ಶೈಕ್ಷಣಿಕ

ಶ್ರೇಷ್ಠ ಶೆಟ್ಟಿ ಅವರಿಗೆ CBSC ಹತ್ತನೇ ತರಗತಿ ಪರೀಕ್ಷೆಯಲ್ಲಿ 96.20% ಅಂಕ

ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿನಿ ಶ್ರೇಷ್ಠ ಶೆಟ್ಟಿ ಎಣ್ಮೂರುಗುತ್ತು ಅವರು ಸಿಬಿಎಸ್‌ಸಿ‌ ಹತ್ತನೇ ತರಗತಿ ಪರೀಕ್ಷೆಯಲ್ಲಿ 96.20% ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿ, ಕೀರ್ತಿ ತಂದಿರುತ್ತಾರೆ. ಇವರು ಎಣ್ಮೂರುಗುತ್ತು ರಘುಪ್ರಸಾದ್ ‌ಶೆಟ್ಟಿ ಮತ್ತು ಭಾರತಿ ಶೆಟ್ಟಿ ದಂಪತಿ ಪುತ್ರಿ.

ಶ್ರೇಷ್ಠ ಶೆಟ್ಟಿ ಅವರಿಗೆ CBSC ಹತ್ತನೇ ತರಗತಿ ಪರೀಕ್ಷೆಯಲ್ಲಿ 96.20% ಅಂಕ Read More »

ಹಿಂದಿಗೆ ಗ್ರೇಡ್‌ ಬದಲು ಅಂಕ ನೀಡಲು ಹೈಕೋರ್ಟ್‌ ಆದೇಶ : ಸರ್ಕಾರಕ್ಕೆ ಮುಖಭಂಗ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್‌ ವ್ಯವಸ್ಥೆ ತರಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿ ತೃತೀಯ ಭಾಷೆಗಳಿಗೆ ಕೇವಲ ಗ್ರೇಡ್ ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ತೀವ್ರ ಮುಖಭಂಗವಾಗಿದೆ. ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ. ಇದು ಸರ್ಕಾರದ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು

ಹಿಂದಿಗೆ ಗ್ರೇಡ್‌ ಬದಲು ಅಂಕ ನೀಡಲು ಹೈಕೋರ್ಟ್‌ ಆದೇಶ : ಸರ್ಕಾರಕ್ಕೆ ಮುಖಭಂಗ Read More »

ಪತಂಜಲಿ ಯೋಗ ಶಾಖೆಯಲ್ಲಿ ಸೌರ ಯುಗಾದಿ ಆಚರಣೆ

ಪುತ್ತೂರು: ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ ಪಂಚಾಂಗ ಪಠಣ, ಭಜನಾ ಸಂಕೀರ್ತನೆ, ಧ್ಯಾನ, ಸೂರ್ಯ ನಮಸ್ಕಾರ ಅಮೃತ ಫಲಹಾರದೊಂದಿಗೆ ಸೌರ ಯುಗಾದಿಯನ್ನು ಆಚರಿಸಲಾಯಿತು. ಹಿರಿಯ ಯೋಗ ಬಂದು ಭಾರತಿ ಸೌರ ಯುಗಾದಿಯ ಬಗ್ಗೆ ಬೌದ್ಧಿಕ ನೀಡಿದರು. ಕೇಂದ್ರದ ಸಂಚಾಲಕ ವಿಜಯ, ಅಶೋಕ, ದಿವಾಕರ ಆಚಾರ್ಯ, ಸತೀಶ, ಶಿವಣ್ಣ, ಪದ್ಮಲತಾ, ಹರ್ಷಿತಾ ಮೊದಲಾದವರು ಭಾಗವಹಿಸಿದ್ದರು.

ಪತಂಜಲಿ ಯೋಗ ಶಾಖೆಯಲ್ಲಿ ಸೌರ ಯುಗಾದಿ ಆಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು : ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು . ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಉಮೇಶ್ ಮಲುವೇಲು ಅವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು‌. ಬಳಿಕ ಮಾತನಾಡಿದ ಅವರು, ದೇಶವು ಸುಗಮವಾಗಿ ಮುನ್ನಡೆಯಬೇಕಾದರೆ ಪೂರಕವಾದ ಕಾನೂನು ಚೌಕಟ್ಟು ಅಗತ್ಯ. ಸುಗಮ ಆಡಳಿತಕ್ಕೆ ಕಾನೂನು ವ್ಯವಸ್ಥಿತ ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರು ಪ್ರಧಾನ ಪಾತ್ರ ವಹಿಸಿದ್ದರು ಎಂದರು. ಶಾಲಾ ಸಂಚಾಲಕ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳು ಬೆಂಗಳೂರು: 2026 – 27ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 29ರಿಂದ ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್‌ 3 ರಿಂದ 21 ರವರೆಗೆ ದಸರಾ ರಜೆ ಹಾಗೂ 2027ರ ಏ.11ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಶಾಲೆಗಳ ಮೊದಲ ಅವಧಿ ಮೇ

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ Read More »

ಈ ವರ್ಷ ಅವಧಿಗಿಂತ ಮುಂಚೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ

ಇಂದು ಅಥವಾ ನಾಳೆ ಪ್ರಕಟವಾಗುವ ಸಾಧ್ಯತೆ ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಬಹುತೇಕ ಏಪ್ರಿಲ್ 14 ಅಥವಾ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಈ ವರ್ಷದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಸಿಬಿಎಸ್ಇ ಈ ಬಾರಿ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಪ್ರಕಟವಾಗುತ್ತಿದ್ದ ಫಲಿತಾಂಶವನ್ನು ಈ ಬಾರಿ ಏಪ್ರಿಲ್

ಈ ವರ್ಷ ಅವಧಿಗಿಂತ ಮುಂಚೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ Read More »

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪದವಿ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 ಸಂಪನ್ನಗೊಂಡಿತು. ಅಕ್ಷಯ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಭೆಗಳ ಅನಾವರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳೇ ಆಯೋಜಿಸಿದ ಸ್ಪರ್ಧೆಯ ಸದುಪಯೋಗ ಪಡೆದುಕೊಂಡು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭಹಾರೈಸಿದರು. ಕೃತ್ವ 2K26 ಇದರ ಸಂಯೋಜಕ ಗಂಧರ್ವ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ಕುರಿತಾಗಿ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತಾ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ್ ನಡುಬೈಲು

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ

ಅಲುಂಬುಂಡ: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ನಡೆಯಲಿರುವ ಸಾಪ್ತಾಹಿಕ ಬೇಸಿಗೆ ಶಿಬಿರವನ್ನು ಖ್ಯಾತ ಚಿತ್ರಕಲಾ ಶಿಕ್ಷಕ, ಸಾಹಿತಿ ಮತ್ತು ಕವಿಯೂ ಆಗಿರುವ ಭಾಸ್ಕರ್ ನೆಲ್ಯಾಡಿಯವರು ದೀಪ ಪ್ರಜ್ವಲಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಉದ್ಘಾಟಿಸಿದರು. ಬೇಸಿಗೆ ಶಿಬಿರವು ಬೀಜವನ್ನು ಮೊಳಕೆಯೊಡೆಯಲು ಸಹಕರಿಸುವ ಸಸಿ ಮಾಡಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಅವರು ವಿಶ್ಲೇಷಿಸಿದರು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶೈಕ್ಷಣಿಕ ಸೇವೆಯ ಜೊತೆಗೆ ವ್ಯಕ್ತಿತ್ವ ವಿಕಸನದ ಪುಣ್ಯಕಾರ್ಯವೂ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ Read More »

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ರದ್ದು ವಿರುದ್ಧ ಸಲ್ಲಿಸಿದ್ದ ಪಿಐಎಲ್‌ ವಜಾ

ಸರ್ಕಾರಿ ಆದೇಶ ಲಗತ್ತಿಸದಿರುವುದಕ್ಕೆ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ಬೆಂಗಳೂರು : ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಪಿಐಎಲ್‌ ಸಲ್ಲಿಸಿದವರಿಗೆ ಹಿನ್ನಡೆಯಾಗಿದೆ. ಬೆಂಗಳೂರಿನ ಎಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ರದ್ದು ವಿರುದ್ಧ ಸಲ್ಲಿಸಿದ್ದ ಪಿಐಎಲ್‌ ವಜಾ Read More »

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಉಪಚುನಾವಣೆ ಮತದಾನ ಮುಕ್ತಾಯಗೊಂಡ ಕೂಡಲೇ ಪಿಯು ರಿಸಲ್ಟ್‌ ಘೋಷಣೆ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶ ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

error: Content is protected !!
Scroll to Top