ಸುದ್ದಿ

ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರ ನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ ಸೆ.22ರಂದು ಸಂಜೆ ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ. ನಿಯೋಜಿತ ಅಧ್ಯಕ್ಷ ಶಿವರಾಮ್ ಎಂ.ಎಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್‌ನ […]

ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ Read More »

ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬ | ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2 ರ ತನಕ ವಿವಿಧ ಸೇವಾ ಚಟುವಟಿಕೆ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.೨ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಸೆ.೨೦ರಂದು ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.14ದಿವಸ ನಿರಂತರ ಕಾರ್ಯಕ್ರಮ:ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಜನ್ಮದಿನವನ್ನು ಸೇವಾ ಚಟುವಟಿಕೆಯ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮವಾಗಿ ೧೪ ದಿವಸ ನಿರಂತರ ಕಾರ್ಯಕ್ರಮ ನಡೆಯಲಿದೆ. ಸಮಾಜದ ದೀನ ದಲಿತ, ದುರ್ಬಲ ಅನಾರೋಗ್ಯ ಪೀಡಿತರಿಗೆ ನೆರವು,

ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ಹುಟ್ಟುಹಬ್ಬ | ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2 ರ ತನಕ ವಿವಿಧ ಸೇವಾ ಚಟುವಟಿಕೆ Read More »

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಜಿಎಸ್‌ಟಿ ಕಡಿತ, ಅಮೆರಿಕ ವಿಸಾ ವಿಚಾರ ಪ್ರಸ್ತಾವ ಸಾಧ್ಯತೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯವರ ಭಾಷಣವು ಜಿಎಸ್ಟಿ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹೊಸ ಜಿಎಸ್​ಟಿ 2.0 ದರಗಳು ನಾಳೆಯಿಂದ ದೇಶದಲ್ಲಿ ಜಾರಿಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಮಹತ್ವದ ಮಾಹಿತಿಯನ್ನು ಜನರೊಂದಿಗೆ ಹಂಚಿಕೊಳ್ಳುಜವ ನಿರೀಕ್ಷೆಯಿದೆ. H1 B ವೀಸಾ ಹೊಂದಿರುವವರ ಮೇಲೆ ಅಮೆರಿಕ ಕೈಗೊಂಡಿರುವ ಕಠಿಣ ಕ್ರಮದ

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ Read More »

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ

ಮಂಗಳವಾರ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನವದೆಹಲಿ : ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್‌ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಸೆ.23ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್, ಮಲಯಾಳಂ ಮಾತ್ರವಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪರಿಪೂರ್ಣ ನಟನಿಗೆ ಫಾಲ್ಕೆ ಪ್ರಶಸ್ತಿ ಗರಿ : ಪ್ರಧಾನಿ ಮೋದಿ ಅಭಿನಂದನೆ Read More »

ಹೊಸ ಎಚ್‌-1ಬಿ ವೀಸಾಗೆ ಮಾತ್ರ 1 ಲಕ್ಷ ಡಾಲರ್‌ ಶುಲ್ಕ

ಭಾರಿ ಆತಂಕ ಸೃಷ್ಟಿಯಾದ ಬಳಿಕ ನಿಯಮ ತುಸು ಸಡಿಲಿಸಿದ ಟ್ರಂಪ್‌ ವಾಷಿಂಗ್ಟನ್‌: ಅಮೆರಿಕ ಎಚ್‌-1ಬಿ ವೀಸಾಗೆ 1 ಲಕ್ಷ ಡಾಲರ್‌ ಶುಲ್ಕ ವಿಧಿಸಲು ತೀರ್ಮಾನಿಸಿರುವುದು ಭಾರತದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಈ ವಿಸಾದಡಿ ಅಮೆರಿಕದಲ್ಲಿರುವ ಲಕ್ಷಾಂತರ ಭಾರತೀಯರು ದುಬಾರಿ ಶುಲ್ಕ ತೆರಲಾಗದೆ ನೌಕರಿ ಬಿಟ್ಟು ಭಾರತಕ್ಕೆ ಬರುವ ಸ್ಥಿತಿ ನಿರ್ಮಾಣವಾಗಲಿದೆ ಎನ್ನಲಾಗಿತ್ತು. ಆದರೆ ವಿಸಾ ವಿಚಾರದಲ್ಲಿ ತುಸು ಮೆತ್ತಗಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊಸ ವಿಸಾ ಅರ್ಜಿದಾರರಿಗೆ ಮಾತ್ರ 1 ಲಕ್ಷ ಡಾಲರ್‌ (ಸುಮಾರು 88

ಹೊಸ ಎಚ್‌-1ಬಿ ವೀಸಾಗೆ ಮಾತ್ರ 1 ಲಕ್ಷ ಡಾಲರ್‌ ಶುಲ್ಕ Read More »

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌

ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್‌ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್‌ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌ Read More »

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ.

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ

ಹ್ಯಾಂಡ್‌ಶೇಕ್‌ ವಿವಾದದ ಬಳಿಕ ಮತ್ತೆ ಬದ್ಧ ವೈರಿಗಳ ನಡುವೆ ಪಂದ್ಯ ದುಬೈ : ದುಬೈಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕೂಟದಲ್ಲಿ ಇಂದು ರಾತ್ರಿ ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಹೈವೋಲ್ಟೇಜ್‌ ಮುಖಾಮುಖಿಯಾಗಲಿವೆ. ಈ ಬಾರಿ ಎರಡೂ ತಂಡಗಳು ಸೂಪರ್-4 ಹಂತದಲ್ಲಿ ಪೈಪೋಟಿ ನಡೆಸುತ್ತಿವೆ. ಫೈನಲ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೂರ್ಯಕುಮಾರ್ ಯಾದವ್ ಯಾವ ಹನ್ನೊಂದರ ಬಳಗವನ್ನು ಕಟ್ಟಿಕೊಂಡು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ? ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನು ನೋಡಿದರೆ,

ಏಷ್ಯಾಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿ Read More »

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ ಬೆಂಗಳೂರು : ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20ರಿಂದ ಅಕ್ಟೋಬರ್‌ 9ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ. ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

error: Content is protected !!
Scroll to Top