ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ
ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ ಮಾ.22 ರಂದು ನಡೆಯಲಿದೆ. ಮಾ.23ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಹಾಗು ಮಾ.24ಕ್ಕೆ ಕಾಲೇಜು ವಾರ್ಷಿಕೋತ್ಸವ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸಂಚಾಲಕ, ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ […]