ಅಪಘಾತ

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಹಾಸನ- ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತವಾಗಿದೆ. ಕಲ್ಲು,ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ, ಯಡಕುಮೇರಿ, ಶಿರವಾಗಿಲು, ಆಲೂರು ಸೇರಿ 6 ಕಡೆಗಳಲ್ಲಿ  6 ರೈಲುಗಳು ನಿಂತಿವೆ.

ರೈಲ್ವೇ ಹಳಿ ಮೇಲೆ ಭೂಕುಸಿತ | ಹಾಸನ- ಮಂಗಳೂರು ರೈಲು ಸಂಚಾರ ಸ್ಥಗಿತ Read More »

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು

ಪುತ್ತೂರು: ಕಾಂಕ್ರೀಟ್ ಮಿಕ್ಸ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಲಾರಿಯೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಉರುಳಿ ಬಿದ್ದ ಘಟನೆ ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಲ್ಲಿ ಇಂದು ನಡೆದಿದೆ. ಆರ್ಲಪದವಿನ ಕಾಮಗಾರಿ ಒಂದಕ್ಕೆ ಕಾಂಕ್ರೀಟ್ ಮಿಕ್ಸ್ ಹೇರಿಕೊಂಡು ಹಂಟ್ಯಾರು – ಪಾಣಾಜೆ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಕೊರಿಂಗಿಲ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಬಂದ ಲಾರಿಗೆ ಸೈಡ್ ಕೊಡುವ ಭರದಲ್ಲಿ ಈ ದುರಂತ ಸಂಭವಿಸಿದ್ದು ಸುಮಾರು 30 ಅಡಿ ಆಳದ ತೋಟಕ್ಕೆ ಬಿದ್ದಿದೆ.  ಅದರ ಚಾಲಕ ಅದೃಷ್ಟವಶಾತ್ ಪಾರಗಿದ್ದಾನೆ. ಅಗಲ ಕಿರಿದಾದ ರಸ್ತೆ ಹಾಗೂ

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು Read More »

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ

ಕಾರವಾರ: ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್‍ ಬಿ ಹೊಸ ಸೇತುವೆ

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ Read More »

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ

ಪುತ್ತೂರು: ಪಿಕಪ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ನಡೆದಿದೆ. ಪಿಕಪ್ ಚಾಲಕ ಟರ್ನ್‍ ಮಾಡುವ ಸಂದರ್ಭ  ಸ್ಕೂಟಿ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇದೇಸ್ಥಳದಲ್ಲಿ ಹಲವಾರು ಆಕ್ಸಿಡೆಂಟ್ ಗಳು ಈ ಹಿಂದೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಸಂಬಂಧ ಪಟ್ಟ ಇಲಾಖೆ ಯಾವುದೇ

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ Read More »

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಬಿಹಾರ : ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ವಿದ್ಯುತ್ ಶಾಕ್‍ ನಿಂದ 9 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಧ್ಯರಾತ್ರಿ ವೇಳೆ ಡಿಜೆ ವಾಹನ ಸಂಚರಿಸುವಾಗ ಹೈಟೆನ್ಸನ್ ತಂತ್ತಿಗೆ ಸಿಲುಕಿದೆ. ಪರಿಣಾಮ ಸಾವು-ನೋವು ಸಂಭವಿಸಿದೆ. ಡಿಜೆ ವಾಹನವು ತುಂಬಾ ಎತ್ತರವಾಗಿತ್ತು. ರಾತ್ರಿ ವೇಳೆ ಹೈಟೆನ್ಷನ್ ತಂತಿ ಅಡ್ಡಲಾಗಿ ಹಾದು ಹೋಗಿದ್ದು ಕಾಣಿಸಿಲ್ಲ. ತಂತಿ ತಾಗಿದೊಡನೆ 9 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಮೀನುಗಾರಿಕೆ ಬೋಟ್‍ ಬೆಂಕಿಗಾಹುತಿ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ಸಮುದ್ರದ ಮಧ್ಯ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಸೋಮವಾರ ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು

ಮೀನುಗಾರಿಕೆ ಬೋಟ್‍ ಬೆಂಕಿಗಾಹುತಿ Read More »

ಮೋರಿಗೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಸುಳ್ಯ: ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಯುವಕರಾದ ಪವನ್ ಮತ್ತು ಮನೋಜ್ ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ರಾತ್ರಿ ಸುಮಾರು 9 ರಿಂದ 10 ಗಂಟೆಯ

ಮೋರಿಗೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಮಹಿಳೆಯೊಬ್ಬರು ಬಾವಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ಕೃಷಿ ಇಲಾಖೆಯ ಸೀಡ್ ಫಾರ್ಮ್‍ ರಸ್ತೆ ಬಳಿ ನಡೆದಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿ ಜೀವಂದರ್ ಪಡಿವಾಳ ಅವರ ಪತ್ನಿ ಸುಮಾಲಿನಿ ಜೈನ್ (63) ಮೃತಪಟ್ಟ ಮಹಿಳೆ. ಮೃತರು ಪತಿ, ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ತೆಂಕಿಲ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ | ಸಂಚಾರ ಬಂದ್

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ಮುಂಜಾನೆ ಗುಡ್ಡ ಕುಸಿದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡ ಕುಸಿಯುತ್ತಲೇ ಇದ್ದು, ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ತೆಂಕಿಲ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ | ಸಂಚಾರ ಬಂದ್ Read More »

ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ | ವಾಹನ ಸಂಚಾರ ಸಂಪೂರ್ಣ ಬಂದ್

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೊಮ್ಮೆ ಭಾರೀ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ. ಭೂಕುಸಿತದ ಹಿನ್ನಲೆಯಲ್ಲಿ ಮಂಗಳೂರು – ಬೆಂಗಳೂರು ಸಂಚಾರ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ – ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ – ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.

ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ | ವಾಹನ ಸಂಚಾರ ಸಂಪೂರ್ಣ ಬಂದ್ Read More »

error: Content is protected !!
Scroll to Top