ನಿಧನ

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ ನಿಧನ

ಪುತ್ತೂರು: ಮರೀಲ್ ನಲ್ಲಿರುವ ಪ್ರತಿಷ್ಠಿತ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ (56) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾಗಿದ್ದಾರೆ. ತೆಂಕಿಲ ನಿವಾಸಿಯಾಗಿರುವ ಅವರು ಕಳೆದ 30 ವರ್ಷಗಳಿಂದ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಭಾನುವಾರ ಹಠಾತ್ತನೇ ಅಸೌಖ್ಯಕ್ಕೊಳಗಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.  

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ ನಿಧನ Read More »

ಮಾರ್ನಡ್ಕ ಮಹಾಬಲ ರೈ ನಿಧನ

ಪುತ್ತೂರು : ಬನ್ನೂರು ಮಾರ್ನಡ್ಕ ನಿವಾಸಿ ಮಹಾಬಲ ರೈ (80) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ. ಮಹಾಬಲ ರೈಯವರ ಈ ಹಿಂದೆ ಲಾರಿ ಮಾಲಕರಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾರ್ನಡ್ಕ ಮಹಾಬಲ ರೈ ನಿಧನ Read More »

ದಿಲ್ದೀಪ್ ರೈ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪೇರಾಲು ನಿವಾಸಿ ದಿಲ್ದೀಪ್‍ ರೈ ಪೆರಾಲು (60) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿನಿಧನರಾದರು. ಮೃತರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದಿಲ್ದೀಪ್ ರೈ ನಿಧನ Read More »

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ಬುಧವಾರ ನಿಧನರಾದರು. ಆರ್ಯಾಪು ಗ್ರಾಮದ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರರಾಗಿದ್ದು, ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದರು. ಸೀತಾರಾಮ ಶೆಟ್ಟಿ ಅವರು ಎಂದಿನಂತೆ ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹಠಾತ್ತನೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ Read More »

ಕರ್ಕುಂಜ ನಿವಾಸಿ ಹರೀಶ್ ನಿಧನ

ಪುತ್ತೂರು: ಪುತ್ತೂರು ತಾಲೂಕು ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಕಳೆದ 25 ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಕೆಲಸ ನಿರ್ಯವಹಿಸುತ್ತಿದ್ದು, ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಕರ್ಕುಂಜ ನಿವಾಸಿ ಹರೀಶ್ ನಿಧನ Read More »

ಸಾಮೆತ್ತಡ್ಕ ನಿವಾಸಿ ವಾಲ್ಟರ್ ಲೋಬೋ ನಿಧನ

ಪುತ್ತೂರು: ಸಾಮೆತ್ತಡ್ಕ ನಿವಾಸಿ ರಿಕ್ಷಾ ಚಾಲಕ ವಾಲ್ಟರ್ ಲೋಬೋ (52) ಅನಾರೋಗ್ಯದಿಂದ ಆ.15 ಮಂಗಳವಾರ ನಿಧನರಾಗಿದ್ದಾರೆ. ದಿ.ಫೆಲಿಕ್ಸ್‌ ಲಿಗೋರಿ ಲೋಬೊ ಹಾಗೂ ಲೂಸಿ ಲೋಬೊರವರ ಪುತ್ರರಾಗಿದ್ದು, ಸಾಮೆತ್ತಡ್ಕ ಕ್ಯೂನಲ್ಲಿ ಬಾಡಿಗೆ ಮಾಡುತ್ತಿದ್ದರು.  ಮೃತ ವಾಲ್ಟರ್ ರವರು ಮಾಯಿದೆ ದೇವುಸ್ ಚರ್ಚ್ ನ ಕ್ರಿಸ್ಟೋಫರ್ ಅಸೋಸಿಯೇಶನ್ ಹಾಗೂ ಕಥೋಲಿಕ್ ಸಭಾದ ಸದಸ್ಯರಾಗಿದ್ದರು. ಮೃತರು ತಾಯಿ, ಪತ್ನಿ, ಪುತ್ರ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ವಾಲ್ಟರ್ ಲೋಬೋ ನಿಧನ Read More »

ಉಸಿರಾಟದ ತೊಂದರೆಯಿಂದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ಬೆಳ್ತಂಗಡಿ: ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ನಡೆದಿದೆ. ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂಬವರು ಆ.13ರಂದು ಮೃತಪಟ್ಟ ಯುವತಿ. ಮಂಗಳೂರಿನ ಕಾಲೇಜೊಂದರ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದರು. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಉಸಿರಾಟದ ತೊಂದರೆಯಿಂದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು Read More »

ಕೇಪು ಗ್ರಾ.ಪಂ. ಮಾಜಿ  ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ

ವಿಟ್ಲ: ಕೇಪು ಗ್ರಾಮದ ಆಲಂಗಾರು ನಿವಾಸಿ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್(66) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಅವರು ಪಡಿಬಾಗಿಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷರಾಗಿದ್ದರು. ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಸ್ಥಾಪಕ ಅಧ್ಯಕ್ಷರಾಗಿ, ಜನಸಂಘ ಸ್ವಯಂಸೇವಕರಾಗಿ, ಕೇಪು ಗ್ರಾಮದಲ್ಲಿ ಬಿಜೆಪಿಯನ್ನು ಸಂಘಟಿಸಿ, ಕೇಪು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಸೀಮೆ

ಕೇಪು ಗ್ರಾ.ಪಂ. ಮಾಜಿ  ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ Read More »

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ

ಬೆಂಗಳೂರು: ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಇಂದು (ಬುಧವಾರ) ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಪೂರ್ವಾಹ್ನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ್‌ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ.

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ Read More »

error: Content is protected !!
Scroll to Top