ಪ್ರತಿಭಟನೆ ವೇಳೆ ಕುಸಿದುಬಿದ್ದು ಎಂ.ಎಲ್.ಸಿ ಭಾನುಪ್ರಕಾಶ್ ನಿಧನ| ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ
ಮಂಗಳೂರು : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್ರವರು ಇಂದು ನಿಧನರಾದರು. ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು ಹಾಗೂ ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ನಿಯಾಗಿದ್ದರು. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯತ್ […]