ಸುದ್ದಿ

ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ನೆಹರೂನಗರದ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಹೋಟೆಲ್ ಶ್ರೀ ಕೃಷ್ಣ ಭವನದಲ್ಲಿ ಸಂಭ್ರಮದ 79ನೇ ಸ್ವಾತಂತ್ರೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಹೋಟೆಲ್ ಮಾಲಕರಾದ ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕರ ದಿನಾಚರಣೆ | “ಶೀಂಟೂರು ಸ್ಮೃತಿ-2025

ಪುತ್ತೂರು: ಐಎಎಸ್ ಐಪಿಎಸ್ ನಂತಹ ಹುದ್ದೆಗಳಲ್ಲಿ ಜಿಲ್ಲೆಯ ಅತೀ ಕಡಿಮೆ ಜನರಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಬೇಕಾದರೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳಲ್ಲಿ ಕನಸು ಬಿತ್ತುವ ಕೆಲಸದ ಜತೆಗೆ ಮೌಲ್ಯಗಳನ್ನು ತುಂಬುವ ಚಿಂತನೆ ಹೆಚ್ಚಾಗಬೇಕಾಗಿದೆ. ಬಡತನ ಎಂಬುವುದು ಯಾವ ವಿಶ್ವವಿದ್ಯಾಲಯದಲ್ಲೂ ಕಲಿಸದ ಪಾಠಗಳನ್ನು ಕಲಿಸುತ್ತದೆ ಎಂದು ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್ ಅಭಿಪ್ರಾಯಪಟ್ಟರು. ಗುರುವಾರ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆದ ೧೪ನೇ ವರ್ಷದ ಸ್ಥಾಪಕರ ದಿನಾಚರಣೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕರ ದಿನಾಚರಣೆ | “ಶೀಂಟೂರು ಸ್ಮೃತಿ-2025 Read More »

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ?

ಸಂಚಲನ ಹುಟ್ಟಿಸಿದ ಷಡ್ಯಂತ್ರ ನಡೆದಿದೆ ಎಂಬ ಡಿಕೆಶಿ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣ ಖಾಲಿ ಡಬ್ಬ ಅದರಲ್ಲಿ ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿರುವುದು ಸಂಚಲನ ಉಂಟುಮಾಡಿದೆ. ನಿನ್ನೆ ಸದನದಲ್ಲಿ ಧರ್ಮಸ್ಥಳ ವಿಚಾರವಾಗಿ ತೀವ್ರ ಚರ್ಚೆ ನಡೆದಿದ್ದು, ಈ ಸಂದರ್ಭದಲ್ಲಿ ಡಿಕೆಶಿ, ಸೋಮವಾರ ಗೃಹ ಮಂತ್ರಿಗಳು ಎಲ್ಲ ವಿವರಗಳನ್ನು ತರಿಸಿಕೊಂಡು ಏನು ಹೇಳಬೇಕೋ ಅದನ್ನು ಹೇಳುತ್ತಾರೆ. ಹಿಂದೂ ಧರ್ಮ ಮಾತ್ರವಲ್ಲ ಯಾವುದೇ ಧರ್ಮದ ಭಾವನಗೆ

ಧರ್ಮಸ್ಥಳ ಪ್ರಕರಣ : ಸೋಮವಾರ ಬಯಲಾಗುತ್ತಾ ರಹಸ್ಯ? Read More »

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ಕೊಲೆ

ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ Read More »

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ವತಿಯಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲಾ ಶೆಣೈ, ಸದಸ್ಯರಾದ ಉಷಾ ಆಚಾರ್, ವೀಣಾ ಬಿಕೆ, ಲಲಿತ, ಮಹಾಲಿಂಗ ನಾಯ್ಕ, ಅನ್ನಪೂರ್ಣಿಮಾ ಆರ್ ರೈ, ಪುರುಷೋತ್ತಮ್ ಶೆಟ್ಟಿ, ಶೋಭಾ ರೈ ಚಂದ್ರಕಾಂತ್, ಪ್ರಹ್ಲಾದ್, ಹರಿಣಾಕ್ಷಿ ಜೆ ಶೆಟ್ಟಿ, ಗಂಗಾಧರ ಆಚಾರ್ಯ, ಪ್ರಹ್ಲಾದ್, ಆಶಾಲತಾ ಎ ಕೆ. ಮತ್ತು ಇತರರು ಪಾಲ್ಗೊಂಡು ಪ್ರಜ್ಞಾಶ್ರಮದಲ್ಲಿ ಮಕ್ಕಳಿಗೆ ದೀಪದಾರತಿ ಎತ್ತಿ,

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ Read More »

ನಾಳೆಯಿಂದ ದೇವಸ್ಥಾನಗಳ ಸುತ್ತಮುತ್ತ ಪ್ಲಾಸ್ಟಿಕ್‌ ಬಳಸುವಂತಿಲ್ಲ

ಮುಜರಾಯಿ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಆದೇಶ ಬೆಂಗಳೂರು: ಆಗಸ್ಟ್ 15ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಪ್ರಶೋತ್ತರ ವೇಳೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವಾಲಯದ ಆವರಣ ಸ್ವಚ್ಛತೆ ಕಾಪಾಡಲು ಹಾಗೂ ಪರಿಣಾಮಕಾರಿಯಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಲಾಗಿದೆ‌.‌ ಆ.15ರಿಂದ ಆದೇಶ ಜಾರಿಗೆ ಬರಲಿದೆ ಎಂದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ

ನಾಳೆಯಿಂದ ದೇವಸ್ಥಾನಗಳ ಸುತ್ತಮುತ್ತ ಪ್ಲಾಸ್ಟಿಕ್‌ ಬಳಸುವಂತಿಲ್ಲ Read More »

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು?

ಎಷ್ಟು ಅಗೆದರೂ ಶವದ ಕುರುಹು ಸಿಗದಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ನಡೆ ಬಗ್ಗೆ ಕುತೂಹಲ ಧರ್ಮಸ್ಥಳ : ಮುಸುಕುಧಾರಿ ಅನಾಮಿಕನ ಹೇಳಿಕೆ ನಂಬಿ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸತತ 14 ದಿನ ಭೂಮಿ ಅಗೆದರೂ ಶವ ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ. ಹೀಗಾಗಿ ಎಸ್‌ಐಟಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ. ಮುಸುಕುಧಾರಿ ಇನ್ನೂ ಅನೇಕ ಜಾಗಗಳನ್ನು ತೋರಿಸಲು ಮುಂದಾಗಿದ್ದಾನೆ. ಆದರೆ ಇಷ್ಟರ ತನಕ ಅವನು ತೋರಿಸಿದ ಯಾವ ಜಾಗದಲ್ಲೂ ಯಾವುದೇ ಕುರುಹು ಸಿಗದಿರುವಾಗ

13ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯಾಚರಣೆಯೂ ಮುಗಿಯಿತು, ಮುಂದೇನು? Read More »

ನಟಿ ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ವಿರುದ್ಧ 60 ಕೋ. ರೂ. ವಂಚನೆ ದೂರು

ಸಾಲ ಪಡೆದು ಹಿಂದಿರುಗಿಸದ ಕುರಿತು ಕೇಸ್‌ ದಾಖಲಿಸಿದ ಉದ್ಯಮಿ ಮುಂಬೈ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ 60 ಕೋ. ರೂ. ವಂಚಿಸಿದ ಕುರಿತು ಎಫ್‌ಐಆರ್‌ ದಾಖಲಾಗಿದೆ. ಮುಂಬೈ ಮೂಲದ ಉದ್ಯಮಿಯೊಬ್ಬರು ದಂಪತಿ ವಿರುದ್ಧ ದೂರು ನೀಡಿದ್ದಾರೆ. ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚನೆ ಮೊತ್ತ 10 ಕೋಟಿ ರೂ.ಗಳಿಗಿಂತ ಹೆಚ್ಚಿರುವುದರಿಂದ ಪೊಲೀಸರು ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ

ನಟಿ ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ವಿರುದ್ಧ 60 ಕೋ. ರೂ. ವಂಚನೆ ದೂರು Read More »

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ

ಅನ್ಯಕೋಮಿನ ಯುವಕನ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರಶ್ನಿಸಿದ್ದಕ್ಕೆ ಕೇಸ್‌ ಮಂಗಳೂರು: ನಗರದಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್, ಶ್ರೇಯಸ್, ಚಿಂಚು, ಚಂದನ್, ನಾಗರಾಜ್ ಹಾಗು ರಾಮಚಂದ್ರ ಎಂದು ಗುರುತಿಸಲಾಗಿದೆ. ಆ.11ರಂದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಅನ್ಯಕೋಮಿನ ಯುವಕ ಜೊತೆ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತಡೆದು ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ.ಪೂ. ಕಾಲೇಜೊಂದರ

ಮಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡಿದ 6 ಮಂದಿ ಬಂಧನ Read More »

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ

ಸದನದಲ್ಲಿ ಮಂಗಳೂರು ಎಂದು ನಾಮಕರಣ ಮಾಡುವುದಕ್ಕೆ ಒತ್ತಾಯಿಸಿದ ಶಾಸಕ ಹರೀಶ್‌ ಪೂಂಜ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಸಂಬಂಧ ಪರ-ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಗಮನ

ಎಲ್ಲರ ಅಭಿಪ್ರಾಯ ಪಡೆದು ದ.ಕ.ಜಿಲ್ಲೆ ಹೆಸರು ಬದಲಾವಣೆ ತೀರ್ಮಾನ : ಕೃಷ್ಣ ಬೈರೇಗೌಡ ಭರವಸೆ Read More »

error: Content is protected !!
Scroll to Top