ಬಕ್ರೀದ್ ಹಿನ್ನೆಲೆ ಗೋವುಗಳ ಅಕ್ರಮ ಸಾಗಾಟ, ವಧೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ ವಿಎಚ್ಪಿ, ಬಜರಂಗದಳ
ಪುತ್ತೂರು: ಇನ್ನೇನು ಕೆಲವೇ ದಿನಗಳಲ್ಲಿ ಬಕ್ರೀದ್ ಹಬ್ಬ ಬರಲಿದ್ದು, ಈ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಗೋವುಗಳ ಸಾಗಾಟ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳನ್ನು ಬಲಿ ಕೊಡುವುದು ಮೊದಲಾದ ಕೃತ್ಯಗಳು ನಡೆಯುವ ಸಾಧ್ಯತೆ ಇದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರು ನಗರ ಪೊಲೀಸರಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ […]










