ಸುದ್ದಿ

ಪುರುಷೋತ್ತಮ ಬಿಳಿಮಲೆ ‌ವಿರುದ್ಧ ಹರಿಹಾಯ್ದ ಬಿ. ವೈ. ವಿಜಯೇಂದ್ರ

ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಹಲವರು ಸಲಿಂಗ ಕಾಮಿಗಳಿದ್ದಾರೆ ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದ ಸೃಷ್ಟಿ ಮಾಡಿದ್ದು, ಅವರನ್ನು ತಕ್ಷಣವೇ ಹುದ್ದೆಯಿಂದ ವಜಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಳಿಮಲೆ ಕೇವಲ ಯಕ್ಷಗಾನಕ್ಕೆ ಮಾತ್ರವಲ್ಲ, ಕರಾವಳಿ ಭಾಗಕ್ಕೆ, ಹಿಂದೂ ಸಮಾಜಕ್ಕೆ ಅವಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮನಸ್ಥಿತಿ ಇದು. ಕರಾವಳಿಯ ಸಂಸ್ಕೃತಿ, ಪರಂಪರೆಯ ಬಗ್ಗೆ ಕೊಂಚವಾದರೂ ಗೌರವ ಇದ್ದಿದ್ದರೆ ಅವರು ಈ ತರದ ಹೇಳಿಕೆ […]

ಪುರುಷೋತ್ತಮ ಬಿಳಿಮಲೆ ‌ವಿರುದ್ಧ ಹರಿಹಾಯ್ದ ಬಿ. ವೈ. ವಿಜಯೇಂದ್ರ Read More »

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ

ಕಲಾವಿದರ ನೋವನ್ನು ಕಂಡು ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟನೆ ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶದಿಂದ ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ Read More »

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ

ವಿವಾದಾತ್ಮಕ ಹೇಳಿಕೆಗೆ ಕಲಾವಿದರು, ಯಕ್ಷಗಾನ ಅಭಿಮಾನಿಗಳಿಂದ ವಿರೋಧ ಮಂಗಳೂರು : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು, ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಯಕ್ಷಗಾನದ ತವರು ನೆಲವಾದ ಕರಾವಳಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಫೇಸ್‌ಬುಕ್‌, ವಾಟ್ಸಪ್‌, ಇನ್‌ಸ್ಟಾಗ್ರಾಂ ಮುಂತಾದ ಸೋಷಿಯಲ್‌ ಮೀಡಿಯಾಗಳಲ್ಲಿರುವ ಯಕ್ಷಗಾನ ಗ್ರೂಪ್‌ಗಳಲ್ಲಿ ಬಿಳಿಮಲೆ ಹೇಳಿಕೆ ಭಾರಿ ಚರ್ಚೆಗೆ ಗುರಿಯಾಗಿದ್ದು, ಅನೇಕರು ಬಿಳಿಮಲೆ ವಿರುದ್ಧ

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ Read More »

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌

ವೈಟ್‌ ಕಾಲರ್‌ ಟೆರರ್‌ ಜಾಲದ ಕೇಂದ್ರವಾಗಿದ್ದ ವಿವಿಯ ಸ್ಥಾಪಕ ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿಯನ್ನು ನ್ಯಾಯಾಲಯ ಡಿಸೆಂಬರ್ 1ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ದೆಹಲಿ ಸ್ಫೋಟ ಮತ್ತು ವೈಟ್ ಕಾಲರ್ ಉಗ್ರ ಜಾಲದ ಹಿಂದಿನ ಭಯೋತ್ಪಾದಕ ಘಟಕದ ಕೇಂದ್ರ ಬಿಂದುವಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌ Read More »

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಅಪಾಯಕಾರಿ ರಿಸಿನ್‌ ವಿಷ ತಯಾರಿಸಿ ಜನರನ್ನು ಸಾಯಿಸಲು ಸಂಚು ಮಾಡಿದ್ದ ಉಗ್ರ ಅಹಮದಾಬಾದ್ : ರಿಸಿನ್ ಎಂಬ ಅತ್ಯಂತ ಅಪಾಯಕಾರಿ ವಿಷ ಪದಾರ್ಥದ ಮೂಲಕ ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಡಾ.ಅಹ್ಮದ್ ಮೊಹಿಯುದ್ದೀನ್ ಸಯ್ಯದ್ ಮೇಲೆ ಜೈಲಿನಲ್ಲಿ ಸಹಕೈದಿಗಳು ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ವೈಟ್‌ ಕಾಲರ್‌ ಟೆರರ್‌ ಜಾಲದ ಭಾಗವಾಗಿರುವ ಡಾ.ಅಹ್ಮದ್‌ನನ್ನು ಇತ್ತೀಚೆಗೆ ಹೈದರಾಬಾದ್​ನಿಂದ ಬಂಧಿಸಿ ಗುಜರಾತ್‌ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಗಲಾಟೆಯಲ್ಲಿ ಡಾ.ಅಹ್ಮದ್ ಮೇಲೆ ಸಹ ಕೈದಿಗಳು ಹಲ್ಲೆ

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ

ಚಿತ್ತಾಪುರದಲ್ಲಿ ನಡೆದ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ 2019ರ ಆಗಸ್ಟ್‌ನಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. 2019ರ ಆಗಸ್ಟ್‌ನಲ್ಲಿ ಬಕ್ರೀದ್​ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ Read More »

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ

ಯಾತ್ರೆ ಆರಂಭದ ದಿನದಿಂದಲೇ ಸಾಲುಗಟ್ಟಿ ಬರುತ್ತಿರುವ ಅಯ್ಯಪ್ಪ ವ್ರತಧಾರಿಗಳು ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ-ಮಕರ ವಿಳಕ್ಕು ಯಾತ್ರೆ ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾಗಿದ್ದು, ಆರಂಭದಿಂದಲೇ ಸಿಕ್ಕಾಪಟ್ಟೆ ದಟ್ಟಣೆಯಿದೆ. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಹೆಣಗಾಡುತ್ತಿದ್ದಾರೆ. ಆನ್‌ಲೈನ್‌ ಮತ್ತು ಸ್ಪಾಟ್‌ ಬುಕ್ಕಿಂಗ್‌ ಎಂಬೆರಡು ಸೌಲಭ್ಯಗಳ ಮೂಲಕ ಮಾತ್ರ ದರ್ಶನಕ್ಕೆ ಅವಕಾಶ ಇದ್ದರೂ ಭಕ್ತರು ಅನಿಯಮಿತವಾಗಿ ಬರುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ Read More »

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ : ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ Read More »

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ತೆರಿಗೆ ವಂಚಿಸಿ ಐಷರಾಮಿ ಕಾರು ನೋಂದಣಿ ಮಾಡಿದ ಪ್ರಕರಣ ಮಂಗಳೂರು : ತೆರಿಗೆ ವಂಚಿಸಿ ಐಷಾರಾಮಿ ಕಾರು ನೋಂದಣಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯ ಆರ್ ಟಿಒ ಕಚೇರಿಯಲ್ಲಿ ಮಂಗಳವಾರ ಕಡತ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್‌ಟಿಒ ಕಚೇರಿಯಲ್ಲಿ ತೆರಿಗೆ ಕಡಿಮೆ ಮಾಡಿ ಬಿಎಂಡಬ್ಲ್ಯು ಕಾರೊಂದನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸಂದಾಯ ಆಗಬೇಕಾಗಿದ್ದ ಸುಮಾರು 85 ಲಕ್ಷ ರೂ. ತೆರಿಗೆ ವಂಚನೆಯಾಗಿತ್ತು. ನೋಂದಣಿಗೆ ಸಂಬಂಧಿಸಿದಂತೆ ಮಂಗಳೂರು ಆರ್‌ಟಿಒ ಕಚೇರಿಯಲ್ಲೂ

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ Read More »

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ

ನರೇಂದ್ರ ಮೋದಿ, ಅಮಿತ್‌ ಶಾ ಮತ್ತಿತರರು ಭಾಗವಹಿಸುವ ನಿರೀಕ್ಷೆ ಪಾಟ್ನಾ : ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆ 10ನೇ ಬಾರಿಗೆ ನಿತೀಶ್ ಕುಮಾರ್ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನವೆಂಬರ್ 20ರಂದು ನಿತೀಶ್ ಕುಮಾರ್ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ Read More »

error: Content is protected !!
Scroll to Top