮರ್ನಿಂದ ಕಿಡಿ ಸಿಡಿದು ಅನಾಹುತ ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಪ್ಲಾಜಾ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಯೊಂದು ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಹತ್ತಿರದ ಇಲೆಕ್ಟ್ರಿಕ್ ಟ್ರಾನ್ಸ್ಫಾರ್ಮರ್ನಿಂದ ಹೊರಬಂದ ಕಿಡಿಗಳು ಒಣ ಹುಲ್ಲಿಗೆ ತಗುಲಿ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಹರಡಿ, ಬಿಹಾರ ಮೂಲದ ಸೈಫುಲ್ಲಾ ಎಂಬುವವರಿಗೆ ಸೇರಿದ ಅಂಗಡಿಗೆ ತಗುಲಿದೆ. ಅಂಗಡಿಯಲ್ಲಿದ್ದ ಕಂಪ್ರೆಸರ್, ಜನರೇಟರ್, ಟೂಲ್ ಕಿಟ್ಗಳು ಮತ್ತು ದಾಸ್ತಾನು ಮಾಡಲಾಗಿದ್ದ
ಬೆಂಕಿ ಅವಘಡ : ಟಯರ್ ಪಂಕ್ಚರ್ ಅಂಗಡಿ ನಾಶ Read More »
ಚಾಲಕನ ನಿದ್ರೆಯ ಮಂಪರಿನಿಂದ ಸಂಭವಿಸಿದ ಭೀಕರ ಅಪಘಾತ ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚನ್ನಪಟ್ಟಣ ಬಳಿ ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೇರಳಂ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಸ್ ಡಿವೈಡರ್ಗೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು Read More »
ಬೆಂಗಳೂರು: ಬೆಂಗಳೂರಿನ ಆಸುಪಾಸಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಎರಡು ಭೀಕರ ಅಪಘಾತದಲ್ಲಿ ಒಟ್ಟು ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೆಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತರು. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ.
ಭೀಕರ ಅಪಘಾತ : ಮೂವರು ಮಹಿಳೆಯರ ಸಹಿತ ಆರು ಮಂದಿ ಸಾವು Read More »
ಕೊಟ್ಟಿಗೆಹಾರ: ಟಿಟಿ ವಾಹನವೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಈ ವಾಹನವು ಭದ್ರಾವತಿಯಿಂದ ಧರ್ಮಸ್ಥಳದತ್ತ ಹೋಗುತ್ತಿತ್ತು. ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ ಇದು, ಗಾಯಾಳು ಒಂಬತ್ತು ಜನರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸ್ಥಳೀಯರು ಘಟನೆ ನಡೆದ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗಾಯ ಆಲಿ ಗಳನ್ನು ನೆರೆಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು
ಚಾರ್ಮಾಡಿ ಘಾಟ್ನಲ್ಲಿ ಪಲ್ಟಿಯಾದ ಟಿಟಿ ವಾಹನ: ಒಂಬತ್ತು ಜನರಿಗೆ ಗಾಯ Read More »
ಚಿಕ್ಕಮಗಳೂರು: ವಿದ್ಯುತ್ ಕಂಬವೊಂದಕ್ಕೆ ಸರ್ಕಾರಿ ಬಸ್ ಗುದ್ದಿದ್ದು, ಎಂಟು ಮಂದಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕೊಡಾಳ್ ಸಮೀಪ ನಡೆದಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸು ಕುಕ್ಕನೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿತ್ತು. ನಲವತ್ತಕ್ಕೂ ಅಧಿಕ ಪ್ರಯಾಣಿಕರು ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಪಘಾತದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರಿ ಬಸ್ ಪಲ್ಟಿ: ಎಂಟು ಜನರಿಗೆ ಗಾಯ Read More »
ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10
ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »