ನಿಧನ

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಬಿ.ಸಿ.ರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಜ್ವಲ್ ಮೇ 5 ರಂದು ಬಿ.ಸಿರೋಡಿನ ಖಾಸಗಿ ಬಸ್‌ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿ ಮಾದಲ್ಲಿ ರೂಮ್ ಮಾಡಿದ್ದ, ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಕಾರಣ ಹೋಟೆಲ್ […]

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು

ವಿಟ್ಲ: ವಿದ್ಯುತ್‌ ತಂತಿಗೆ ಸಿಲುಕಿ ನವಿಲೊಂದು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಅಲ್ಲಿನ ಆಟೋ ರಿಕ್ಷಾ ಚಾಲಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು Read More »

ಕುಸಿದು ಬಿದ್ದು ವ್ಯಕ್ತಿ ಮೃತ್ಯು !

ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದಲ್ಲಿ ಸಂಭವಿಸಿದೆ. ಸುಮಾರು 38 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವೇಣೂರು ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸಹಕಾರದಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು ! Read More »

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ

ವಿಟ್ಲ: ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್‌ ಅವರ ಪತ್ನಿ ಮನೆಗೆ ಬ೦ದಾಗ, ಬಾಗಿಲು ಹಾಕಿರುವುದು ಕ೦ಡುಬ೦ದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ Read More »

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು

ಉಪ್ಪಿನಂಗಡಿ : ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ನಿನ್ನಿಕಲ್ಲಿನಲ್ಲಿ ನಡೆದಿದೆ. ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27) ಮೃತಪಟ್ಟವರು. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜನಾರ್ದನ ಅವರು ದುರ್ಗಾಗಿರಿ ಶ್ರೀ ದುರ್ಗಾ ಭಜನ ಮಂಡಳಿ ಹಾಗೂ ಶ್ರೀ ದುರ್ಗಾ ಯುವಕ

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು Read More »

ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ನಿಧನ

ಮಂಗಳೂರು: ಹಿರಿಯ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಸುಮಾರು 4 ದಶಕಗಳ ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಗಂಗಾಧರ ಪುತ್ತೂರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಡೆಸುತ್ತಿದ್ದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು

ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ನಿಧನ Read More »

ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ ನಿಧನ

ಪುತ್ತೂರು: ನಗರದ ಸಾಲ್ಮರ ನಿವಾಸಿ, ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ (85) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ನಿಧನರಾದರು. ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗಿಯಾಗಿ ಹಲವಾರು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದು, ನಿವೃತ್ತಿ ಬಳಿಕ ಮನೆಯಲ್ಲಿದ್ದರು. ಮೃತರು ಪತ್ನಿ, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ ನಿಧನ Read More »

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಉಡುಪಿ: ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ  ಅಲ್ಪಕಾಲದ  ಅಸೌಖ್ಯದಿಂದಾಗಿ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಕಾಳಿಂಗ ನಾವಡರ  ಬಳಿಕ  ಯಕ್ಷಗಾನ ಭಾಗವತಿಕೆಗೆ ಸ್ಟಾರ್ ವ್ಯಾಲ್ಯೂ ತಂದುಕೊಟ್ಟಿದ್ದ ಧಾರೇಶ್ವರ ತನ್ನ ಮಧುರ ಕಂಠದಿಂದ ವರ್ಷಗಳ ಕಾಲ ಯಕ್ಷಗಾನ ಪ್ರೇಮಿಗಳನ್ನು ರಂಜಿಸಿದ್ದರು. ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಅತ್ಯಂತ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ  28

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ, ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ (38) ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಎ.22 ರಂದು ತನ್ನ ಮನೆ ಸಮೀಪದ ಮರದ ಕೆಳಗೆ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಚಿಕಿತ್ಸೆಗಾಗಿ ಇವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಎ.23 ರಂದು ನಿಧನರಾದರು. ಗಣೇಶ್ ಯಾನೆ ಕುಶಾಲಪ್ಪ ಅವರು ಕಳೆದ 19 ವರ್ಷಗಳಿಂದ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಿಯಾಗಿದ್ದರು. ಉಪ್ಪಿನಂಗಡಿ

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ Read More »

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ (88) ವಯೋಸಹಜ, ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ ನಿಧನರಾದರು. ಮೃತರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿಯಾಗಿದ್ದು, ಆ ಕಾಲದ ಕೋಡಿಂಬಾಡಿ ಪಂಚಾಯಿತಿ ಪ್ರತಿನಿಧಿಯಾಗಿದ್ದರು. ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು, ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ Read More »

error: Content is protected !!
Scroll to Top