ಸುದ್ದಿ

ತೆರಿಗೆ ಇಳಿಕೆ : ಇಳಿಯಲಿದೆ ಜನಸಾಮಾನ್ಯರ ಹೊರೆ

ಜಿಎಸ್‌ಟಿ ದರದಲ್ಲಿ ಭಾರಿ ಬದಲಾವಣೆ; ಕೇಂದ್ರದಿಂದ ಜನರಿಗೆ ದೀಪಾವಳಿಗೂ ಮೊದಲೇ ಭರ್ಜರಿ ಉಡುಗೊರೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವ ಕುರಿತು ನೀಡಿದ ವಾಗ್ದಾನವನ್ನು ಈಡೇರಿಸುವತ್ತ ಕೇಂದ್ರ ಸರ್ಕಾರ ಮುಂದಾಗಿದೆ. ಬುಧವಾರ ನಡೆದ ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್​ಟಿ ಮಂಡಳಿ ಸಭೆಯಲ್ಲಿ ಕೇಂದ್ರ ಸರ್ಕಾರ ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಲಾಗಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು […]

ತೆರಿಗೆ ಇಳಿಕೆ : ಇಳಿಯಲಿದೆ ಜನಸಾಮಾನ್ಯರ ಹೊರೆ Read More »

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರ ಆರೋಪಿ ಚೆನ್ನಯ್ಯನ SIT ಕಸ್ಟಡಿ ಅಂತ್ಯವಾಗಿದ್ದು, ಆತನನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಆತನನ್ನು ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಹೆಚ್ಚುವರಿ ಮಾಹಿತಿ ಪಡೆಯಲು ಮತ್ತೆ SIT ಅಧಿಕಾರಿಗಳು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು Read More »

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬುರುಡೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಕಳೆದ ಒಂದು ವರ್ಷದಿಂದಲೇ ತಯಾರಿ ನಡೆದಿತ್ತು. ಚೆನ್ನಯ್ಯನ ಮೂಲಕ ಕಾಡಿನಲ್ಲಿ ಕೆಲವು ಸ್ಥಳಗಳನ್ನು ಗುರುತು ಮಾಡಿ ಅಲ್ಲಿ ಗಿಡಗಳನ್ನು ನೆಡಲಾಗಿತ್ತು ಎಂಬ ಅಂಶ SIT ಗೆ ಗೊತ್ತಾಗಿದೆ. ದೂರುದಾರ ಆರೋಪಿ ಚೆನ್ನಯ್ಯ‌ನನ್ನು ಕಳೆದ ಕೆಲ ದಿನಗಳಿಂದಲೂ SIT ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಚೆನ್ನಯ್ಯನ ಪಾತ್ರ ಸೃಷ್ಟಿಯಾದಾಗಿಂದ ಈ ವರೆಗಿನ ಎಲ್ಲಾ ವಿಚಾರಗಳನ್ನು ಕ್ರಮಬದ್ಧವಾಗಿ ಜೋಡಿಸುವ ಕಾರ್ಯ ನಡೆಯುತ್ತಿದೆ. ಗಿರೀಶ್ ಮಟ್ಟಣ್ಣನವರ್ ತಂಡ ಕಳೆದ ಒಂದು ವರ್ಷದ

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್: ಕಾಡಿನ ಕೆಲ ಪ್ರದೇಶಗಳಲ್ಲಿ ಗಿಡ ನೆಟ್ಟು ಸ್ಥಳ ಗುರುತಿಸಿದ್ದ ಬುರುಡೆ ಗ್ಯಾಂಗ್ Read More »

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ವಕೀಲರು ನ್ಯಾಯಾಲಯದ ಮುಂದೆ ದೂರಿದ್ದಾರೆ. ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಖೈದಿಗೆ ನೀಡಲಾಗುವ ಸಾಮಾನ್ಯ ಸೌಲಭ್ಯಗಳನ್ನು ನೀಡದೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾನೂನು ಪ್ರಕಾರ ಈ ಸೌಲಭ್ಯಗಳನ್ನು ನಿರಾಕರಿಸುವ ಹಕ್ಕು ಅಧಿಕಾರಿಗಳಿಗೆ ಇಲ್ಲ ಎಂದು ಹೇಳಿದ್ದಾರೆ. ದರ್ಶನ್ ಧರಿಸಿದ ಶೂ ಬಿಚ್ಚಿಸುತ್ತಾರೆ. ಆಹಾರದ ತಟ್ಟೆಯನ್ನು ಎಸೆದು ಹೋಗುತ್ತಾರೆ‌. ಈ ಬಗ್ಗೆ ಜೈಲಧಿಕಾರಿಗಳಿಗೆ ಮೌಖಿಕ

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌

ವಿಚಾರಣೆಗೆ ಹಾಜರಾದ ಸೌಜನ್ಯಾ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಉದಯಕುಮಾರ್‌ ಜೈನ್‌ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆಯುತ್ತಿದೆ. ಇಂದು ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳನ್ನು ಎಸ್‌ಐಟಿ ಇಂದು ವಿಚಾರಣೆಗೆ ಕರೆಸಿರುವುದು ಕುತೂಹಲ ಮೂಡಿಸಿದೆ. ಈ ನಡೆಯಿಂದ ಸೌಜನ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಎಂಬ ಪ್ರಶ್ನೆಯೂ ಮೂಡಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್‌

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌ Read More »

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು

ಕರೆ ಮಾಡಿ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ ಮಂಗಳೂರು: ಮಹಿಳೆಗೆ ಅಶ್ಲೀಲ ಕರೆ ಮತ್ತು ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದ ಬಗ್ಗೆ ದೂರು ನೀಡಲು ಠಾಣೆಗೆ ಭೇಟಿ ನೀಡಿದ್ದರು. ಆಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಪತಿ ಮತ್ತು ಪತ್ನಿ ಇಬ್ಬರನ್ನೂ ಕರೆದು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿ

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು Read More »

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ

ಕಾಂಗ್ರೆಸ್‌ ಶಾಸಕರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದಾರೆ ನೂರಾರು ಮಂದಿ ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಹಲವು ಯಾತ್ರೆ, ಹೋರಾಟಗಳನ್ನು ನಡೆಸಿದ್ದಾಯಿತು. ಈಗ ಕಾಂಗ್ರೆಸ್‌ ಸರದಿ. ಕಾಂಗ್ರೆಸ್‌ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗಿಂದ ಯಾತ್ರೆ ಆರಂಭಿಸಲಾಗಿದೆ. ಬುಧವಾರ ಬೆಳಗ್ಗೆ ಆಂಜನೇಯ ದೇವರಿಗೆ

ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ Read More »

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ

ಮಹಿಳೆಯ ಬ್ಯಾಗಿನಿಂದ 4.5 ಲ.ರೂ. ಮೌಲ್ಯದ ನೆಕ್ಲೆಸ್‌ ಎಗರಿಸಿದ್ದ ಆರೋಪಿಗಳು ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚೆಕ್-ಇನ್ ಲಗೇಜ್‌ನಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಏರ್ ಇಂಡಿಯಾ SATSನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬ್ಯಾಗೇಜ್ ನಿರ್ವಹಣಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಳವು ಮಾಲನ್ನು ಖರೀದಿಸಿದ ಆರೋಪ ಹೊತ್ತಿರುವ ಐದನೇ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಕಾಣೆಯಾದ ಚಿನ್ನದ ಗಣನೀಯ ಭಾಗವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಆಗಸ್ಟ್ 30ರಂದು ಬೆಳಗ್ಗೆ ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ Read More »

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ

ಮತ ಕಳ್ಳತನ ಆರೋಪ ಮಾಡಿದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾದ ಪ್ರಕರಣ ನವದೆಹಲಿ: ಬಿಜೆಪಿ ಮತಗಳ್ಳತನ ಮಾಡುತ್ತಿದೆ ಎಂದು ದೇಶಾದ್ಯಂತ ಗುಲ್ಲೆಬ್ಬಿಸುತ್ತಿರುವ ಕಾಂಗ್ರೆಸ್‌ಗೆ ಈ ಆರೋಪ ತಿರುಗುಬಾಣವಾಗಿ ಪರಿಣಮಿಸಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಮತ್ತು ರಾಹುಲ್‌ ಗಾಂಧಿಯ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪವನ್‌ ಖೇರಾ ಅವರೇ ಎರಡೆರಡು ವೋಟರ್‌ ಐಡಿ ಹೊಂದಿರುವುದು ಬಯಲಾಗಿದ್ದು, ಈ ಕುರಿತು ಚುನಾವಣಾ ಆಯೋಗ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಮತ ಕಳ್ಳತನ ಎಸಗುತ್ತಿರುವ ಬಿಜೆಪಿ ಮೇಲೆ ಹೈಡ್ರೋಜನ್‌ ಬಾಂಬ್‌ ಹಾಕಲಾಗುವುದು ಎಂದು ರಾಹುಲ್‌

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ Read More »

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

error: Content is protected !!
Scroll to Top