ಶೈಕ್ಷಣಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ ಮೇ.೨೭ ರಂದು ನಡೆಯಿತು.  J.C ತರಬೇತುದಾರರು, ರಾಮ ಕುಂಜ ಪ್ರೌಢಶಾಲೆಯ  ಮುಖ್ಯೋಪಾಧ್ಯಾಯ ಸತೀಶ್ ಭಟ್, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಮಾರಸ್ವಾಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂಕೀರ್ಥ್  ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ, ಡಾ. ದಿನೇಶ ಪಿ .ಟಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಎಚ್ ಆರ್  ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ   ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ Read More »

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ

ಆರೋಗ್ಯದಲ್ಲಿ ವ್ಯತ್ಯಾಸವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ಸಲಹೆ ಬೆಂಗಳೂರು: ರಾಜ್ಯದಲ್ಲಿ ಕೊರೊನ ಪ್ರಕರಣಗೂ ವರದಿಯಾಗುತ್ತಿದ್ದರೂ ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ Read More »

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ

ಬೆಳ್ಳಾರೆ : ವಿದ್ಯಾರ್ಥಿ ಜೀವನದಲ್ಲಿ ಉದ್ಯೋಗಕ್ಕೆ ಪೂರಕವಾಗಿ ಸುತ್ತಮುತ್ತಲಿನ ಆಗು ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಆ ಗಮನ ಹರಿಸುವಿಕೆಯ ಚಟುವಟಿಕೆಯಲ್ಲಿ ದಿನಪತ್ರಿಕೆ ಓದುವುದು ಮುಖ್ಯವಾದದು ಎಂದು ವಿಶ್ರಾಂತ ಪ್ರಾಂಶುಪಾಲ‌ ಬಿ.ವಿ.ಸೂರ್ಯನಾರಾಯಣ ಹೇಳಿದರು. ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ 24 ರಂದು ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಉದ್ಯೋಗ ಸಂಬಂಧಿತ ಅವಕಾಶಗಳ ಬಗ್ಗೆ ದಿನಪತ್ರಿಕೆಗಳು

ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ‌ ದರ್ಜೆ ಕಾಲೇಜು | ಶಿಕ್ಷಣದ ನಂತರದ ಸವಾಲುಗಳು ಮತ್ತು ಅವಕಾಶಗಳು ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ | ದಿನಪತ್ರಿಕೆ ಓದುವುದನ್ನು ತಪ್ಪದೇ ರೂಢಿಸಿಕೊಳ್ಳಿ : ಬಿ.ವಿ.ಸೂರ್ಯನಾರಾಯಣ Read More »

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು  ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ Read More »

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಗೇರುಕಟ್ಟೆ : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಕಳಿಯ ಸಹಯೋಗದಲ್ಲಿ  ಗೇರುಕಟ್ಟೆ ಅರಿವು ಗ್ರಂಥಾಲಯ ಕೇಂದ್ರದಲ್ಲಿ ಐದು ದಿನಗಳ  ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದೆ.  ದಿನಪತ್ರಿಕೆ ವಾಚನ, ಪುಸ್ತಕ ಓದುವುದು, ನೀತಿ ಕಥೆಗಳು, ಕವನ ರಚನೆ, ಪತ್ರ ಬರೆಯುವುದು, ಭಾಷಣಕಲೆ, ಊರಿನ ಇತಿಹಾಸ ತಿಳಿಯುವುದು ಮತ್ತು ವ್ಯಕ್ತಿತ್ವ ವಿಕಸನ ಸಂಬಂಧಿ ಚಟುವಟಿಕೆಗಳನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಡುತ್ತಿದ್ದಾರೆ. ಶಾಲಾ ರಜಾ ದಿನಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿಸುವ ಈ ಶಿಬಿರವು ಗ್ರಾಮೀಣ ಪ್ರದೇಶದ

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ. ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ. ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ. ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಆದಾಯ ತೆರಿಗೆ ಕಛೇರಿಯ ಟ್ಯಾಕ್ಸ್ ಅಸಿಸ್ಟೆಂಟ್ ತೇಜಸ್ವಿ ಮಕಿನ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಮಾರ್ಗಸೂಚಿಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ರಹಸ್ಯವು

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’

ಪುತ್ತೂರು: ಯೋಗ, ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು. ಅವರು ಶುಕ್ರವಾರ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಮೂರು ದಿನಗಳ ಯೋಗ ಶಿಬಿರ ’ಮೇಧಾ ಯೋಗ’ ದಲ್ಲಿ 

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್ Read More »

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ

ಪುತ್ತೂರು : ನಗರ ಸಭೆ ವತಿಯಿಂದ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಸಂಯೋಜಕತ್ವದಲ್ಲಿ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮ ಬೊಳುವಾರಿನ ಪ್ರಗತಿ ಆಸ್ಪತ್ರೆಯ ಅಂಗ ಸಂಸ್ಥೆಯಾದ ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ನಡೆಯಿತು. ಪ್ರಾಧ್ಯಪಕರಾದ ರಾಜೇಶ್ ಬೆಜ್ಜಂಗಳ ಅವರು ಸ್ವಚ್ಛತೆ ಕುರಿತಾಗಿ ಉಪನ್ಯಾಸ ನೀಡಿದರು. ಸಂಸ್ಥೆಯ ಆಡಳಿತಧಿಕಾರಿ ಪ್ರಿತಾ ಹೆಗ್ಡೆ ಸಭಾಧ್ಯಕ್ಷತೆ ವಹಿಸಿದ್ದರು.  ಶಿಕ್ಷಣ ಸಂಪನ್ಮೂಲ ಕೇಂದ್ರ(ರಿ.) ಪುತ್ತೂರು ಇದರ ಅಧ್ಯಕ್ಷ ರಫೀಕ್ ಮತ್ತು

ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ Read More »

ಕರ್ನಲ್‌ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿಯಾಗಿದೆ ಎಂದು ಸುದ್ದಿ ಹಬ್ಬಿಸಿದ ಕಿಡಿಗೇಡಿ

ಬೆಳಗಾವಿಯ ಬಾಗೇವಾಡಿಯಲ್ಲಿರುವ ಮನೆಗೆ ಪೊಲೀಸರ ಬಿಗು ಭದ್ರತೆ ಬೆಳಗಾವಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿದ್ದ ಸೇನೆಯ ಉನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಗಂಡನ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಸ್ಪಷ್ಟನೆ ಕೊಟ್ಟಿದ್ದು, ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಆಸ್ಪದ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಅನೀಸ್ ಉದ್ದೀನ್ ಎಂಬ

ಕರ್ನಲ್‌ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿಯಾಗಿದೆ ಎಂದು ಸುದ್ದಿ ಹಬ್ಬಿಸಿದ ಕಿಡಿಗೇಡಿ Read More »

error: Content is protected !!
Scroll to Top