ಸಿಡಿಲು ಬಡಿದು ವ್ಯಕ್ತಿ ಮೃತ್ಯು
ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಿಡಿಲು ಬಡಿದು ಮೃತಪಟ್ಟವರು. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ […]
ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »









