ಸುದ್ದಿ

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ

ಸಿನಿಮಾ ಶೂಟಿಂಗ್‌ ವೇಳೆ ನಟಿಗೆ ಕಿರುಕುಳ ನೀಡಿದ ದೂರು ಬೆಂಗಳೂರು : ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಗ್ ಬಾಸ್ 11 ಸ್ಪರ್ಧಿಯೂ ಆಗಿರುವ ನಟಿ ದೂರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು […]

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ Read More »

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು

ಬೆಳ್ತಂಗಡಿ: ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ಹರೀಶ್ ಎಂಬವರ ಮನೆ ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ರಾತ್ರಿ ಆಗುತ್ತಿದ್ದಂತೆಯೇ ಮನೆಗೆ ಬೆಂಕಿ ಹತ್ತಿಕೊಂಡಿದೆ.ಮನೆಗೆ

ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು Read More »

ದ.ಕ ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ-ಸ್ವಾಸ್ಥ್ಯ ಕೇಂದ್ರ ಸ್ಥಾಪನೆ

ಕೇಂದ್ರ ಸರ್ಕಾರದಿಂದ 24.70 ಕೋಟಿ ರೂ. ಅನುದಾನ ಮಂಜೂರು ಮಂಗಳೂರು : ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ (ಎಚ್‌ಡಬ್ಲ್ಯುಸಿ) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ

ದ.ಕ ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ-ಸ್ವಾಸ್ಥ್ಯ ಕೇಂದ್ರ ಸ್ಥಾಪನೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ

ಶೇ.5ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಪರೀಕ್ಷಾ ಮಂಡಳಿ ಬೆಂಗಳೂರು : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ತುಸು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಾರಿ 10ನೇ ತರಗತಿ ವಾರ್ಷಿಕ ಪರೀಕ್ಷಾ ಶುಲ್ಕವನ್ನು ಶೇ.5 ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಪ್ರಥಮ ಬಾರಿಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ 676 ರೂ.ನಿಂದ 710 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ Read More »

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ

ಬಿ.ಆರ್‌. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್ 1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬವರು ಶೂ ಎಸೆಯಲು ಮುಂದಾಗಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ನರೇಂದ್ರ

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ Read More »

ಜಾತಿ ಗಣತಿಗಾಗಿ ಶಾಲಾ ಸಮಯವೇ ಬದಲು : ಬೆಳಗ್ಗೆ 8 ಗಂಟೆಗೆ ಶುರು

ಮಧ್ಯಾಹ್ನದ ತನಕ ಪಾಠ ಬಳಿಕ ಗಣತಿಗಾಗಿ ಮನೆ ಮನೆಗೆ ಭೇಟಿ ಬೆಂಗಳೂರು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನ​ ಜಾತಿ ಗಣತಿ ಮುಗಿಯದ ಹಿನ್ನೆಲೆ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಂಗಳವಾರಕ್ಕೆ (ಅ.7) ಅಂತ್ಯವಾಗಬೇಕಿದ್ದ ಸರ್ವೇ ಕಾರ್ಯವನ್ನು ಅ.12ರವರೆಗೂ, ಬೆಂಗಳೂರಿನಲ್ಲಿ 1 ವಾರ ತಡವಾಗಿಶುರುವಾಗಿರುವ ಕಾರಣ ಅ.24ರವರೆಗೂ ವಿಸ್ತರಿಸಲಾಗಿದೆ.

ಜಾತಿ ಗಣತಿಗಾಗಿ ಶಾಲಾ ಸಮಯವೇ ಬದಲು : ಬೆಳಗ್ಗೆ 8 ಗಂಟೆಗೆ ಶುರು Read More »

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಕೆಗೆ ‌ಪೊಲೀಸರಿಂದ ಸಿದ್ಧತೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್ ಬಂಧನದ ಬಳಿಕ ಪರಪ್ಪನ ಅಗ್ರಹಾರ ಸೇರಿದ್ದರು. ಆದರೆ ಅಲ್ಲಿ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎನ್ನುವ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಪರಪ್ಪನ ಅಗ್ರಹಾರದಲ್ಲಿ ಇತರ ಆರೋಪಿಗಳ ಜೊತೆ ಮೈದಾನದಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ ದರ್ಶನ್ ಫೋಟೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಲೀಗಲ್ ಸೆಲ್‌ನಲ್ಲಿ ‌ಕಾನೂನು ಅಭಿಪ್ರಾಯ

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ಪ್ರಕರಣ: ಚಾರ್ಜ್‌ಶೀಟ್ ಸಲ್ಲಿಕೆಗೆ ‌ಪೊಲೀಸರಿಂದ ಸಿದ್ಧತೆ Read More »

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ ಶ್ರೀ ಜಗದ್ಗುರು ಅಯ್ಯ ಸ್ವಾಮಿ ಮಠ ಆಲoಗಾರು ಮೂಡಬಿದಿರೆ ಪುನರ್ ನಿರ್ಮಾಣ ಜೀರ್ಣೋದ್ಧಾರದ ಪ್ರಯುಕ್ತ ನಡೆದ ಶ್ರೀ ಗುರು ಮತ್ತು ವಿಶ್ವಕರ್ಮ ಯಜ್ಞದ ಶುಭಾವಸರದಲ್ಲಿ ಅಲoಗಾರಿನ ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆಯಲ್ಲಿ ಗೇರುಕಟ್ಟೆಯ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರಿಗೆ ಅರ್ಕುಳ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನುವಹಿಸಿದ್ದ ಶ್ರೀಮಠದ ಜೀರ್ಣೋದ್ಧಾರ

ಗೇರುಕಟ್ಟೆ ಅರ್ಕುಳ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ Read More »

ಬಂಗ್ಲಗುಡ್ಡಕ್ಕೆ SIT ಅಧಿಕಾರಿಗಳ ತಂಡ ಭೇಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸದ್ದು ಮಾಡಿದ್ದ ಬಂಗ್ಲಗುಡ್ಡಕ್ಕೆ ಅರಣ್ಯ ಅಧಿಕಾರಿಗಳ ಜೊತೆಗೆ SIT ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆಗೆ SIT ಮತ್ತು ಅರಣ್ಯಾಧಿಕಾರಿಗಳ ತಂಡ ಜಂಟಿಯಾಗಿ ಭೇಟಿ ನೀಡಿ ಸರ್ವೇ ಕಾರ್ಯ ನಡೆಸುತ್ತಿದೆ. ಬಂಗ್ಲಗುಡ್ಡದಲ್ಲಿ ಏಳು ಅಸ್ಥಿಪಂಜರಗಳು ದೊರೆತ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದು ಎಂಬುದನ್ನು ಸಾಕ್ಷಿ ಸಮೇತ SIT ಗೆ ವರದಿ ನೀಡಲು ಈ ಸರ್ವೇ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬಂಗ್ಲಗುಡ್ಡಕ್ಕೆ SIT ಅಧಿಕಾರಿಗಳ ತಂಡ ಭೇಟಿ Read More »

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌

ಸಂಜೆ ಚುನಾವಣೆ ದಿನಾಂಕ ಘೋಷಿಸಲಿರುವ ಚುನಾವಣಾ ಆಯೋಗ ನವದೆಹಲಿ: ಬಿಹಾರ ವಿಧಾನ ಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಭಾರತೀಯ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು. ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ

ಇಂದು ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್‌ Read More »

error: Content is protected !!
Scroll to Top