ನೀರಕಟ್ಟೆಯಲ್ಲಿ ಬಸ್ ಪಲ್ಟಿ : ಓರ್ವ ಪ್ರಯಾಣಿಕ ಸಾವು
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಎಂಬಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟ ಘಟನೆ ಏ.4ರಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಜತ್ತೂರು ಸಮೀಪ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.ಮೃತಪಟ್ಟ ಪ್ರಯಾಣಿಕನ ಗುರುತು ಇನ್ನೂ ಪತ್ತಡೆಯಾಗಿಲ್ಲ. ಅಪಘಾತದಲ್ಲಿ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸನ್ನು ಕ್ರೇನ್ ಸಹಾಯದಿಂದ ಮೇಲೆತ್ತಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ನೀರಕಟ್ಟೆಯಲ್ಲಿ ಬಸ್ ಪಲ್ಟಿ : ಓರ್ವ ಪ್ರಯಾಣಿಕ ಸಾವು Read More »