ಸುದ್ದಿ

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಮಡಿಕೇರಿ: ಭಾನುವಾರ ರಾತ್ರಿ ಗೋಣಿಕೊಪ್ಪದಲ್ಲಿ ನಡೆದ ಭೀಕರ ಅಪಘಾತ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕೈಕೇರಿ ಸಮೀಪ ಈ ದುರಂತ ನಡೆದಿದೆ. ವೇಗವಾಗಿ ಬಂದ ವಾಹನವೊಂದು ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪ್ರಮಾಣದ ಗಾಯಗಳಾಗಿವೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು Read More »

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು

ಪಿಜಿಗೆ ಹೋಗಲು ಹಳಿ ದಾಟುವಾಗ ಡಿಕ್ಕಿಯಾದ ರೈಲು ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್‌ ವ್ಯಾಸಂಗ ಮಾಡ್ತಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ

ವಂದೇ ಭಾರತ್‌ ರೈಲಿನಡಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು Read More »

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ.

ಬೆಂಗಳೂರು: ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್’ನ ಕಮಿಟಿ ‘ಬಿ’ಯ ಅಧ್ಯಕ್ಷರಾದ ಡಾ ರೇಣುಕಾ ಪ್ರಸಾದ್ ಕುರುಂಜಿಯವರು ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ. Read More »

ಸಿದ್ದರಾಮಯ್ಯ-ಡಿಕೆಶಿ ಕುರ್ಚಿ ಫೈಟ್‌ನಲ್ಲಿ ಅಸಹಾಯಕರಾದ ಖರ್ಗೆ

ನನ್ನಿಂದ ಏನೂ ಆಗುತ್ತಿಲ್ಲ, ಹೇಳಲು ಏನೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಮತ್ತೊಮ್ಮೆ ದೆಹಲಿಗೆ ಮುಖಮಾಡಿದೆ. ಜಗಳ ಬಗೆಹರಿಸಲು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಕೂಡ ಹೈಕಮಾಂಡ್‌ನತ್ತ ಕೈ ತೋರಿಸಿದ್ದಾರೆ. ಹೈಕಮಾಂಡ್‌ ಎಂದರೆ ಸೋನಿಯಾ, ರಾಹುಲ್‌ ಮತ್ತು ಪ್ರಿಯಾಂಕ ಗಾಂಧಿ. ಹೀಗಾಗಿ ಅಂತಿಮ ನಿರ್ಧಾರ ದೆಹಲಿಯಲ್ಲಿ ಆಗುವ ಸಾಧ್ಯತೆ ಇದೆ. ಸರ್ಕಾರಕ್ಕೆ

ಸಿದ್ದರಾಮಯ್ಯ-ಡಿಕೆಶಿ ಕುರ್ಚಿ ಫೈಟ್‌ನಲ್ಲಿ ಅಸಹಾಯಕರಾದ ಖರ್ಗೆ Read More »

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ

ಜನಪ್ರಿಯ ಗಾಯಕನ ಕಾರ್ಯಕ್ರಮಕ್ಕೆ ಮಿತಿಮೀರಿ ಬಂದ ಜನರಿಂದಾಗಿ ದುರ್ಘಟ ನೆ ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿದ ಐವರ ವಿರುದ್ಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ. ಕಾಸರಗೋಡು ಫ್ಲೀ ಯುವಜನ

ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ : ಮಣಿಪಾಲದ ಎರಡು ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿಟ್ಟಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು

ಜೂಜಿನ ಚಟದಿಂದ ಮೈತುಂಬ ಸಾಲ ಮಾಡಿಕೊಂಡಿದ್ದ ಪಾತಕಿಗಳು ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗೆ ಹಣ ತುಂಬಲು ಹೋಗುತ್ತಿದ್ದ ವಾಹನ ತಡೆದು ಬೆದರಿಸಿ 7.11 ಕೋಟಿ ದರೋಡೆ ಮಾಡಿದ್ದು ಮೈತುಂಬ ಮಾಡಿಕೊಂಡಿದ್ದ ಸಾಲ ತೀರಿಸಲು ಎಂಬುದಾಗಿ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ದರೋಡೆಕೋರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸಂಸ್ಥೆ ಮಾಜಿ ನೌಕರ ಜೇವಿಯರ್ ಎಂಬಾತ ದರೋಡೆಯ ಮಾಸ್ಟರ್‌ಮೈಂಡ್. ಗೋವಿಂದಪುರ ಪೊಲೀಸ್ ಠಾಣಾ ಕಾನ್‌ಸ್ಟೆಬಲ್ ಅಣ್ಣಪ್ಪನಾಯ್ಕ್, ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ,

ಸಾಲ ತೀರಿಸಲು 7.11 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿಗಳು Read More »

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ

ನಾಲ್ಕು ಮಂದಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಕೂಡಿ ಹಾಕಿ 18 ಲ.ರೂ. ವಸೂಲಿ ಮಾಡಿದ್ದ ಆರೋಪಿಗಳು ಬೆಂಗಳೂರು : ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ ದರೋಡೆ ಕೃತ್ಯದಲ್ಲಿ ಶಾಮೀಲಾಗಿ ಇಡೀ ಪೊಲೀಸ್‌ ಇಲಾಖೆ ತಲೆತಗ್ಗಿಸುವಂತಾದ ಬೆನ್ನಿಗೆ ಇಂಥದ್ದೇ ಮತ್ತೊಂದು ಕೃತ್ಯ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಲ್‌ಸೆಂಟರ್ ಉದ್ಯೋಗಿಗಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಪ್ರಕರಣ ಸಂಬಂಧ ಘಟನೆ ನಡೆದು 12 ಗಂಟೆ ಒಳಗೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಛಲಪತಿ, ಭರತ್, ಪವನ್, ಪ್ರಸನ್ನ, ಅತೀಕ್, ಜಬಿವುಲ್ಲ ಸೇರಿದಂತೆ 8 ಆರೋಪಿಗಳನ್ನು

ಕಾಲ್‌ಸೆಂಟರ್‌ ಉದ್ಯೋಗಿಗಳನ್ನು ಅಪಹರಿಸಿ ಹಣ ಸುಲಿಗೆ : ಹೆಡ್‌ಕಾನ್‌ಸ್ಟೆಬಲ್‌ ಸಹಿತ 8 ಆರೋಪಿಗಳು ಸೆರೆ Read More »

ಯಕ್ಷಗಾನಕ್ಕೆ ಆತಂಕ ತಂದೊಡ್ಡಿದ ಅಕಾಲಿಕ ಮಳೆ

ಮೇಳಗಳ ತಿರುಗಾಟ ಆರಂಭವಾಗುವಾಗಲೇ ಮಳೆ ಕಾಟ ಮಂಗಳೂರು : ಶನಿವಾರ ರಾತ್ರಿ ದಕ್ಷಿಣ ಕನ್ನಡ ಜಿಲೆಯ ಬಹುತೇಕ ಕಡೆಗಳಲ್ಲಿ ಸಿಡಿಲು, ಮಿಂಚಿನೊಂದಿಗೆ ಭಾರಿ ಮಳೆ ಸುರಿದಿದ್ದು, ಸಿಡಿಲು ಬಡಿದು ಹಲವೆಡೆ ಹಾನಿ ಸಂಭವಿಸಿದೆ. ಕರಾವಳಿಯಲ್ಲಿ ಯಕ್ಷಗಾನ ಮೇಳಗಳು ಒಂದೊಂದಾಗಿ ತಿರುಗಾಟ ಪ್ರಾರಂಭಿಸುವ ಸಮಯದಲ್ಲೇ ಅಕಾಲಿಕವಾಗಿ ಮಳೆ ಸುರಿಯುತ್ತಿರುವುದು ಮೇಳಗಳಿಗೆ ಮತ್ತು ಯಕ್ಷಗಾನ ಅಭಿಮಾನಿಗಳಿಗೆ ಆತಂತ ತಂದೊಡ್ಡಿದೆ. ಇದಲ್ಲದೆ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಮತ್ತಿತರ ಧಾರ್ಮಿಕ ಕಾರ್ಯಗಳೂ ಪ್ರಾರಂಭವಾಗಿವೆ. ಇವುಗಳಿಗೆಲ್ಲ ಮಳೆ ಅಡ್ಡಿಯಾಗುತ್ತಿದೆ.

ಯಕ್ಷಗಾನಕ್ಕೆ ಆತಂಕ ತಂದೊಡ್ಡಿದ ಅಕಾಲಿಕ ಮಳೆ Read More »

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು

ಸುಳ್ಯ : ಬೈಕ್ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲ ನೀಡದೆ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್ಣ (52) ಮೃತಪಟ್ಟವರು. ಅವರು ನ.19ರಂದು ರಾತ್ರಿ ಹಳೆಗೇಟಿನಿಂದ ತಮಿಳು ಕಾಲನಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‌ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು Read More »

error: Content is protected !!
Scroll to Top