ಸುದ್ದಿ

ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಚಿನ್ನಯ್ಯನ ಜಾಮೀನು ಅರ್ಜಿಯ ತೀರ್ಪು ಸೆ.16‌ರಂದು ಬೆಳ್ತಂಗಡಿ ನ್ಯಾಯಾಲಯ‌ ಪ್ರಕಟಿಸಲಿದೆ. ಸೆ.12ರಂದು ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪನ್ನು ಸೆ.16ಕ್ಕೆ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ ಎಸ್‌ಐಟಿಯಿಂದ ಜಾಮೀನು ನೀಡದಂತೆ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದ್ದರು. ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು. ಚಿನ್ನಯ್ಯನ ಬಂಧನದ […]

ಧರ್ಮಸ್ಥಳ ಪ್ರಕರಣ : ಇಂದು ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ Read More »

ದೋಟಿ ವಿದ್ಯುತ್‌ ತಂತಿಗೆ ತಗುಲಿ ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ಮೃತ್ಯು

ಹೈಟೆನ್ಶನ್‌ ತಂತಿಗೆ ತಗುಲಿದ ಅಲ್ಯುಮಿನಿಯಂ ದೋಟಿ ಸುಳ್ಯ: ತೆಂಗಿನಕಾಯಿ ಕೀಳುತ್ತಿದ್ದಾಗ ಅಲ್ಯೂಮಿನಿಯಂ ದೋಟಿ ವಿದ್ಯುತ್ ಲೈನ್‌ಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ಸಮೀಪ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಲ್ಲಿ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ (47) ಎಂದು ತಿಳಿದು ಬಂದಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಮ ಅವರು ತೆಂಗಿನಕಾಯಿ ಕೊಯ್ಯುತ್ತಿದ್ದಾಗ ಅವರ ಕೈತಪ್ಪಿ

ದೋಟಿ ವಿದ್ಯುತ್‌ ತಂತಿಗೆ ತಗುಲಿ ತೆಂಗಿನಕಾಯಿ ಕೀಳುತ್ತಿದ್ದ ವ್ಯಕ್ತಿ ಮೃತ್ಯು Read More »

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು

ದಸರಾ ಉದ್ಘಾಟನೆ ವಿವಾದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಮಾತಿನ ಫೈಟ್‌ ಬೆಂಗಳೂರು: ದಸರಾ ಹಬ್ಬವನ್ನು ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಯನ್ನು ಪ್ರಶ್ನಿಸಿದ್ದ ಪಿಐಎಲ್‌ ಅನ್ನು ಹೈಕೋರ್ಟ್‌ ವಜಾಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವೆ ಮತ್ತೊಂದು ಸುತ್ತಿನ ವಾಗ್ಯುದ್ಧ ಪ್ರಾರಂಭವಾಗಿದೆ. ಪ್ರತಾಪ್‌ ಸಿಂಹ ಅವರನ್ನು ಸಿದ್ದರಾಮಯ್ಯ ನಿನ್ನೆ ಮೂರ್ಖ ಎಂದು ಕರೆದಿದ್ದು, ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ 14 ಸೈಟ್ ನುಂಗಿದ ನೀವು ನನಗೆ

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು Read More »

ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಓಡಾಟ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟದ ನಿರೀಕ್ಷೆ ಮಂಗಳೂರು : ಬಹುದಿನಗಳ ಬೇಡಿಕೆಯಾಗಿರುವ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲುಗಳ ಸಂಚಾರ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ. ವಿದ್ಯುತ್‌ಚಾಲಿತ ಪ್ರಯಾಣಿಕ ರೈಲು ಸಂಚಾರ ಆರಂಭದೊಂದಿಗೆ ಭವಿಷ್ಯದಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸಹಕಾರಿಯಾಗಲಿದೆ ಎನ್ನಲಾಗಿದೆ. ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ರೈಲುಗಳು ವಿದ್ಯುತ್‌ ಮೂಲಕ ಓಡಾಟ ನಡೆಸಲಿವೆ. ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ

ಮಂಗಳೂರು-ಸುಬ್ರಹ್ಮಣ್ಯ ನಡುವೆ ವಿದ್ಯುತ್ ಚಾಲಿತ ರೈಲು ಓಡಾಟ Read More »

ಕೆಂಪುಕಲ್ಲು, ಮರಳು ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಬಿಜೆಪಿಯಿಂದ ಇಂದು ಬೃಹತ್‌ ಪ್ರತಿಭಟನೆ

ಮಿನಿ ವಿಧಾನಸೌಧದ ಎದುರು ಬೆಳಗ್ಗಿನಿಂದ ಸಂಜೆ ತನಕ ಧರಣಿ ಮಂಗಳೂರು : ಕೆಂಪುಕಲ್ಲು ಮತ್ತು ಮರಳಿನ ಕೊರತೆ ನಿವಾರಿಸಲು ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳದೆ ಜನಸಾಮಾನ್ಯರ ಬದುಕು ಹೈರಾಣವಾಗುವಂತೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಇಂದು ಬೃಹತ್‌ ಪ್ರತಿಭಟನೆ ಮಂಗಳೂರಿನಲ್ಲಿ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ

ಕೆಂಪುಕಲ್ಲು, ಮರಳು ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಬಿಜೆಪಿಯಿಂದ ಇಂದು ಬೃಹತ್‌ ಪ್ರತಿಭಟನೆ Read More »

ಮತ್ತೊಮ್ಮೆ ಭಾರತ-ಪಾಕಿಸ್ತಾನ ಸಾಧ್ಯತೆಯಿದೆಯೇ?

ಯುಎಇ ವಿರುದ್ದ ಗೆದ್ದರೆ ಸೆ.21ರಂದು ಇನ್ನೊಂದು ಹೈವೋಲ್ಟೇಜ್‌ ಪಂದ್ಯ ದುಬೈ : ಸೆಪ್ಟೆಂಬರ್ 14ರಂದು ನಡೆದ ಏಷ್ಯಾಕಪ್ 2025ರ ಗುಂಪು ಹಂತದಲ್ಲಿ ಪಾಕಿಸ್ತಾನ ಜೊತೆಗಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗೆದ್ದು ಬೀಗಿರುವ ಭಾರತಕ್ಕೆ ಮತ್ತೊಮ್ಮೆ ಪಾಕಿಸ್ತಾನ ಮುಖಾಮುಖಿಯಾಗುವ ಸಾಧ್ಯತೆಯಿದೆ. ಭಾನುವಾರದ ಗೆಲುವಿನೊಂದಿಗೆ ಭಾರತ ತಂಡ ಸೂಪರ್ -4 ಸುತ್ತಿನಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಸೆ.17ರಂದು ಪಾಕಿಸ್ತಾನ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಫಲಿತಾಂಶ ಭಾರತ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಮುಖಾಮುಖಿಯನ್ನು

ಮತ್ತೊಮ್ಮೆ ಭಾರತ-ಪಾಕಿಸ್ತಾನ ಸಾಧ್ಯತೆಯಿದೆಯೇ? Read More »

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು

ಮೂಡುಬಿದ್ರೆ: ಸಿಎಂ ‌ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಮೂಡುಬಿದ್ರೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ರಾಷ್ಟ್ರ ಭಕ್ತ ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ. ಮಹೇಶ್ ವಿಕ್ರಂ ಹೆಗ್ಡೆ ಅವರ ಪರ ವಾದಿಸಿದ್ದ ‌ವಕೀಲ ಶರತ್ ಶೆಟ್ಟಿ ವಾದಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ಸಹ ನಡೆಸಿತ್ತು. ಸದ್ಯ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು Read More »

ಈದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್‌ನಲ್ಲಿ ಪ್ರಯಾಣ: 3 ಜನರ ವಿರುದ್ಧ FIR

ಶಿವಮೊಗ್ಗ: ಕೆಲ ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಮೂವರು ಯುವಕರು ಬೈಕ್‌ನಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಿಸಿಕೊಂಡು ಪ್ರಯಾಣಿಸಿದ್ದು, ಈ ವಿಡಿಯೋ ಆಧರಿಸಿ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿಯ ಬಿ. ಎಚ್. ರಸ್ತೆಯ ರೈಲ್ವೆ ನಿಲ್ದಾಣ ಮಹಾದ್ವಾರದಲ್ಲಿ 3 ಜನ ಯುವಕರು ಪ್ಯಾಲೆಸ್ಟೈನ್ ಧ್ವಜ ಹಾರಿಸಿಕೊಂಡು ಅಕ್ಸಾ ಮಸೀದಿ ಪ್ಯಾಲೆಸ್ಟೈನ್ ಎಂದು ಬೊಬ್ಬೆ ಹೊಡೆಯುತ್ತಾ ಪ್ರಯಾಣ ನಡೆಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್‌ನಲ್ಲಿ ಪ್ರಯಾಣ: 3 ಜನರ ವಿರುದ್ಧ FIR Read More »

ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್‌ಗೆ ‌ ಕೋರ್ಟ್ ಸಮ್ಮತಿಯ ಬಳಿಕವೂ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್‌ಶೀಟ್ ನೀಡಲಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಜೈಲಧಿಕಾರಿಗಳ ನಡೆಯನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಕಡೆ ಗಣಿಸಿದ್ದಾಗಿ ಅರ್ಜಿಯಲ್ಲಿ ಹೇಳಲಾಗಿದೆ. ಕೋರ್ಟ್ ಆದೇಶ‌ ನೀಡಿದ ಬಳಿಕವೂ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರ ಸ್ಥಿತಿ ಹಾಗೆಯೇ ಇದೆ. ಬೆಳಗ್ಗೆ ಮತ್ತು

ದರ್ಶನ್ ವಿಷಯದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ವಕೀಲರ ದೂರು Read More »

ಅನಾರೋಗ್ಯದಿಂದ ಪುತ್ತೂರಿನ ಖ್ಯಾತ ಜ್ಯೋತಿಷಿ ನಿಧನ

ಪುತ್ತೂರು: ನರಿಮೊಗರು ನಿವಾಸಿ ಖ್ಯಾತ ಜ್ಯೋತಿಷಿ ವರ್ಧಮಾನ ಜೈನ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತರಾಗಿದ್ದಾರೆ. ಅವರಿಗೆ 56 ವರ್ಷಗಳಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಪುತ್ತೂರಿನ ಖ್ಯಾತ ಜ್ಯೋತಿಷಿ ನಿಧನ Read More »

error: Content is protected !!
Scroll to Top