ಕೆಎಂಎಫ್ನ ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ : ಸಿಎಂ ಬೊಮ್ಮಾಯಿ
ದೆಹಲಿ : ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ ಯ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಎಂಎಫ್ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ […]