ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ
ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ಬುಧವಾರ ನಿಧನರಾದರು. ಆರ್ಯಾಪು ಗ್ರಾಮದ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರರಾಗಿದ್ದು, ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದರು. ಸೀತಾರಾಮ ಶೆಟ್ಟಿ ಅವರು ಎಂದಿನಂತೆ ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹಠಾತ್ತನೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ Read More »










