ಸುದ್ದಿ

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ

ದಾಖಲೆ ಪತ್ರಗಳಿಲ್ಲದೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪಾರ ಹಣ ಸಾಗಾಟ ಮಂಗಳೂರು : ಮಂಗಳೂರಿನಿಂದ ಕೇರಳಕ್ಕೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 20.80 ಲ.ರೂ.ಯನ್ನು ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕನಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ನಗದು ಹಣವನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರಿನ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. […]

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ Read More »

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು

ಯುವತಿಯ ಸಹೋದರನಿಗೇ ವಿಡಿಯೋ ಕಳುಹಿಸಿ ವಿಕೃತಿ ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ. ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಕೂಡಲೇ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಕಳುಹಿಸಿದ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು Read More »

ಸಹೋದರತೆಯ ‌ಸವಿಯನ್ನು ಸಾರುವ ಸುಂದರ ಆಚರಣೆಯೇ ‌ರಕ್ಷಾ ಬಂಧನ

ಇಂದು ಪವಿತ್ರ ರಕ್ಷಾ ಬಂಧನ ದಿನ ರಕ್ಷಾ ಬಂಧನ, ಸಹೋದರತ್ವದ ಮಹತ್ವ ಸಾರುವ ಈ ಹಬ್ಬ ಭಾರತದಲ್ಲಿ ಬಹಳಷ್ಟು ಮಹತ್ವ ಪಡೆದ ಹಬ್ಬ ಎನ್ನುವುದರಲ್ಲಿ ‌ಎರಡು ಮಾತಿಲ್ಲ. ಇದು ಸಹೋದರ – ಸಹೋದರಿಯ ನಡುವಿನ ಸಂಬಂಧವನ್ನು ಗೌರವಿಸುವ ಹಬ್ಬ ಎನ್ನಬಹುದು. ಸಹೋದರಿ ಸಹೋದರನಿಗೆ ತನ್ನ ರಕ್ಷಣೆಯ ಜವಾಬ್ದಾರಿ ಹೊರುವಂತೆ, ಎಲ್ಲ ಸಂದರ್ಭದಲ್ಲಿಯೂ ತನ್ನನ್ನು ರಕ್ಷಿಸುವಂತೆ ರಕ್ಷೆಯನ್ನು ಕಟ್ಟುತ್ತಾಳೆ. ಸಹೋದರ ತನ್ನ ಸಹೋದರಿಯ ರಕ್ಷಣೆಯ ಭಾರ ತನ್ನದು ಎನ್ನುವ ಪ್ರತಿಜ್ಞೆ ಮಾಡುತ್ತಾನೆ ಎನ್ನುವುದು ಈ ಸುಂದರ ದಿನದ ಹಿಂದಿನ

ಸಹೋದರತೆಯ ‌ಸವಿಯನ್ನು ಸಾರುವ ಸುಂದರ ಆಚರಣೆಯೇ ‌ರಕ್ಷಾ ಬಂಧನ Read More »

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ

ಪುತ್ತೂರು : ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್‌ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಎಂಬಾತನನ್ನು ಪೊಲೀಸರು ಬಂಧಿಸಿ ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಕೇರಳ ರಾಜ್ಯದ ತೃಶ್ಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ತೃಶ್ಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ

ಮೃತದೇಹ ಹೂತಿರುವುದನ್ನು ನೋಡಿದ್ದೇವೆ ಎಂದು ಇನ್ನಿಬ್ಬರಿಂದ ದೂರು ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ತೋರಿಸಿದ ಬೊಳಿಯಾರು ಸಮೀಪದ ಅರಣ್ಯದಲ್ಲಿ ಎಸ್‌ಐಟಿ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಅಲ್ಲಿ ಕೂಡ ಏನೂ ಸಿಕ್ಕಿಲ್ಲ. ಮುಸುಕುಧಾರಿ ದೂರುದಾರ ಈ ಹಿಂದೆ 13 ಸ್ಥಳಗಳಲ್ಲಿ ತೋರಿಸಿದ್ದ ಜಾಗಗಳ ಹೊರತಾಗಿ ಇನ್ನೂ ಕೆಲವು ಜಾಗಗಳನ್ನು ತೋರಿಸಿದ್ದು, ಅಲ್ಲೂ ಗುರುತು ಮಾಡಿ ಅಗೆಯಲು ತೊಡಗಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಎಸ್‌ಐಟಿ ಸಾಕ್ಷಿ ದೂರುದಾರನೊಂದಿಗೆ

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ Read More »

ಆ.10 : ಮಂಡ್ಯದಲ್ಲಿ ಕೆ.ಆರ್ದ.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 6ನೇ ಸಂಸ್ಥಾಪನಾ ದಿನ ಮತ್ತು ಮಹಾ ಅಧಿವೇಶನ ಆ.10ರಂದು ಮಂಡ್ಯದ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 300 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕೆಆರ್‌ಎಸ್ ಪಾರ್ಟಿಯ ದ.ಕ.ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ. ಶುಕ್ರವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2019ರ ಆ.10ರಂದು ಬೆಂಗಳೂರಿನಲ್ಲಿ ಪಕ್ಷವು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಮತ್ತು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಅವರಿಂದ ಉದ್ಘಾಟನೆಗೊಂಡು ಕಳೆದ ಆರು ವರ್ಷಗಳಿಂದ

ಆ.10 : ಮಂಡ್ಯದಲ್ಲಿ ಕೆ.ಆರ್ದ.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ Read More »

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ |ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ. ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್, ಅಬುದಾಭಿಯ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಎನ್.ಸುವರ್ಣ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ |ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು Read More »

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ

ಪುತ್ತೂರು: ಸಮಾಜಮುಖಿ ಚಿಂತನೆಯೊಂದಿಗೆ ಸ್ಪಂದನೆ ನೀಡುವ ಮುಳಿಯ ಸಂಸ್ಥೆಯು ಗ್ರಾಹಕರ ನಂಬಿಕೆ, ವಿಶ್ವಾಸದ ನೆಲೆ ಎಂದು ಪುತ್ತೂರು ಶ್ರೀ ಮಹಾ ಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಆಭರಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮುಳಿಯ ಸಂಸ್ಥೆ ಇನ್ನಿತರ ಕ್ಷೇತ್ರಗಳಲ್ಲಿಯು ತನ್ನಭಾಪು ತೋರಿಸಿದೆ. ಧಾರ್ಮಿಕ, ರಿಯಲ್ ಎಸ್ಟೇಟ್ ಹೀಗೆ ತನ್ನ ಇರುವಿಕೆಯ ಕ್ಷೇತ್ರಗಳಲ್ಲಿ ಜನರ

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಮಳಿಗೆಯಲ್ಲಿ ವಜ್ರಾಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ Read More »

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರಿಂದ ಮನವಿ ಸಲ್ಲಿಕೆ ಕಡಬ: ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮನವಿ Read More »

ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ

ಧರ್ಮಾಧಿಕಾರಿಯನ್ನು ಆರೋಪಿ ಎಂದು ತೀರ್ಮಾನಿಸಿ ಸಾಕ್ಷಿ ಹುಡುಕಾಟ ಎಂದ ಮಾಜಿ ಸಂಸದ ಮೈಸೂರು: ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ.

ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ Read More »

error: Content is protected !!
Scroll to Top