ಸುದ್ದಿ

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು. ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು. ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ […]

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ Read More »

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ

ರೊಹಿಂಗ್ಯಾ ನಿರಾಶ್ರಿತರನ್ನು ಮಲೇಷ್ಯಾಕ್ಕೆ ಸಾಗಿಸುತ್ತಿದ್ದ ದೋಣಿ ಮುಳುಗಡೆ ಢಾಕ್ಕಾ: ಅಂಡಮಾನ್ ಸಮುದ್ರದಲ್ಲಿ ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿದ ಪರಿಣಾಮ ಸುಮಾರು 250 ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾದೇಶಿ ಪ್ರಜೆಗಳು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಬಾಂಗ್ಲಾದೇಶದ ಕಾಕ್ಸ್‌ ಬಜಾರ್‌ ಜಿಲ್ಲೆಯ ಟೆಕ್ನಾಫ್‌ನಿಂದ ಈ ದೋಣಿ ಮಲೇಷ್ಯಾಕ್ಕೆ ತೆರಳುತ್ತಿತ್ತು. ದೋಣಿಯಲ್ಲಿ ರೊಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳಿದ್ದರು. ಸಾಮರ್ಥ್ಯಕ್ಕಿಂತ ಹೆಚ್ಚು ಜನರು ತುಂಬಿ ಓವರ್‌ಲೋಡ್‌ ಅಗಿದ್ದ ದೋಣಿ ದೋಣಿ ಭಾರಿ ಬಿರುಗಾಳಿ ಹಾಗೂ ಅಲೆಗಳ ಹೊಡೆತದಿಂದ ನಡುಸಮುದ್ರದಲ್ಲಿ

ಅಕ್ರಮ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 250 ಮಂದಿ ನಾಪತ್ತೆ Read More »

ಪಾಕಿಸ್ತಾನದಲ್ಲೇ ಇನ್ನೊಂದು ಸುತ್ತಿನ ಕದನ ವಿರಾಮ ಸಂಧಾನ

ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಸಲು ಒಲವು ತೋರಿದ ಟ್ರಂಪ್‌ ವಾಷಿಂಗ್ಟನ್‌: ಕದನ ವಿರಾಮಕ್ಕೆ ಇರಾನ್ ಜೊತೆ ಎರಡನೇ ಸುತ್ತಿನ ನೇರ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ಪಾಕಿಸ್ತಾನದಲ್ಲಿ ನಡೆಯಬಹುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಿಳಿಸಿದ್ದಾರೆ. ಎರಡನೇ ಸುತ್ತಿನ ಮಾತುಕತೆ ಯುರೋಪ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಮುಂದಿನ ಎರಡು ದಿನಗಳಲ್ಲಿ ಪಾಕ್‌ನ ಇಸ್ಲಾಮಾಬಾದ್‌ನಲ್ಲಿಯೇ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ನಾವು ಅಲ್ಲಿಗೆ ಹೋಗಲು ಹೆಚ್ಚು ಒಲವು ತೋರುತ್ತೇವೆ ಎಂದು ಟ್ರಂಪ್‌ ಹೇಳಿದ್ದಾರೆ. ಮುಂದಿನ ಸುತ್ತಿನ ಮಾತುಕತೆಯಲ್ಲಿ ಅಮೆರಿಕವನ್ನು

ಪಾಕಿಸ್ತಾನದಲ್ಲೇ ಇನ್ನೊಂದು ಸುತ್ತಿನ ಕದನ ವಿರಾಮ ಸಂಧಾನ Read More »

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ

ಏಲಂನಲ್ಲಿ ಅಂಗಡಿ ಪಡೆದು ಹಣ ಪಾವತಿಸದ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ಪಂಚಾಯತ್ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳ ಏಲಂ ಬಿಡ್‍ನಲ್ಲಿ ಪಡೆದ ಅಂಗಡಿ ಕೋಣೆಗಳ ಕಂತು ಬಾಕಿ ಇರಿಸಿದ್ದ 20 ಅಂಗಡಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗ್ರಸ್ ಮಂಗಳವಾರ ಬೀಗ ಜಡಿದಿದ್ದಾರೆ. ಏಲಂ ಪ್ರಕ್ರಿಯೆಯಲ್ಲಿ ಪಡೆದುಕೊಂಡ ಅಂಗಡಿ ಕೊಠಡಿಗಳ ಬಿಡ್ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಿದ್ದು, ಇದರಂತೆ ಹಲವರು ಉಳಿಕೆ ಮೊತ್ತದ ಕಂತುಗಳನ್ನು ಪಾವತಿಸದೆ

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ Read More »

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ

ಅಪ್ರಾಪ್ತ ವಯಸ್ಕರನ್ನು ಬುಟ್ಟಿಗೆ ಹಾಕಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್‌ ಜಿಹಾದ್‌ ಪ್ರಕರಣ ಬಳಕಿಗೆ ಬಂದಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ Read More »

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ

ಯುದ್ಧದ ನಡುವೆ ಮೋದಿಗೆ ಕರೆ ಮಾಡಿ 40 ನಿಮಿಷ ಚರ್ಚಿಸಿದ ಟ್ರಂಪ್‌ ನವದೆಹಲಿ: ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಅಮೆರಿಕದ ಹಾರ್ಮುಜ್ ಜಲಸಂಧಿ ದಿಗ್ಬಂಧನ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ ಮಂಗಳವಾರ ದೂರವಾಣಿಯಲ್ಲಿ 40 ನಿಮಿಷ ಸಂಭಾಷಣೆ ನಡೆಸಿರುವುದು

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ Read More »

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳು ಬೆಂಗಳೂರು: 2026 – 27ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 29ರಿಂದ ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್‌ 3 ರಿಂದ 21 ರವರೆಗೆ ದಸರಾ ರಜೆ ಹಾಗೂ 2027ರ ಏ.11ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಶಾಲೆಗಳ ಮೊದಲ ಅವಧಿ ಮೇ

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ Read More »

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ

ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸಂಭವಿಸಿದ ದುರಂತ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ Read More »

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ

ಅಂಬೇಡ್ಕರ್‌ ಜಯಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಸಂಭವಿಸಿದ ದುರಂತ ಚಿಕ್ಕಮಗಳೂರು : ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿದು ಬಾಲಕಿ ಮೃತಪಟ್ಟು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ.

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ Read More »

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ

ಕಲಬುರ್ಗಿ: ಜಿಲ್ಲೆಯ ಯಡ್ರಾಮಿಯ ಇಜೇರಿ ಗ್ರಾಮದಲ್ಲಿ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಂದಿನಿ(16) ಮತ್ತು ಸಂಜನಾ(17) ಮೃತ ಬಾಲಕಿಯರು. ಈ ಇಬ್ಬರೂ ಚಿಕ್ಕಪ್ಪ – ದೊಡ್ಡಪ್ಪನ ಮಕ್ಕಳಾಗಿದ್ದಾರೆ. ಇಬ್ಬರ ಕೈಗಳನ್ನೂ ಕಟ್ಟಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದಾಗಿದೆ. ಈ ಪ್ರಕರಣ ನಿಗೂಢತೆಯಿಂದ ಕೂಡಿದ್ದು ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಇನ್ನೇನಾದರೂ ಅನುಮಾನಾಸ್ಪದ

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ Read More »

error: Content is protected !!
Scroll to Top