ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ನಿಧನ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ (82) ಭಾನುವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪುರಸಭೆ ಸದಸ್ಯರಾಗಿ, ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಕ್ರೀಡಾಪಟುವೂ ಆಗಿದ್ದ ಇವರು, ಕ್ರೀಡಾ ಪ್ರೋತ್ಸಾಹಕನೂ ಹೌದು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅವಿಸ್ಮರಣೀಯ ಕಾರ್ಯ […]