ಸುದ್ದಿ

ಡ್ರಗ್ಸ್‌ ಸೇವಿಸಿ ಅಸಭ್ಯ ವರ್ತನೆ : ಓರ್ವ ಸೆರೆ

ಬಂಟ್ವಾಳ : ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಯನ್ನು ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ಎಂದು ಗುರುತಿಸಲಾಗಿದೆ. ಮಾರ್ಚ್‌ 30ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿಯವರಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು […]

ಡ್ರಗ್ಸ್‌ ಸೇವಿಸಿ ಅಸಭ್ಯ ವರ್ತನೆ : ಓರ್ವ ಸೆರೆ Read More »

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ

ಕೊಲೆ ಶಂಕೆ; ಉನ್ನತ ತನಿಖೆಗೆ ಆಗ್ರಹ ಮಂಗಳೂರು : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಯುವ ಉದ್ಯಮಿ ಸುದೀಪ್ ರೈ ಮದುವೆಯಾದ ಒಂದೇ ತಿಂಗಳಿಗೆ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವು ಪಡದುಕೊಂಡಿದೆ. ಪತ್ನಿ ಸೌಮ್ಯಾ ಶೆಟ್ಟಿಯೇ ಸುದೀಪ್ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿ ಈ ಮೊದಲು ಕೆಲವು ಮದುವೆಯಾಗಿರುವುದು ಬಯಲಾಗಿದೆ. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ Read More »

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ

‘ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಬಳಸಿದ ಎರಡು ಹಾಡುಗಳು ಬೆಂಗಳೂರು: ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಂಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ Read More »

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ ಮೂಡುಬಿದಿರೆ : ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ದಾರುಣ ಘಟನೆ ಮೂಡುಬಿದಿರೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ರಸ್ತೆ ಬದಿ ನಿಂತಿದ್ದ ಲಾರಿಗೆ ಅವರ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ, ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ

ಮೂಡುಬಿದಿರೆ : ಅಪಘಾತಕ್ಕೆ ತಾಯಿ-ಮಗ ಬಲಿ Read More »

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು

ಚೈತ್ರ ಮಾಸದ ಕೊನೆಯ ಮಂಗಳವಾರದ ಪೂಜೆಗೆ ಸೇರಿದ್ದ ಭಕ್ತರು ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತಸಂಭವಿಸಿ 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ. ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಾರಿ ಸಂಖ್ಯೆಯಲ್ಲಿ ಜನರಿದ್ದ ಕಾರಣ ನೂಕುನುಗ್ಗಲು

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು Read More »

ಇರಾನ್‌ ಮೇಲೆ 907 ಕೆ.ಜಿ. ಬಂಕರ್‌ ಬಸ್ಟರ್‌ ಬಾಂಬ್‌ ಹಾಕಿದ ಅಮೆರಿಕ

ಬದ್ರ್‌ ಮಿಲಿಟರಿ ವಾಯುನೆಲೆಯ ಮೇಲೆ ದಾಳಿ ಟೆಹ್ರಾನ್‌ : ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೆರಿಕ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ. ಈ ಸ್ಫೋಟದ ವೀಡಿಯೊವೊಂದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಇಸ್ಫಹಾನ್ ನಗರದಲ್ಲಿ ಈ ಸ್ಫೋಟ ಸಂಭವಿಸಿದೆ. ದಾಳಿಯ ತೀವ್ರತೆಯಿಂದ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಚಿಮ್ಮುವ ದೃಶ್ಯ ವೈರಲ್‌ ಆಗಿದೆ. ಟ್ರಂಪ್ ಈ ವೀಡಿಯೊ ಬಗ್ಗೆ ಯಾವುದೇ ನಿಖರ ಮಾಹಿತಿ ಉಲ್ಲೇಖಿಸಿಲ್ಲ. ಆದರೆ

ಇರಾನ್‌ ಮೇಲೆ 907 ಕೆ.ಜಿ. ಬಂಕರ್‌ ಬಸ್ಟರ್‌ ಬಾಂಬ್‌ ಹಾಕಿದ ಅಮೆರಿಕ Read More »

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶದ ಜೊತೆಗೆ ಕಾಲೇಜುಗಳಲ್ಲಿಯೂ ಅಂಕಪಟ್ಟಿಗಳನ್ನು ಪ್ರಕಟಿಸಲು ಸೂಚಿಸಲಾಗಿದೆ.

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ Read More »

ಜೈಶ್‌ ಉಗ್ರ ಮಸೂದ್‌ ಅಜರ್‌ ಸಹೋದರ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವು

ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಅನ್ವರ್‌ ಸಾವನ್ನು ಒಪ್ಪಿಕೊಂಡ ಜೈಶ್‌ ನವದೆಹಲಿ: ಸಂಸತ್‌ ಮೇಲಿನ ಉಗ್ರ ದಾಳಿಯ ರೂವಾರಿ ಜೈಶ್‌ ಇ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಮಸೂದ್‌ ಅಜರ್‌ನ ಸಹೋದರ ಮೊಹಮ್ಮದ್‌ ತಾಹಿರ್‌ ಅನ್ವರ್‌ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ. ಮಸೂದ್‌ ಅಜರ್‌ನ ಬಳಿಕ ಜೈಶ್‌ ಇ ಮೊಹಮ್ಮದ್‌ ಸಂಘಟನೆಯ ಪ್ರಮುಖ ನಾಯಕನಾಗಿದ್ದ ಅನ್ವರ್‌ನ ಸಾವನ್ನು ಜೈಶ್‌ ಅಧಿಕೃತವಾಗಿ ದೃಢಪಡಿಸಿದೆ. ಬಹವಾಲ್ಪುರದ ಜಾಮಿಯಾ ಮಸ್ಜಿದ್‌ ಉಸ್ಮಾನ ವಾಲಿಯಲ್ಲಿ ಸೋಮವಾರ ತಡರಾತ್ರಿ ಅನ್ವರ್‌ನ ಅಂತ್ಯಕ್ರಿಯೆ ನೇರವೇರಿದೆ ಎಂದು ತನ್ನ ಅಧಿಕೃತ

ಜೈಶ್‌ ಉಗ್ರ ಮಸೂದ್‌ ಅಜರ್‌ ಸಹೋದರ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವು Read More »

ಕ್ರಿಕೆಟ್‌ ಆಟದ ವಿವಾದ : ಯುವಕನ ಮೇಲೆ ಕತ್ತಿಯಿಂದ ಹಲ್ಲೆ

ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆಸಿಫ್ (36) ಗಾಯಗೊಂಡವರಾಗಿದ್ದು ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆರೀಫ್ (25) ಎಂಬಾತ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ‌. ಆರೋಪಿಯನ್ನು

ಕ್ರಿಕೆಟ್‌ ಆಟದ ವಿವಾದ : ಯುವಕನ ಮೇಲೆ ಕತ್ತಿಯಿಂದ ಹಲ್ಲೆ Read More »

ದೆಹಲಿಗೆ ಬರುತ್ತಿದ್ದ ವಿಮಾನದ ಮೇಲೆ ಅಮೆರಿಕ ದಾಳಿ

ಪರಿಹಾರ ಸಾಮಗ್ರಿ ಒಯ್ಯಲು ಬರುತ್ತಿದ್ದ ವಿಮಾನ ಟೆಹ್ರಾನ್ : ಅಮೆರಿಕ ನಡೆಸಿದ ದಾಳಿಯಲ್ಲಿ ದೆಹಲಿಗೆ ಬರುತ್ತಿದ್ದ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಇರಾನ್‌ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1ರಂದು ಬೆಳಗ್ಗೆ 4 ಗಂಟೆಗೆ ವಿಮಾನ ಆಗಮಿಸಬೇಕಿತ್ತು ಎಂದು ವರದಿಯಾಗಿದೆ. ಈ ಘಟನೆಯು ದೇಶದಲ್ಲಿ ನಾಗರಿಕ ವಿಮಾನ ಯಾನ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮಹಾನ್ ಏರ್

ದೆಹಲಿಗೆ ಬರುತ್ತಿದ್ದ ವಿಮಾನದ ಮೇಲೆ ಅಮೆರಿಕ ದಾಳಿ Read More »

error: Content is protected !!
Scroll to Top