ನಿಧನ

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಪುತ್ತೂರು: ದೈವ ನರ್ತನದ ವೇಳೆ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 30ರಂದು ನಡೆದಿದೆ. ಕಾಣಿಯೂರು ಗ್ರಾಮ ಪಂಚಾಯತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದ ದೈವ ನರ್ತಕ ಕಾಂತು ಅಜಿಲ ಮಾಲೆಂಗ್ರಿ ಮೃತಪಟ್ಟವರು. ಇವರು ಮೂಲಂಗೀರಿ ನಿವಾಸಿ. ಕಾಂತು ಅಜಿಲ ಅವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ. 30ರಂದು ಕಾಣಿಯೂರು ಗ್ರಾಮದ ಇಡ್ಯಡ್ಕದಲ್ಲಿ […]

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ

ಕೊಚ್ಚಿ : ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಹಾಗೂ ಮಾಜಿ ಸಂಸದ ಇನೊಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನೊಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಭಾನುವಾರ ರಾತ್ರಿ ಇನೊಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್‌ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ. ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನೊಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ Read More »

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ವಾರಣಾಸಿ : ಭೋಜ್‌ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಭೋಜ್‌ಪುರಿ ಚಿತ್ರರಂಗದ ಡ್ರೀಮ್ ಗರ್ಲ್‌ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್‌ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ ಕೊಠಡಿ ಬಾಗಿಲು ತೆರೆದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಮೃತದೇಹ ಪತ್ತೆಯಾಗುವುದಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಭೋಜ್‌ಪುರಿಯ ಹಿಲೋರೆ ಮಾರೆ ಹಾಡಿಗೆ ರೀಲ್ಸ್ ಮಾಡಿ

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಕಿಶೋರ್ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ದಿ. ಪೂವಣ್ಣಿ ಗೌಡರ ಪುತ್ರ, ಕೃಷಿಕ ಕಿಶೋರ್ (38) ಮಾ. 25ರಂದು ಬೆಳಿಗ್ಗೆ ಅಸೌಖ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಕಿಶೋರ್ ನಿಧನ Read More »

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ ಸೋಮಶೇಖರ ರೆಡ್ಡಿ (45) ಮತ್ತು ಶಾಂತ (40) ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ Read More »

ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ ನಿಧನ

ಅಮೇರಿಕಾ : ಕಂಪ್ಯೂಟರ್ ವಿಜ್ಞಾನ ಜಗತ್ತಿನ ದಾರ್ಶನಿಕ ಮತ್ತು ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ (94) ನಿಧನರಾಗಿದ್ದಾರೆ.ಇವರ ಸಾವು ತಂತ್ರಜ್ಞಾನ ಕ್ಷೇತ್ರದ ಮೇಲೆ ಅಪಾರ ಪ್ರಭಾವವನ್ನು ಉಂಟು ಮಾಡಲಿದೆ. ಕಂಪ್ಯೂಟರ್ ಚಿಪ್ ಉದ್ಯಮದ ಪ್ರವರ್ತಕರಾಗಿ, ಅವರ ಕೆಲಸವು ಆಧುನಿಕ ತಂತ್ರಜ್ಞಾನದ ಪ್ರಗತಿಯ ಮೇಲೆ ಆಳವಾದ ಪ್ರಭಾವವನ್ನು ಬೀರಿದೆ. ಗಾರ್ಡನ್ ಮೂರ್ ತನ್ನ ನಾಮಸೂಚಕ ಸಿದ್ಧಾಂತಕ್ಕೆ ಹೆಸರುವಾಸಿಯಾಗಿದ್ದರು, ಮೂರ್ ಕಾನೂನು, ಇದು ದಶಕಗಳಿಂದ ಕಂಪ್ಯೂಟರ್ ಚಿಪ್‌ಗಳ ಅಭಿವೃದ್ಧಿಯನ್ನು ರೂಪಿಸಿದೆ. ಮೈಕ್ರೊಪ್ರೊಸೆಸರ್‌ನಲ್ಲಿನ ಟ್ರಾನ್ಸಿಸ್ಟರ್‌ಗಳ ಸಂಖ್ಯೆಯು ಸರಿಸುಮಾರು ಪ್ರತಿ ಎರಡು

ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ ನಿಧನ Read More »

ರಾಧಾಕೃಷ್ಣ ರಾವ್ ನಿಧನ

ಪುತ್ತೂರು: ಕೊಂಬೆಟ್ಟು ನಿವಾಸಿ ರಾಧಾಕೃಷ್ಣ ರಾವ್ (61) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಸಹೋದರು, ಸಹೋದರಿಯರನ್ನು ಅಗಲಿದ್ದಾರೆ.

ರಾಧಾಕೃಷ್ಣ ರಾವ್ ನಿಧನ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ Read More »

error: Content is protected !!
Scroll to Top