ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ
ಪುತ್ತೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಶ್ರೀಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು’ ಎಂದು ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ […]