ಸುದ್ದಿ

ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ 40 ಕೆಜಿ ಡ್ರಗ್ಸ್‌ ವಶ

ಎರಡು ಬ್ಯಾಗ್‌ಗಳಲ್ಲಿ ಅಡಗಿಸಿಟ್ಟು 14 ಕೋಟಿ ರೂ. ಮೌಲ್ಯದ ಡ್ರಗ್ಸ್‌ ತಂದಿದ್ದ ಮಹಿಳೆ ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಹಿಳೆಯೊಬ್ಬಳ ಲಗೇಜ್‌ನಿಂದ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಎನ್‌ಸಿಬಿ ವಶಪಡಿಸಿಕೊಂಡು ಮಹಿಳೆಯನ್ನು ಬಂಧಿಸಿದೆ. ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಎನ್‌ಸಿಬಿ ಅಧಿಕಾರಿಗಳು ಮಹಿಳೆಯ ಎರಡು ಬ್ಯಾಗ್‌ಗಳಿಂದ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ನೇರವಾಗಿ ವಿವಿಧ ಭಾರತೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಂದ ಹೈಡ್ರೋಪೋನಿಕ್ ಗಾಂಜಾವನ್ನು […]

ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ 40 ಕೆಜಿ ಡ್ರಗ್ಸ್‌ ವಶ Read More »

ಆ.5ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸಹಿತ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧಾರ ಮಾಡಿದ್ದು, ಈಗಾಗಲೇ ಮುಖ್ಯಮಂತ್ರಿ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ

ಆ.5ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಕೇಸಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದರೆ ಸಹಾಯವಾಣಿಗೆ ಕರೆ ಮಾಡಲು ಮನವಿ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದು, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇದ್ದರೆ 0824-2005301ಕ್ಕೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದ್ದಾರೆ. ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೇ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದೆ. ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ

ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ Read More »

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು

ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಬಸ್‌ ಶಿವಮೊಗ್ಗ: ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ವೇಳೆ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು Read More »

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ

ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆ ಈಡೇರಿಸಿದ ಸರ್ಕಾರ ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಪ್ರಮುಖ ಬೇಡಿಕೆಯೊಂದು ಈಡೇರಿದಂತಾಗಿದೆ. ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ Read More »

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ

ಗಡಿ ನುಸುಳಲು ಯತ್ನಿಸಿದ ಪಾಕ್‌ ಉಗ್ರರು ಗುಂಡಿಗೆ ಬಲಿ ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಸಹಿತ ಮೂವರು ಉಗ್ರರನ್ನು ಸಾಯಿಸಿದ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಛ್‌ ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರಿ ಮಳೆ ನಡುವೆಯೂ ಮೂವರು ಪಿಒಕೆ

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ Read More »

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ

ಕ್ರಿಬ್‌ ರಕ್ತದ ಗುಂಪು ಹೊಂದಿರುವ ಜಗತ್ತಿನ ಮೊದಲ ವ್ಯಕ್ತಿ ಬೆಂಗಳೂರು : ಕೋಲಾರ ಜಿಲ್ಲೆಯ ಮಹಿಳೆಯೊಬ್ಬರು ಜಗತ್ತಿನಲ್ಲಿ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ, ಲಭ್ಯವಿರುವ ಯಾವುದೇ O+

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ Read More »

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ Read More »

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ

ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ – ಬೆಳ್ಳಾರೆ – ನೆಟ್ಟಾರು ಮಾರ್ಗವಾಗಿ ಈಶ್ವರಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ನೆಟ್ಟಾರಿನಲ್ಲಿ ಪಿಕಪ್ ಅನ್ನು ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು, 5 ಎಮ್ಮೆಗಳನ್ನು ಪಿಕಪ್ ಸಮೇತ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ದೇಲಂಪಾಡಿ ಮುಜಾಮಿನ್ ಮತ್ತು ಅಬ್ದುಲ್ಲ ಬಂಧಿತ ಆರೋಪಿಗಳು. ಆರೋಪಿಗಳನ್ನು

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ Read More »

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ

ಜಪಾನ್‌ ಕರಾವಳಿ ತೀರಕ್ಕೆ ಅಪ್ಪಳಿಸಿದ 3 ಮೀಟರ್‌ ಎತ್ತರ ಅಲೆಗಳು ಮಾಸ್ಕೊ: ರಷ್ಯಾದ ಕರಾವಳಿ ಪ್ರದೇಶದಲ್ಲಿ ಇಂದು ನಸುಕಿನ ಹೊತ್ತು 8.8 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮವಾಗಿ ಅಮೆರಿಕದ ಅಲಾಸ್ಕಾದ ಭಾಗಗಳು, ಜಪಾನ್‌ ಹಾಗೂ ಶಾಂತಸಾಗರದ ದಡದಲ್ಲಿರುವ ಇತರ ದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಷ್ಯಾದ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್‌ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 19 ಕಿಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್

ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ : ಹಲವು ದೇಶಗಳಿಗೆ ಸುನಾಮಿ ಎಚ್ಚರಿಕೆ Read More »

error: Content is protected !!
Scroll to Top