ಸುದ್ದಿ

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ

ಯುವಕನ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಜತೆ ಲೈಂಗಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭ ಧರಿಸುವಂತೆ ಮಾಡಿದ್ದ ನಾರಾವಿಯ ಮಂಜುನಗರದ ಸಂದೇಶ್‌ (23) ಎಂಬ ಯುವಕನನ್ನು ಪೋಕ್ಸೊ ಕಾಯಿದೆಯಡಿ ಬಂಧಿಸಲಾಗಿದೆ.ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯ ಸ್ನೇಹ ಬೆಳೆಸಿ ಬುಟ್ಟಿಗೆ ಹಾಕಿಕೊಂಡಿದ್ದ ಆರೋಪಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಮದುವೆಯಾಗುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸವಾದಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. […]

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ Read More »

ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಜೆಡಿಎಸ್‌ನಿಂದ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್​​ ಸಿಗದೆ ನಿರಾಶರಾಗಿದ್ದ ವೈಎಸ್​ವಿ ದತ್ತಾ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್​ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದರು. ಕಡೂರು ಕ್ಷೇತ್ರದ ಜೆಡಿಎಸ್​​ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು ಆಗಮಿಸಲಿದ್ದಾರೆ. ಈ ಬಗ್ಗೆ ದೇವೇಗೌಡರೇ ಹೇಳಿದ್ದಾರೆ. ಅವರ ಮಾತಿಗೆ ಎಲ್ಲರೂ ಬೆಲೆ ಕೊಡಬೇಕು

ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್ Read More »

ಬೈಂದೂರು ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ

ಪುತ್ತೂರು : ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13 ರಂದು ಬೈಂದೂರಿನಲ್ಲಿ ಸಂಭವಿಸಿದೆ. ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್‌ ಮೂಲಕ ಕೊಲ್ಲೂರಿಗೆ ಆಗಮಿಸಿದ ವೇಳೆ ಈ ಘಟನೆ ಸಂಭವಿಸಿದೆ. ಬೆಂಕಿ ತಗುಲುವ ಮುನ್ನವೇ ಸಿಎಂ ಬೆಂಗಾವಲು ಪಡೆ ಅಲ್ಲಿಂದ ತೆರಳಿದ್ದಾರೆ. ಹೆಲಿಕಾಫ್ಟರ್‌ ಪ್ಯಾನ್‌ ಗಾಳಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಡವನ್ನು ತಪ್ಪಿಸಿದ್ದಾರೆ. ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ

ಬೈಂದೂರು ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ Read More »

ಜೈಲಿನಲ್ಲಿದ್ದುಕೊಂಡೆ ದಿಲ್ಲಿ ಲೆಫ್ಟಿನೆಂಟ್ ಗರ್ವನರ್‌ಗೆ ಪತ್ರ ಬರೆದ ವಂಚಕ ಸುಕೇಶ್‌

ಆಪ್‌ ನಾಯಕರ ಜತೆಗಿನ ವಾಟ್ಸಾಪ್‌ ಚಾಟ್‌ ಬಹಿರಂಗ ಹೊಸದಿಲ್ಲಿ : ವಂಚಕ ಸುಕೇಶ್ ಚಂದ್ರಶೇಖರ್ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪುತ್ರಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಅವರೊಂದಿಗೆ ತಾನು ವ್ಯವಹಾರಗಳಿಗೆ ಸಂಬಂಧಿಸಿ ಮಾಡಿರುವ ವಾಟ್ಸಾಪ್ ಚಾಟ್‌ಗಳನ್ನು ಬಿಡುಗಡೆ ಮಾಡಿ ಸಂಚಲನವುಂಟು ಮಾಡಿದ್ದಾನೆ. ಅವರೊಂದಿಗೆ ತಾನು ನಡೆಸಿರುವ ಸಂಭಾಷಣೆ ಆಮ್ ಆದ್ಮಿ ಪಾರ್ಟಿಯ ಮುಖಂಡ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮದ್ಯ ನೀತಿ ಹಗರಣದಲ್ಲಿ ಆರೋಪಿಯಾಗಿರುವ

ಜೈಲಿನಲ್ಲಿದ್ದುಕೊಂಡೆ ದಿಲ್ಲಿ ಲೆಫ್ಟಿನೆಂಟ್ ಗರ್ವನರ್‌ಗೆ ಪತ್ರ ಬರೆದ ವಂಚಕ ಸುಕೇಶ್‌ Read More »

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಬೆಂಗಳೂರು : ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ(ಏಪ್ರಿಲ್ 13) ಆರಂಭವಾಗಲಿದೆ. ಏ.20ರ ವರೆಗೆ ನಾಮಪತ್ರ ಸಲ್ಲಿಸಸಲು ಅವಕಾಶವಿದೆ. ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್‌ಲೈನ್​ ಮೂಲಕ

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ Read More »

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ Read More »

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಷೇಶ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು ದೇಗುಲ ಮತ್ತು ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ Read More »

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಏ. 11 ರಂದು ಪಕ್ಷ ತೊರೆಯಲು ಮುಂದಾಗಿದ್ದು, ನಗರದ ಮಲ್ಲೇಶ್ವರದ ಬಿಜೆಪಿಯ ರಾಜ್ಯ ಕಚೇರಿಯಲ್ಲಿ

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

error: Content is protected !!
Scroll to Top