ಸುದ್ದಿ

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ, ಆಟೋಮೊಬೈಲ್ ಕ್ಷೇತ್ರಗಳಿಗೆ ಅನುಕೂಲ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2ರಿಂದ ಜೂನ್‌ 30ರವರೆಗೆ ಜಾರಿಯಲ್ಲಿರುತ್ತದೆ. ಮೆಥನಾಲ್, ಟೊಲ್ಯೂನ್, ಸ್ಟೈರೀನ್, ವಿನೈಲ್ ಕ್ಲೋರೈಡ್ ಮೊನೊಮರ್, […]

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ Read More »

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ

ಜನಸಾಮಾನ್ಯರಿಗೆ ಹೊರೆ, ತೊಂದರೆ ಆಗದಂತೆ ನೋಡಿಕೊಳ್ಳಲು ಸಲಹೆ ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಭೆಯಲ್ಲಿ

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ Read More »

ಯುದ್ಧದಲ್ಲಿ ಅಮೆರಿಕಕ್ಕೆ ಅಭೂತಪೂರ್ವ ಜಯ : ಟ್ರಂಪ್‌ ಘೋಷಣೆ

ಷರತ್ತುಗಳಿಗೆ ಒಪ್ಪಿಕೊಳ್ಳದಿದ್ದಲ್ಲಿ ಇರಾನ್‌ ಮೇಲಿನ ಆಕ್ರಮಣ ಇನ್ನಷ್ಟು ತೀವ್ರ ವಾಷಿಂಗ್ಟನ್:‌ ಇರಾನ್‌ ಯುದ್ಧದಲ್ಲಿ ಅಮೆರಿಕ ಅಭೂತಪೂರ್ವ ಜಯ ಗಳಿಸಿದ್ದು, ನಮ್ಮ ಉದ್ದೇಶಗಳನ್ನು ಪೂರೈಸಲು ಸಾಕಷ್ಟು ಹತ್ತಿರವಾಗಿದ್ದೇವೆ. ಆದಾಗ್ಯೂ, ಇರಾನ್‌ನೊಂದಿಗಿನ ಮಾತುಕತೆಗಳು ವಿಫಲವಾದಲ್ಲಿ ಆಕ್ರಮಣಕಾರಿ ದಾಳಿಗೆ ಅಮೆರಿಕ ಸಜ್ಜಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಹೊರ್ಮುಜ್‌ ಜಲಸಂಧಿಯಾಗಲಿ ಅವರ ತೈಲವಾಗಲಿ ನಮಗೆ ಬೇಡ ಎಂದು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಟ್ರಂಪ್‌ ಹೇಳಿದ್ದಾರೆ. ಕಳೆದ ಒಂದು ತಿಂಗಳಿನಿಂದ ಇರಾನ್‌ ಮೇಲೆ ಅಮೆರಿಕ ನಡೆಸುತ್ತಿರುವ ಆಪರೇಷನ್‌ ಎಪಿಕ್‌ ಫ್ಯೂರಿಯಲ್ಲಿ

ಯುದ್ಧದಲ್ಲಿ ಅಮೆರಿಕಕ್ಕೆ ಅಭೂತಪೂರ್ವ ಜಯ : ಟ್ರಂಪ್‌ ಘೋಷಣೆ Read More »

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಎಐ ವಿಡಿಯೋ ಮೂಲಕ ಧರ್ಮಸ್ಥಳದ ತೇಜೋವಧೆ ಮಾಡಿದ್ದ ಸಮೀರ್‌ ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಧರ್ಮಸ್ಥಳ

ಧರ್ಮಸ್ಥಳ ಪ್ರಕರಣ : ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ Read More »

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ ಸಮೀಪ ಮಾರಿಪಳ್ಳದಲ್ಲಿ ತಡರಾತ್ರಿ ಸಂಭವಿಸಿದ ಅಪಘಾತ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬುಧವಾರ ರಾತ್ರಿ ಸುಮಾರು 12.45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು ಹೋಗಿ ಬಳಿಕ

ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ: 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ

ಹೊಸ ನಿಯಮದಿಂದ ಅಡಕತ್ತರಿಯಲ್ಲಿ ಸಿಲುಕಿದ ಅಡಿಕೆ ಬೆಳೆಗಾಗರರು ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳಗಾರರರಿಗೆ ಈ ರೀತಿಯ ತೇವಾಂಶ ಮಿತಿ ಹೇರಿಕೆಯು ಸಾಕಷ್ಟು ತೊಂದರೆಯುಂಟು ಮಾಡುತ್ತಿರುವುದನ್ನು ಮನವರಿಕೆ ಮಾಡಿದ್ದಾರೆ. ನಮ್ಮ ಪ್ರದೇಶದ ಹೆಚ್ಚಿನ ಸಂಖ್ಯೆಯ ಸಣ್ಣ

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ನಾಸಾದ ಮೂನ್‌ ಮಿಷನ್‌ ಆರ್ಟೆಮಿಸ್ ಯಶಸ್ವಿ ಉಡಾವಣೆ

50 ವರ್ಷಗಳ ಬಳಿಕ ಚಂದ್ರನ ಅನ್ವೇಷಣೆ – ನಾಲ್ವರು ಗಗನಯಾತ್ರಿಗಳಿರುವ ನೌಕೆ ಫ್ಲೋರಿಡಾ: 50 ವರ್ಷಗಳ ಬಳಿಕ ಚಂದ್ರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-(Artemis II) ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35 (ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4.05) ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳಿದ್ದ ಒರಾಯನ್ ಬಾಹ್ಯಾಕಾಶ ನೌಕೆಯನ್ನು ಅತ್ಯಂತ ಶಕ್ತಿಶಾಲಿ ಸ್ಪೇಸ್ ಲಾಂಚ್ ಸಿಸ್ಟಮ್ (SLS) ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಉಡಾವಣೆಯಾದ ಸುಮಾರು 8.5 ನಿಮಿಷಗಳ ನಂತರ

ನಾಸಾದ ಮೂನ್‌ ಮಿಷನ್‌ ಆರ್ಟೆಮಿಸ್ ಯಶಸ್ವಿ ಉಡಾವಣೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಅಂಕ ಕೈಬಿಡುವ ಆದೇಶದ ವಿರುದ್ಧ ಪಿಐಎಲ್‌

ಪರೋಕ್ಷವಾಗಿ ದ್ವಿಭಾಷಾ ನೀತಿ ಜಾರಿಗೆ ತರುವ ಪ್ರಯತ್ನ ಎಂದು ವಿರೋಧ ಬೆಂಗಳೂರು : ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಅಂಕ ಕೈಬಿಡುವ ಆದೇಶದ ವಿರುದ್ಧ ಪಿಐಎಲ್‌ Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಅಧಿಕಾರ ದುರುಪಯೋಪಡಿಸಿಕೊಂಡಿರುವುದಕ್ಕೆ ತೀಕ್ಷ್ಣ ತರಾಟೆ ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು.

ಇನ್‌ಸ್ಪೆಕ್ಟರ್‌ ಸಂದೇಶ್‌ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ Read More »

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇಚ್ಚೂರು ಉರುವಾಲು ಇಲ್ಲಿನ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯ 109 ಮತ್ತು 110ನೇ ತಾಳಮದ್ದಳೆ ಜರಗಿತು. ಕವಿ ಗೆರೆಸೊಪ್ಪೆ ಶಾಂತಪ್ಪಯ್ಯ ವಿರಚಿತ ರುದ್ರ ಭೀಮ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ(ಭೀಮಸೇನ)ಜಯರಾಮ ಬಲ್ಯ (ದುಶ್ಯಾಸನ)ಜಿನೇಂದ್ರ ಜೈನ್ (ದ್ರೌಪದಿ)ದಿವಾಕರ ಆಚಾರ್ಯ ಗೇರುಕಟ್ಟೆ(ಶ್ರೀಕೃಷ್ಣ),ಶ್ರೀಧರ ಎಸ್ಪಿ ಕೃಷ್ಣಾಪುರ (ಅರ್ಜುನ) ಕಿರಿಯ

ಇಚ್ಚೂರು ದೇವಸ್ಥಾನದಲ್ಲಿ ಶ್ರೀ ಮಹಾಭಾರತ ಸರಣಿಯ ತಾಳಮದ್ದಳೆ Read More »

error: Content is protected !!
Scroll to Top