ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು
ಉಡುಪಿ: ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಲೇಖಿರಾಜ್ (29) ಎನ್ನಲಾಗಿದೆ. ಮೃತರು ಲೇಖಿರಾಜ್ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ತಿಳಿದು ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ನಿಖರ ಕಾರಣ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ. […]
ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು Read More »