ನಿಧನ

ಬೊಳಿಂಜಡ್ಕ ವೆಂಕಟ ಸುಬ್ಬರಾವ್ ನಿಧನ

ಮಾಣಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತ, ಮಾಣಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಮಾರ್ಗದರ್ಶಕರೂ, ಸಹಕಾರಿಯೂ ಆಗಿದ್ದ ಬೊಳಿಂಜಡ್ಕ ವೆಂಕಟ ಸುಬ್ಬರಾವ್ ಮಂಗಳವಾರ ನಿಧನರಾದರು. ದಿ। ಬೊಳಿಂಜಡ್ಕ ಕೃಷ್ಣಭಟ್ಟರ ಪುತ್ರರಾದ ಮೃತರು ಪತ್ನಿ, ಮಗ, ಸೊಸೆ, ಮಗಳು, ಅಳಿಯ, ಸಹೋದರರು, ಸಹೋದರಿ, ಮೊಮ್ಮಕ್ಕಳು, ಕುಟುಂಬದವರು ಹಾಗೂ ಅಪಾರ ಅಭಿಮಾನಿಗಳು, ಬಂಧುಮಿತ್ರರನ್ನು ಅಗಲಿದ್ದಾರೆ.

ಬೊಳಿಂಜಡ್ಕ ವೆಂಕಟ ಸುಬ್ಬರಾವ್ ನಿಧನ Read More »

ಡೆಂಗ್ಯೂ ಜ್ವರಕ್ಕೆ ಪೆರುವಾಯಿಯ ಯುವತಿ ಆಶಾ ಬಲಿ

ವಿಟ್ಲ: ಡೆಂಗ್ಯೂ ಜ್ವರದಿಂದ  ಯುವತಿ ಮೃತಪಟ್ಟ ಘಟನೆ  ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25 ) ಮೃತಪಟ್ಟ ಯುವತಿ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸೆ. 12 ರಂದು ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರಕ್ಕೆ ಪೆರುವಾಯಿಯ ಯುವತಿ ಆಶಾ ಬಲಿ Read More »

ಎನ್.‌ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಪಿಐ(ಎಂ)

ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ, ಹಿರಿಯ ಜಾತ್ಯಾತೀತ ಪ್ರಗತಿಪರ ಚಿಂತಕರೂ ಆಗಿದ್ದ ಎನ್. ಸುಧಾಕರ ಶೆಟ್ಟಿ ಅವರ ನಿಧನಕ್ಕೆ ಸಿಪಿಐ(ಎಂ) ಪುತ್ತೂರು ತಾಲೂಕು ಸಮಿತಿ ಸಂತಾಪ ಸೂಚಿಸಿ ಶ್ರದ್ದಾಂಜಲಿ ಅರ್ಪಿಸಿದೆ. ಸಿಪಿಐ(ಎಂ) ಪುತ್ತೂರು ತಾಲೂಕು ಕಾರ್ಯದರ್ಶಿ ಪಿ.ಕೆ. ಸತೀಶನ್ ಮಾತನಾಡಿ, ಸುಧಾಕರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಮುಖಂಡ ಎನ್ನುವುದಕ್ಕಿಂತ ಹೆಚ್ಚು, ಪ್ರಗತಿಪರ ಪ್ರಜಾಪ್ರಭುತ್ವ, ಜಾತ್ಯಾತೀತ ನಾಯಕರಾಗಿದ್ದರು. ಅವರ ಅಗಲಿಕೆ ಜಾತ್ಯಾತೀತ ಶಕ್ತಿಗೆ ಅಪಾರ ನಷ್ಟ ಉಂಟು ಮಾಡಿದೆ ಎಂದು ಹೇಳಿದರು.

ಎನ್.‌ಸುಧಾಕರ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಪಿಐ(ಎಂ) Read More »

ಹಿರಿಯ ನಾಟಿ ವೈದ್ಯೆ ಲಕ್ಷ್ಮೀ ಪೆರಿಯತ್ತೋಡಿ ನಿಧನ

ಪುತ್ತೂರು: ಹಿರಿಯ ನಾಟಿ ವೈದ್ಯೆ ಲಕ್ಷ್ಮೀ ಪೆರಿಯತ್ತೋಡಿ (95 ವರ್ಷ) ಅವರು ಸೆ. 10ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ಹಲವಾರು ಖಾಯಿಲೆಗಳಿಗೆ ನಾಟಿ ಚಿಕಿತ್ಸೆ ನೀಡುತ್ತಿದ್ದರು. ಮೃತರು ನಾಲ್ಕು ಹೆಣ್ಣು ಮಕ್ಕಳು, ನಾಲ್ಕು ಗಂಡು ಮಕ್ಕಳನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಹಿರಿಯ ನಾಟಿ ವೈದ್ಯೆ ಲಕ್ಷ್ಮೀ ಪೆರಿಯತ್ತೋಡಿ ನಿಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ (82) ಭಾನುವಾರ ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪುರಸಭೆ ಸದಸ್ಯರಾಗಿ, ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಕ್ರೀಡಾಪಟುವೂ ಆಗಿದ್ದ ಇವರು, ಕ್ರೀಡಾ ಪ್ರೋತ್ಸಾಹಕನೂ ಹೌದು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಅವಿಸ್ಮರಣೀಯ ಕಾರ್ಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ನಿಧನ Read More »

ರೇವತಿ ಬಾಳಪ್ಪ ಪೂಜಾರಿ ತಿಂಗಳಾಡಿ – ನಿಧನ

ಪುತ್ತೂರು: ತಾಲೂಕಿನ ತಿಂಗಳಾಡಿ ಕನ್ನಡಮೂಲೆಯ ದಿ. ಬಾಳಪ್ಪ ಪೂಜಾರಿ ಅವರ ಧರ್ಮಪತ್ನಿ ರೇವತಿ  ಬಾಳಪ್ಪ ಪೂಜಾರಿ (76) ಅವರು ಸೆ.7 ರಂದು ಸ್ವಗೃಹದಲ್ಲಿ ನಿಧನರಾದರು. ಮನೆಯಲ್ಲಿದ್ದ ಸಂದರ್ಭ ಹೃದಯಾಘಾತ ಉಂಟಾಗಿ ಅವರು ನಿಧನರಾದರು. ಮೃತರು ನಾಲ್ವರು ಪುತ್ರರು, ಒಬ್ಬರು ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ರೇವತಿ ಬಾಳಪ್ಪ ಪೂಜಾರಿ ತಿಂಗಳಾಡಿ – ನಿಧನ Read More »

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ

ವಿಟ್ಲ : ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ. ಮಂಜು ವಿಟ್ಲರವರು ಧಾರ್ಮಿಕ,ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪುತ್ರಿ, ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ Read More »

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ ನಿಧನ

ಪುತ್ತೂರು: ಮರೀಲ್ ನಲ್ಲಿರುವ ಪ್ರತಿಷ್ಠಿತ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ (56) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾಗಿದ್ದಾರೆ. ತೆಂಕಿಲ ನಿವಾಸಿಯಾಗಿರುವ ಅವರು ಕಳೆದ 30 ವರ್ಷಗಳಿಂದ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಭಾನುವಾರ ಹಠಾತ್ತನೇ ಅಸೌಖ್ಯಕ್ಕೊಳಗಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.  

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಉದ್ಯೋಗಿ ಕೇಶವ ನಿಧನ Read More »

ಮಾರ್ನಡ್ಕ ಮಹಾಬಲ ರೈ ನಿಧನ

ಪುತ್ತೂರು : ಬನ್ನೂರು ಮಾರ್ನಡ್ಕ ನಿವಾಸಿ ಮಹಾಬಲ ರೈ (80) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ. ಮಹಾಬಲ ರೈಯವರ ಈ ಹಿಂದೆ ಲಾರಿ ಮಾಲಕರಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾರ್ನಡ್ಕ ಮಹಾಬಲ ರೈ ನಿಧನ Read More »

ದಿಲ್ದೀಪ್ ರೈ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪೇರಾಲು ನಿವಾಸಿ ದಿಲ್ದೀಪ್‍ ರೈ ಪೆರಾಲು (60) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿನಿಧನರಾದರು. ಮೃತರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದಿಲ್ದೀಪ್ ರೈ ನಿಧನ Read More »

error: Content is protected !!
Scroll to Top