ಸುದ್ದಿ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಬೆಂಗಳೂರು: ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಶುಕ್ರವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳು ತಡರಾತ್ರಿ 12:01 ಗಂಟೆ ಸುಮಾರಿಗೆ ಭೈರವೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು (ಶನಿವಾರ) ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ […]

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ Read More »

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ

ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಸಿಡಿದೆದ್ದಿರುವ ಭಕ್ತರು ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್‌ ವಾಹನ ರ‍್ಯಾಲಿ ನೆಲಮಂಗಲದಿಂದ ಇಂದು ಹೊರಟಿದೆ. ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷವಾಕ್ಯ ಕೂಗುತ್ತಾ ಕಾರ್ಯಕರ್ತರು ಮತ್ತು ಧರ್ಮಸ್ಥಳದ ಭಕ್ತರು ರ‍್ಯಾಲಿಯಲ್ಲಿ ಹೊರಟಿದ್ದಾರೆ. ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಈ ರ‍್ಯಾಲಿ ನಡೆಯುತ್ತಿದೆ. ರ‍್ಯಾಲಿಯಲ್ಲಿ 400ಕ್ಕೂ ಹೆಚ್ಚು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಟಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‍ಗೇಟ್‍ನಿಂದ ಯಾತ್ರೆ ಆರಂಭಗೊಂಡಿದ್ದು, ಹಾಸನ

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ Read More »

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌

ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ ಎಂದ ಸಚಿವೆ ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿಕ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂಬುಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ನಾನು ಕೂಡ ಧರ್ಮಸ್ಥಳದ ಭಕ್ತೆ. ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದಿಂದ ನನಗೂ ನೋವಾಗಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸಲಾಗಿತ್ತು ಎಂಬು ಉಪಮುಖ್ಯಮಂತ್ರಿಗಳ ಹೇಳಿಕೆ ನನ್ನ ಸಹಮತವಿದೆ ಎಂದು

ಧರ್ಮಸ್ಥಳದ ಜೊತೆ ಸರ್ಕಾರವಿದೆ : ಲಕ್ಷ್ಮೀ ಹೆಬ್ಬಾಳ್ಕರ್‌ Read More »

ಬಾವಿಗೆ ಬಿದ್ದು ಮಹಿಳೆ ಸಾವು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಪಟಿರುವ ಘಟನೆ ನಡೆದಿದೆ. ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆರ್.ಗೀತಾ (59) ಮೃತರು. ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖರ್ ಅವರ ಮನೆಯಲ್ಲಿ ವಾಸ್ತವ್ವ ಹೊಂದಿದ್ದು, ಆ.15ರಂದು ಮಧ್ಯಾಹ್ನ ಊಟ ಮಾಡಿದ್ದರು. ಬಳಿಕ ಅವರು ಮನೆಯಂಗಳದ ಬಾವಿಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರು ಸಹೋದರರಾದ ಸೆಲೂನ್ನ ಮಾಲಕ ಶೇಖರ್, ತಂಕರ್, ಸುರೇಶ್, ಸಹೋದರಿಯರಾದ ಆರ್.

ಬಾವಿಗೆ ಬಿದ್ದು ಮಹಿಳೆ ಸಾವು Read More »

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ

ಕುಂದಾಪುರ: ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ತೆಕ್ಕಟ್ಟೆ ಉದ್ಯಮಿ ಮತ್ತು ಅವರ ಮಗ ನಿಂತಿದ್ದ ಇನ್ನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತೆಕ್ಕಟ್ಟೆಯ ಶ್ರೀ ಗಣೇಶ್ ಸಿಲ್ಕ್ ನ ವ್ಯವಸ್ಥಾಪಕ ನಿರ್ದೇಶಕ ಅನಂತ್ ನಾಯಕ್ (57) ಮತ್ತು ಅವರ ಮಗ ಅನೂಪ್ ನಾಯಕ್ (23) ರವರು ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನಕ್ಕೆ ಭಜನತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಇನೋವಾ

ರಸ್ತೆ ಬದಿ ನಿಂತಿದ್ದ  ಕಾರಿಗೆ ಲಾರಿ ಡಿಕ್ಕಿ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ  ಕಾಲೇಜಿನ   ಅಧ್ಯಕ್ಷರಾದ ಶ್ರೀಯುತ ಜಯಂತ್  ನಡು  ಬೈಲ್     ಧ್ವಜಾರೋಹಣ  ನೆರವೇರಿಸಿ ಸಮಾರಂಭದಲ್ಲಿ  ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಸ್ವಾತಂತ್ರ್ಯಹೋರಾಟದಲ್ಲಿ   ಭಾಗಿಯಾಗಿ  ತಮ್ಮ   ಜೀವನವನ್ನು ತ್ಯಾಗ ,   ಬಲಿದಾನ ಮಾಡಿದ    , ಭಗತ್ ಸಿಂಗ್, ವೀರ ಸಾವರ್ಕರ್   , ಸುಭಾಷ್ ಚಂದ್ರ ಬೋಸ್, ಅಹಿಂಸಾ  ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ  ಸ್ವಾತಂತ್ರ್ಯ ಸಂಗ್ರಾಮ ದ  ಚುಕ್ಕಾಣಿ ಹಿಡಿದ ರಾಷ್ಟ್ರ ಪಿತ   ಮಹಾತ್ಮ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಆಶ್ರಯದಲ್ಲಿ 79 ನೇ  ಸ್ವಾತಂತ್ರ್ಯೋತ್ಸವ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಚೇತನ್ ಕುಮಾರ್, ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯ ವಂದಿಸಿ, ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.

ಲಿಟ್ಲ್ ಫ್ಲವರ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ಪುತ್ತೂರು ತಾಲೂಕು ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಭಾರತ ಸ್ವಾತಂತ್ರ್ಯ ಅನೇಕಾ ಬಲಿದಾನಗಳ ಪ್ರತೀಕ. ಅಷ್ಟೇ ಅಲ್ಲದೆ ಸಂವಿಧಾನದ ಮೂಲಕ ದೇಶ ಪ್ರಜೆಗಳು ಪಾಲಿಸಬೇಕಾದ ಕರ್ತವ್ಯವನ್ನು ಸ್ಪಷ್ಟವಾಗಿ ನೀಡಲಾಗಿದೆ. ಆದರೆ ಸ್ವಚ್ಛತೆ, ಭ್ರಾತೃತ್ವ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸಲು ಪ್ರಜ್ಞಾವಂತ ನಾಗರಿಕರು ಸಹಕರಿಸಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು.ಅವರು ಪುತ್ತೂರು ತಾಲೂಕು ಪಂಚಾಯಿತಿ ಆವರಣದಲ್ಲಿ 79 ನೇ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ದೇಶದ ವೈಶಿಷ್ಟ್ಯತೆಗಳನ್ನು, ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ದೇಶವನ್ನು

ಪುತ್ತೂರು ತಾಲೂಕು ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ಕೊಪ್ಪ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

ಕಾಣಿಯೂರು : ಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79 ನೇ ಸ್ವಾತಂತ್ರ ದಿನಾಚರಣೆಯನ್ನು ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸೀತಾರಾಮ ಕೊಪ್ಪರವರು ಧ್ವಜಾರೋಹಣಗೈದು ಶುಭ ಹಾರೈಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರವೀಣ್ ಕುಂಟ್ಯಾನರವರು ಮಾತನಾಡಿ, ಸ್ವಾತಂತ್ರ್ಯಕ್ಕೆ ಹೋರಾಡಿದ ಅದೆಷ್ಟೋ ಮಹಾನ್ ವೀರರಿದ್ದಾರೆ. ಆದರೆ ಇಂದು ಕೆಲವೇ ವ್ಯಕ್ತಿಗಳ ಹೆಸರು ಮಾತ್ರ ನಮಗೆ ತಿಳಿದಿದೆ. ಸ್ಥಳೀಯವಾಗಿ ಹೋರಾಡಿದ ಕೆದಂಬಾಡಿ ರಾಮಯ್ಯ ಗೌಡ ರಂಥ ಮಹನೀಯರ ಕಥೆಗಳನ್ನು ಇಂದಿನ

ಕೊಪ್ಪ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತಾನಾಡಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಸಂಧರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ. ಆಚಾರ್ಯ, ವೇದ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ. ಆಚಾರ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top