ಸುದ್ದಿ

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ

ಹುಲಿ ಭೀತಿಯಿಂದ ಕಂಗೆಟ್ಟು ಹೋದ ಗ್ರಾಮಸ್ಥರು ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ಮತ್ತೊಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿದೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ರೈತ 8 ತಿಂಗಳ ಹಿಂದೆ ಆನೆ ದಾಳಿಗೆ ಒಳಗಾಗಿದ್ದರು ಎನ್ನಲಾಗಿದೆ. ಪದೇಪದೆ ಹುಲಿ ದಾಳಿ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಹೆದರಬೇಕಾದ ಪರಿಸ್ಥಿತಿ […]

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ Read More »

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ

ಶ್ವಾನ ದಳದ ನೆರವಿನಿಂದ ರಕ್ಷಣೆ ಮಾಡಿದ ಪೊಲೀಸರು ಚಿಕ್ಕಮಗಳೂರು: ವಾಯು ವಿಹಾರಕ್ಕೆಂದು ಕಾಡಿನೊಳಗೆ ಹೋಗಿದ್ದ ಹಿರಿಯ ವೈದ್ಯರೊಬ್ಬರು ದಾರಿತಪ್ಪಿ ವಾಪಸು ಬರಲಾಗದೆ ನಾಲ್ಕು ದಿನ ಕಾಡಿನಲ್ಲೇ ಅಲೆದಾಡಿದ ಘಟನೆಯೊಂದು ಕೊಪ್ಪ ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಅವರನ್ನು ಕೊನೆಗೆ ಪೊಲೀಸ್‌ ಇಲಾಖೆಯ ಶ್ವಾನ ದಳ ಪತ್ತೆ ಮಾಡಿದೆ. ನವೆಂಬರ್ 2ರಂದು ವಾಯು ವಿಹಾರಕ್ಕೆ ಹೋಗಿದ್ದ ವೈದ್ಯ ವೆಂಕಟೇಗೌಡ (75) ದಾರಿ ತಪ್ಪಿ ಕಾಡು ಸೇರಿದ್ದರು. ಮರೆವಿನ ಕಾಯಿಲೆ ಇದ್ದ ಅವರು ವಾಪಸ್ ಬರಲು ದಾರಿ

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ Read More »

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ

ನ.28ರಂದು ಪ್ರಧಾನಿಯಿಂದ ಸುವರ್ಣ ತೀರ್ಥ ಮಂಟಪ, ಚಿನ್ನದ ಕನಕನ ಕಿಂಡಿ, ಕನಕ ಕವಚ ಉದ್ಘಾಟನೆ ಉಡುಪಿ : ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಭವ್ಯವಾದ ಗೀತೋತ್ಸವವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಪ್ರತಿದಿನ ವಿದ್ವಾಂಸರಿಂದ ಗೀತಾ

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ Read More »

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ ಮನೆಯ ಗಗನ್(14) ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ Read More »

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು

ಥಾಯ್ಲೆಂಡ್‌ ಎಂದು ನಂಬಿಸಿ ಮಯನ್ಮಾರ್‌ಗೆ ಕಳುಹಿಸಿದ್ದಾರೆ ಎಂದು ದೂರು ನೀಡಿದ ತಾಯಿ ಪುತ್ತೂರು: ಥಾಯ್ಲೆಂಡ್ ದೇಶದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಉಳ್ಳಾಲದ ಯುವಕನೊಬ್ಬನಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಸಂಸ್ಥೆಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಸೋಮೇಶ್ವರ ನಿವಾಸಿಗಳಾದ ಹುಸೈನ್-ಝುಬೈದಾ ದಂಪತಿಯ ಪುತ್ರ ಅಹ್ಮದ್ ರಝಾಕ್ ವಂಚನೆಗೊಳಗಾದವರು. ಸಂತ್ರಸ್ತ ಯುವಕ ಮಯನ್ಮಾರ್ ದೇಶದಲ್ಲಿ ಬಂಧನಕ್ಕೊಳಗಾಗಿರುವುದಾಗಿ ಕರೆ ಮಾಡಿ ತಿಳಿಸಿರುವುದಾಗಿ ತಾಯಿ ಝುಬೈದಾ ಪೊಲೀಸರಿಗೆ ನೀಡಿರುವ

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು Read More »

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ

ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಇಂದು ವಂದೇ ಮಾತರಂ 150ನೇ ವರ್ಷಾಚರಣೆ

ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಾಡು ನವದೆಹಲಿ : ರಾಷ್ಟ್ರಗೀತೆಯಷ್ಟೇ ಮನ್ನಣೆ ಹೊಂದಿರುವ ಭಾರತದ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಇಂದು 150ನೇ ವರ್ಷಾಚರಣೆಯ ಸಂಭ್ರಮ. ವಂದೇ ಮಾತರಂ 150ನೇ ವರ್ಷಾಚರಣೆ ನಿಮಿತ್ತ ಇಂದು ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಅದರಲ್ಲಿ 150 ಕಡೆಗಳಲ್ಲಿ ವಂದೇ ಮಾತರಂ ಹಾಡುವುದು ಸೇರಿದೆ. ದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಹಲವು ಪೀಳಿಗೆಯ ಭಾರತೀಯರು ಒಂದಾಗಲು, ಎದ್ದುನಿಲ್ಲಲು ಮತ್ತು ರಾಷ್ಟ್ರದ ಚೈತನ್ಯವನ್ನು ಬಲಪಡಿಸಲು ಪ್ರೇರೇಪಿಸಿದ ಹಾಡು

ಇಂದು ವಂದೇ ಮಾತರಂ 150ನೇ ವರ್ಷಾಚರಣೆ Read More »

ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ನಿಲ್ಲದ ಹೋರಾಟ: ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ ನಡೆಸುವ ಎಚ್ಚರಿಕೆ

ಬೆಳಗಾವಿ: ಸತತ ಎಂಟು ದಿನಗಳಿಂದ ಕಬ್ಬು ಬೆಳೆಗಾರರು ಜಿಲ್ಲೆಯಲ್ಲಿ ಹೋರಾಟ ನಡೆಸುತ್ತಿದ್ದು, ಪ್ರತಿ ಟನ್ ಕಬ್ಬಿಗೆ ಮೂರೂವರೆ ಸಾವಿರ ರೂ. ದರ ನಿಗದಿ ಮಾಡುವ ಬಗಾಗೆ ಸರ್ಕಾರ ಸ್ಪಷ್ಟ ನಿರ್ಧಾರ ತಾಳುವವರೆಗೂ ಹೋರಾಟ ಹಿಂಪಡೆಯುವ ಮಾತೇ ಇಲ್ಲ ಎಂದು ಸಂದೇಶ ರವಾನೆ ಮಾಡಿದ್ದಾರೆ. ನ.6 ರೊಳಗಾಗಿ ಸರ್ಕಾರ ನಿರ್ಣಯ ತಿಳಿಸದಿದ್ದಲ್ಲಿ ನ.7 ರಿಂದ ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ ನಡೆಸುವ ಎಚ್ಚರಿಕೆಯನ್ನೂ ಕಬ್ಬು ಬೆಳೆಗಾರರು ನೀಡಿದ್ದಾರೆ.

ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ನಿಲ್ಲದ ಹೋರಾಟ: ರಾಷ್ಟ್ರೀಯ ಹೆದ್ದಾರಿ ತಡೆ ಚಳುವಳಿ ನಡೆಸುವ ಎಚ್ಚರಿಕೆ Read More »

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಡೂರಿನ ಬುಕ್ಕಸಾಗರ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಿಲ್ (21) ಎಂಬವರೇ ‌ಮೃತ ದುರ್ದೈವಿ. ಮೂಲತಃ ಕೇರಳದ ಕಣ್ಣೂರಿನವರಾದ ಅನಿಸ್ ಕಡೂರಿನ ಬಟ್ಟೆ ಅಂಗಡಿಯೊಂದರಲ್ಲಿ ‌ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ದತ್ತಪೀಠಕ್ಕೆ ತೆರಳಿ ವಾಪಾಸಾಗುತ್ತಿದ್ದ ‌ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು Read More »

error: Content is protected !!
Scroll to Top