ನಿಧನ

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ

ಪುತ್ತೂರು: ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ, 1965ರಲ್ಲಿ ಸ್ಥಾಪನೆಗೊಂಡ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಅಸ್ತಂಗತರಾಗಿದ್ದಾರೆ. ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿ, ವಸತಿ ನಿಲಯದ ಮೇಲ್ವಿಚಾರಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಕಾಲೇಜಿನ ಅಭಿವೃದ್ಧಿಗೆ ಅನನ್ಯ ಸೇವೆ ಸಲ್ಲಿಸಿದ್ದರು . ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಉಪನ್ಯಾಸಕ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಧರ್ ನಾಯ್ಕ್ ಅಸ್ತಂಗತ Read More »

ಚಂದ್ರಾ ಫ್ಯಾನ್ಸಿ ಮಾಲೀಕ ದಿನೇಶ್ ಆಚಾರ್ಯ ಇನ್ನಿಲ್ಲ

ಪುತ್ತೂರು: ವೆಂಕಟರಮಣ ದೇವಾಲಯದ ಸಮೀಪದಲ್ಲಿರುವ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಗಲೇ ಅವರು ಮೃತಪಟ್ಚಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೃತರು ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

ಚಂದ್ರಾ ಫ್ಯಾನ್ಸಿ ಮಾಲೀಕ ದಿನೇಶ್ ಆಚಾರ್ಯ ಇನ್ನಿಲ್ಲ Read More »

ಮಂಗಳೂರು: ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಮೃತ

ದ.ಕ ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ಅಪಘಾತ ಮಂಗಳೂರು: ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಭೀಕರ ಅಪಘಾತ ಶನಿವಾರ ಸಂಭವಿಸಿದೆ. ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದ್ಗಡೆಯಿಂದ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.ಮುಂಭಾಗದಲ್ಲಿ ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ, ಕಾರು, ಆಟೊ ರಿಕ್ಷಾ ನಿಂತಿತ್ತು.ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ

ಮಂಗಳೂರು: ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಮೃತ Read More »

ಉಸಿರು ಚೆಲ್ಲಿದ ಹಸಿರು ಮಾತೆ

ಬೆಂಗಳೂರು: ಉಸಿರಾಟದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಮಕ್ಕಳ ದಿನಾಚರಣೆಯಂದು ನಿಧನವೃಕ್ಷಗಳನ್ನು ಮಕ್ಕಳಂತೆಯೇ ಪ್ರೀತಿಸುತ್ತಿದ್ದ “ವೃಕ್ಷಮಾತೆ” ತಿಮ್ಮಕ್ಕ ಮಕ್ಕಳ ದಿನಾಚರಣೆ ಯಂದೇ ನಿಧನವಾಗಿದ್ದು ಅಚ್ಚರಿಯಾಗಿದೆ.

ಉಸಿರು ಚೆಲ್ಲಿದ ಹಸಿರು ಮಾತೆ Read More »

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಅನಾರೋಗ್ಯದಿಂದ ನಿಧನರಾದ ಶತಾಯುಷಿ ತಿಮ್ಮಕ್ಕ ಬೆಂಗಳೂರು : ವೃಕ್ಷಮಾತೆ ಎಂದೇ ಕರಿಯಲ್ಪಡುತ್ತಿದ್ದ ಸಾಲುಮರದ ತಿಮ್ಮಕ್ಕ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ಪ್ರಾಯವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಹುಲಿಕಲ್​​

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ Read More »

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

300ಕ್ಕೂ ಆಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ, ರಾಜಕಾರಣಿ ಮುಂಬೈ: ಬಾಲಿವುಡ್‌ನ ದಂತಕಥೆ ಹೀ-ಮ್ಯಾನ್’ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇವರಿಗೆ 89 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರು ದಶಕಗಳಿಗೂ ಹೆಚ್ಚು ಕಾಲದ ಸಿನಿಪಯಣದಲ್ಲಿ ಧರ್ಮೇಂದ್ರ ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಡಿಸೆಂಬರ್ 25ರಂದು ಬಿಡುಗಡೆಯಾಗಲಿರುವ ‘ಇಕ್ಕೀಸ್’ ಅವರ ಕೊನೆಯ ಚಿತ್ರವಾಗಲಿದೆ. ಅವರು ಪತ್ನಿ ಹೇಮಾಮಾಲಿನಿ ಮತ್ತು ಮಕ್ಕಳಾದ ಸನ್ನಿ

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ

ಬೆಂಗಳೂರು: ಅತಿ ವೇಗದಿಂದ ಚಲಾಯಿಸುತ್ತಿದ್ದ ಬೈಕ್ ಸವಾರಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಬೈಕ್‌ನಲ್ಲಿ ಯುವಕರಿಬ್ಬರು ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತದೇಹಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಕುದೂರು ‌ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತಿವೇಗದ ಚಾಲನೆ: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರ ದುರ್ಮರಣ Read More »

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಡೂರಿನ ಬುಕ್ಕಸಾಗರ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಿಲ್ (21) ಎಂಬವರೇ ‌ಮೃತ ದುರ್ದೈವಿ. ಮೂಲತಃ ಕೇರಳದ ಕಣ್ಣೂರಿನವರಾದ ಅನಿಸ್ ಕಡೂರಿನ ಬಟ್ಟೆ ಅಂಗಡಿಯೊಂದರಲ್ಲಿ ‌ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ದತ್ತಪೀಠಕ್ಕೆ ತೆರಳಿ ವಾಪಾಸಾಗುತ್ತಿದ್ದ ‌ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು Read More »

ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಆತ್ಮಹತ್ಯೆ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ, ರೆಂಕೆದಗುತ್ತು ನಿವಾಸಿ ಅಬ್ದುಲ್ ಬಶೀರ್ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮೃತದೇಹ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಆತ್ಮಹತ್ಯೆ Read More »

ಅನಾರೋಗ್ಯದಿಂದ ಖಳನಟ ಹರೀಶ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ಖಳನಟ ಹರೀಶ್ ರಾಯ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಥೈರಾಯ್ಡ್ ಕ್ಯಾನ್ಸರ್‌‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ‌ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ್ದ ಅವರು, ಕೆಜಿಎಫ್ ಚಿತ್ರದಲ್ಲಿನ ಚಾಚಾ ಪಾತ್ರದ ನಟನೆಯ ಬಳಿಕ ಕೆಜಿಎಫ್ ಚಾಚಾ ಎಂದೇ ಪರಿಚಿತರಾಗಿದ್ದರು‌.

ಅನಾರೋಗ್ಯದಿಂದ ಖಳನಟ ಹರೀಶ್ ರಾಯ್ ನಿಧನ Read More »

error: Content is protected !!
Scroll to Top