ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್
ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ಹುದ್ದೆಗೆ ನಿನ್ನೆ ದಿಢೀರ್ ಎಂದು ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದ ಶಾಸಕ ಬಿ.ಆರ್. ಪಾಟೀಲ್ ಇಂದು ತನ್ನ ನಡೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಮದವರ ಜೊತೆ ಮಾತನಾಡಿದ ಪಾಟೀಲ್ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ನೇರವಾಗಿ ವಾಗ್ದಾಳಿ ತನ್ನ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ […]