ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ
ಪುತ್ತೂರು : ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ’ಪ್ರತಿಭಾ ಪುರಸ್ಕಾರ-೨೦೨೩’ ಕಾರ್ಯಕ್ರಮ ಭಾನುವಾರ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಜನರ ಕಣ್ಣೀರೊರೆಸುವ ಕಾರ್ಯ ನಮ್ಮಿಂದ ಹಾಗೂ ಸರಕಾರದಿಂದ ಆಗುತ್ತಿದೆ ಎಂದರು. ಮಾಯಿದೆ ದೇವುಸ್ ಚರ್ಚ್ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ […]










