ನಿಧನ

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು

ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದ ಉದ್ಯಮಿ ಮಂಗಳೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲದ ಅಯ್ಯಪ್ಪ ವ್ರತಧಾರಿಯೋರ್ವರು ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದಾಗ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ವ್ಯಕ್ತಿ. ಚಂದ್ರಹಾಸ್ ಅವರು ಅಯ್ಯಪ್ಪ ವ್ರತಾಧಾರಿಗಳ ಜೊತೆ ಶನಿವಾರ ಅರ್ಕುಳ ತುಪ್ಪೆಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಗ್ಗೆ ಚಂದ್ರಹಾಸ್ ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ […]

ಶಬರಿಮಲೆಯಲ್ಲಿ ಹೃದಯಾಘಾತದಿಂದ ಉಳ್ಳಾಲದ ಉದ್ಯಮಿ ಸಾವು Read More »

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು

ಪ್ರತಿಭಟನೆಯನ್ನು ನಿರ್ದಯವಾಗಿ ದಮನಿಸುತ್ತಿರುವ ಇರಾನ್‌ ಸರ್ಕಾರ ಟೆಹ್ರಾನ್‌: ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 13 ದಿನಕ್ಕೆ ಕಾಲಿಟ್ಟಿದ್ದು, ಹಿಂಸಾಚಾರ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಸೂಚನೆ ಮೇರೆಗೆ ಭದ್ರತಾ ಪಡೆಗಳು ಹಲವು ಸ್ಥಳಗಳಲ್ಲಿ ಗುಂಡು ಹಾರಿಸಿದ್ದು, 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವೈದ್ಯರ ಮಾಹಿತಿ ಪ್ರಕಾರ, ರಾಜಧಾನಿ ಟೆಹ್ರಾನ್‌ನಲ್ಲಿರುವ 6 ಆಸ್ಪತ್ರೆಗಳಲ್ಲಿ ಕನಿಷ್ಠ 217 ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಟೆಹ್ರಾನ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ

ಇರಾನ್‌ನಲ್ಲಿ ನಾಗರಿಕ ದಂಗೆ : 200ಕ್ಕೂ ಹೆಚ್ಚು ಮಂದಿ ಸಾವು Read More »

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ

ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಅವಿರತ ಶ್ರಮಿಸಿದ್ದ ವಿಜ್ಞಾನಿ ಪುಣೆ : ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಪಶ್ಚಿಮ ಘಟ್ಟ ಸಂರಕ್ಷಣೆಗೆ ಅವರು ಆಳವಾದ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್‌ ನಿಧನ Read More »

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ

ಪುತ್ತೂರು: KSRTC ಯ ನಿವೃತ್ತ ನೌಕರ ಪರಮೇಶ್ವರ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿ. ದ ಮಂಗಳೂರು ವಿಭಾಗದಲ್ಲಿ 20 ವರ್ಷಗಳ ಕಾಲ ನಿರ್ವಾಹಕರಾಗಿ, ಪುತ್ತೂರು ಬಸ್ಸು ನಿಲ್ದಾಣದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ ನಂತರ ಪುತ್ತೂರು ಘಟಕದ ಸಹಾಯಕ ಸಂಚಾರ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸಂಸ್ಥೆಯಲ್ಲಿ ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಇವರು 2023 ರ ಮಾರ್ಚ್‌ನಲ್ಲಿ ವೃತ್ತಿಯಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ,

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಹೊಸಕೋಟೆ: ವ್ಯಕ್ತಿಯ ಮೃತ ದೇಹ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಮಂಜುನಾಥ್ (44) ಎಂಬವರೇ ಮೃತ ವ್ಯಕ್ತಿ. ಮಹಿಳೆಯೊಬ್ಬರು ನಾಪತ್ತೆಯಾದ ಪ್ರಕರಣದಲ್ಲಿ ಪೊಲೀಸರು ಇವರಿಗೆ ಕಿರುಕುಳ ನೀಡಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಅವರ ಶವ ತೋಟದ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಶ್ವಿನಿ ಎಂಬ ಮಹಿಳೆ ತೋಟದ ಕೆಲಸಕ್ಕೆ ಬರುತ್ತಿದ್ದು, ಅವರು ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಪೊಲೀಸರು ಮಂಜುನಾಥ ಅವರನ್ನು ವಿಚಾರಣೆ ನಡೆಸಿದ್ದರು. ಮಹಿಳೆಯ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕೇಂದ್ರದ ಮಾಜಿ ಸಚಿವ ಸುರೇಶ್‌ ಕಲ್ಮಾಡಿ ನಿಧನ

ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಇಂದು ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾಣೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸುರೇಶ್‌ ಕಲ್ಮಾಡಿ ಮೂಲತಃ ಉಡುಪಿ ಸಮೀಪ ಕಲ್ಮಾಡಿಯವರು.

ಕೇಂದ್ರದ ಮಾಜಿ ಸಚಿವ ಸುರೇಶ್‌ ಕಲ್ಮಾಡಿ ನಿಧನ Read More »

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಓಡಿಲಾನಾಳ ಗ್ರಾಮದ ಕಟ್ಟಡಬೈಲು ನಿವಾಸಿ ವ್ಯಕ್ತಿಯೋರ್ವರು ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮಂಜುನಾಥ ನಾಯಕ್(42) ಎಂದು ಗುರುತಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಯ ಸಲುವಾಗಿ ಬೆಳ್ತಂಗಡಿಯ ‌ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ ರು ತಂದೆ, ತಾಯಿ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ: ಯುವಕನೊಬ್ಬ ಮನೆಯ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಎಂಬವರೇ ಮೃತ ದುರ್ದೈವಿ. ಪ್ರವೀಣ್ ಅವರು ಊಟ ಮುಗಿಸಿ ಮಹಡಿಯ ಮೇಲೆ ತೆರಳಿ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕೆಳಕ್ಕೆ ಅಯ ತಪ್ಪಿ ಬಿದ್ದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ತಕ್ಷಣವೇ ಅವರನ್ನು ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದರೆ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾದ ಕಾರಣ ಅದಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ. ಬಂಟ್ವಾಳ ಪೊಲೀಸರು ಪ್ರಕರಣ

ಮಹಡಿಯಿಂದ ಬಿದ್ದು ಯುವಕ ಸಾವು Read More »

ಬೇರ್ಪಟ್ಟ ತಂದೆ – ತಾಯಿ: ನೊಂದ ಬಾಲಕಿ ಆತ್ಮಹತ್ಯೆ

ಬೆಂಗಳೂರು: ಅಪ್ಪ ಮತ್ತು ಅಮ್ಮ ಜೊತೆಯಾಗಿಲ್ಲ, ಬೇರ್ಪಟ್ಟಿದ್ದಾರೆ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಮೃತಳನ್ನು ಲೇಖನಾ (17) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯಲ್ಲಿ ಫೇಲ್ ಆಗಿದ್ದ ಲೋಕ ನಾ ತನ್ನ ತಾಖಿಯ ಜೊತೆ ವಾಸಿಸುತ್ತಿದ್ದಳು. ಕೌಟುಂಬಿಕ ಕಲಹದಿಂದ ತಂದೆ ಮತ್ತು ತಾಯಿ ಬೇರೆ ಬೇರೆ ವಾಸ ಮಾಡುತ್ತಿದ್ದರು. ಇದರಿಂದ ಬಾಲಕಿ ಮನ ನೊಂದಿದ್ದಳು. ಲೇಖನಾ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು, ನನಗೆ ತಂದೆ – ತಾಯಿಯ ಪ್ರೀತಿ ಸಿಗುತ್ತಿಲ್ಲ. ನಾನು

ಬೇರ್ಪಟ್ಟ ತಂದೆ – ತಾಯಿ: ನೊಂದ ಬಾಲಕಿ ಆತ್ಮಹತ್ಯೆ Read More »

ಅನಾರೋಗ್ಯದಿಂದ ಹೂವಿನ ವ್ಯಾಪಾರಿ ನಿಧನ

ಪುತ್ತೂರು: ಉಳ್ಳಾಲ್ತಿ ಫ್ಲವರ್ ಸ್ಟಾಲ್ ಮಾಲಕ, ಪಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಡಿ. 31 ರಂದು ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಹೂವಿನ ವ್ಯಾಪಾರಿ ನಿಧನ Read More »

error: Content is protected !!
Scroll to Top