ನಿಧನ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರಂದು ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ಎಂಬಲ್ಲಿ ಸಂಭವಿಸಿದೆ. ರೆನೀಶ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರ ತಮ್ಮ ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯಲ್ಲಿ ರೆನೀಶನು ಒಬ್ಬರೇ ವಾಸವಾಗಿದ್ದರು. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಮಾ. 30 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದು, ರಾತ್ರಿ ಸುಮಾರು 12.00 ಗಂಟೆಯ ಸಮಯಕ್ಕೆ ಚಿಕ್ಕಪ್ಪನ ಮಗ ಜಿತಿನ್ ಗೆ ದೂರವಾಣಿ ಮೂಲಕ, ನನ್ನ ಮರಣಕ್ಕೆ ನಾನೆ […]

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು

ಬೆಂಗಳೂರು : ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಮಾ.26ರಂದು ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದ 8 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ. ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸಮಯ್ ಶುಕ್ರವಾರದವರೆಗೆ ಒಬ್ಬರ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗೊಂಡಿದ್ದ 8 ಕಾರ್ಮಿಕರಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು Read More »

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾ. 31 ರಂದು ಸಂಭವಿಸಿದೆ. ರೆನೀಶ್ (27) ಎಂಬಾತನೇ ಮೃತ ಯುವಕ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಇವನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ.

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ನಡೆದಿದೆ.ದೇವೇಂದ್ರ (48), ನಿರ್ಮಲಾ(48), ಚೈತ್ರಾ(09), ಚೈತನ್ಯ (09), ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಮೂಲತಃ ಮೈಸೂರಿನ ವಿಜಯನಗರ ಮೂಲದವರಾಗಿದ್ದರು.ಕರುಣಾ ಲಾಡ್ಜ್‌ನಲ್ಲಿ ಘಟನೆ ನಡೆದಿದ್ದು, ಮೈಸೂರು ಮೂಲದ ದಂಪತಿ ಮತ್ತು ಅವಳಿ ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್‌ ನೋಟ್‌ ಸಿಕ್ಕಿದ್ದು, ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ,

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಗೆ ಕಾರಣ : ಸಾಲಬಾಧೆ Read More »

ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ

ಮೈಸೂರಿನ ವಾಣಿವಿಲಾಸದ ಕುಟುಂಬ ಮಂಗಳೂರು : ನಗರದ ಕೆ.ಎಸ್‌. ರಾವ್‌ ರಸ್ತೆಯ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿವಿಲಾಸದವರೆಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿಯೇ ಡೆತ್‌ನೋಟ್‌ ಪತ್ತೆಯಾಗಿದೆ. ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು. ಬಂದರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ಮಂಗಳೂರಿನ

ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ Read More »

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು

ಮಂಗಳೂರು : ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಮಾ.30 ರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಇನ್ನು ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು Read More »

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಪುತ್ತೂರು: ದೈವ ನರ್ತನದ ವೇಳೆ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 30ರಂದು ನಡೆದಿದೆ. ಕಾಣಿಯೂರು ಗ್ರಾಮ ಪಂಚಾಯತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದ ದೈವ ನರ್ತಕ ಕಾಂತು ಅಜಿಲ ಮಾಲೆಂಗ್ರಿ ಮೃತಪಟ್ಟವರು. ಇವರು ಮೂಲಂಗೀರಿ ನಿವಾಸಿ. ಕಾಂತು ಅಜಿಲ ಅವರು ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ. 30ರಂದು ಕಾಣಿಯೂರು ಗ್ರಾಮದ ಇಡ್ಯಡ್ಕದಲ್ಲಿ

ದೋಳ್ಪಾಡಿ: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ

ಕೊಚ್ಚಿ : ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಹಾಗೂ ಮಾಜಿ ಸಂಸದ ಇನೊಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನೊಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಭಾನುವಾರ ರಾತ್ರಿ ಇನೊಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್‌ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ. ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನೊಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ Read More »

error: Content is protected !!
Scroll to Top