ಸುದ್ದಿ

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ

ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿಗೆ ಅವಮಾನ ಮಾಡಿದ್ದ ಸಿಎಂ ಬೆಂಗಳೂರು: ಕಾಂಗ್ರೆಸ್‌ನ ಸಮಾವೇಶದ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಪ್ರಸ್ತುತ ಧಾರವಾಡದ ಎಎಸ್‌ಪಿ ಆಗಿರುವ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿಗೆ ಮನವಿ ಮಾಡಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಕೆಲ ಸಮಯದ ಹಿಂದೆ ನಡೆದ ಕಾಂಗ್ರೆಸ್‌ನ ಸಾಧನಾ ಸಮಾವೇಶದ ವೇದಿಕೆಯಲ್ಲಿ ಆಗ ಬೆಳಗಾವಿಯಲ್ಲಿ ಕರ್ತವ್ಯದಲ್ಲಿದ್ದ ನಾರಾಯಣ ಬರಮಣ್ಣಿ ಅವರಿಗೆ ಹೊಡೆಯಲು ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ವೀಡಿಯೊ ಭಾರಿ ವೈರಲ್‌ ಆಗಿ […]

ಸಿದ್ದರಾಮಯ್ಯನವರಿಂದ ಅವಮಾನಕ್ಕೀಡಾಗಿದ್ದ ಪೊಲೀಸ್‌ ಅಧಿಕಾರಿಯಿಂದ ಸ್ವಯಂ ನಿವೃತ್ತಿಗೆ ಅರ್ಜಿ Read More »

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು

ಕನ್ನಡಕ್ಕೆ ತಮಿಳು ತಾಯಿಭಾಷೆ ಎಂದು ಹೇಳಿ ವಿವಾದಕ್ಕೀಡಾಗಿದ್ದ ಕಮಲ ಹಾಸನ್‌ ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು Read More »

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ

ಮೊದಲ ಸುತ್ತಿನಲ್ಲೇ ಭಾರತ-ಪಾಕಿಸ್ತಾನ ಮುಖಾಮುಖಿ ನವದೆಹಲಿ : ಏಷ್ಯಾ ಉಪಖಂಡದ ಕ್ರಿಕೆಟ್‌ ರಾಷ್ಟ್ರಗಳ ನಡುವಿನ ಮಿನಿ ಸಮರ ಏಷ್ಯಾಕಪ್‌ ಕೂಟದ ಕರಡು ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಿದ್ಧಪಡಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 5ರಿಂದ 17ನೇ ಆವೃತ್ತಿಯ ಏಷ್ಯಾ ಕಪ್ ಶುರುವಾಗಲಿದೆ. ಫೈನಲ್ ಪಂದ್ಯವನ್ನು ಸೆಪ್ಟೆಂಬರ್ 21ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಾರಿಯ ಟೂರ್ನಿಯನ್ನು ಯುಎಇನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಆ ಸಂದರ್ಭದ ಪರಿಸ್ಥಿತಿಯನ್ನು ಹೊಂದಿಕೊಂಡು ಪಂದ್ಯಗಳ ದಿನಾಂಕ ಮತ್ತು ಸ್ಥಳದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ Read More »

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆ ತಿರುಚಿ ತೇಜೋವಧೆ ಎಂದು ಸ್ಪಷ್ಟನೆ ಬೆಂಗಳೂರು: ಕಳೆದ ಕೆಲ ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪದೇ ಪದೆ ಮುಜುಗರವುಂಟು ಮಾಡುತ್ತಿರುವ ಆಳಂದದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲ್‌ ನಿನ್ನೆ ಸಿದ್ದರಾಮಯ್ಯ ಲಾಟರಿ ಸಿಎಂ ಎಂದು ಹೇಳಿದ್ದು ಭಾರಿ ವೈರಲ್‌ ಆಗಿದೆ. ಫೋನ್‌ನಲ್ಲಿ ಯಾರ ಜೊತೆಗೋ ಮಾತನಾಡುತ್ತಾ ಬಿ.ಆರ್‌ ಪಾಟೀಲ್‌ ಏಕವಚನದಲ್ಲೇ ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು ಎಂಬ ಹೇಳಿದ್ದರು. ಇದರಿಂದ ಪಕ್ಷಕ್ಕೆ ಮತ್ತು ಸಿದ್ದರಾಮಯ್ಯನವರಿಗೆ ತೀವ್ರ ಮುಜುಗರವಾಗಿದ್ದು, ಕೂಡಲೇ ಇದಕ್ಕೆ ಸ್ಪಷ್ಟನೆ ಕೊಟ್ಟ ಪಾಟೀಲ್‌

ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆ ನನ್ನದಲ್ಲ ಎಂದ ಬಿ.ಆರ್‌.ಪಾಟೀಲ್‌ Read More »

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕೊಲೆ, ಹತ್ಯಾಯತ್ನ ಪ್ರಕರಣದ ಆರೋಪಿಗಳು ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ ಎಂಬಾತನನ್ನು ಮೂಲ್ಕಿ ಸಮೀಪ ಪಕ್ಷಕೆರೆಯಲ್ಲಿ ಬಂಧಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ 2020ರಲ್ಲಿ ಮುಲ್ಕಿ ಹೆದ್ದಾರಿಯ ಬಳಿ ವಿಜಯ ಸನ್ನಿಧಿ ಎದುರು ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ Read More »

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ ಹಾಕಿದ ಸಂಬಂಧ ಇಬ್ಬರ ವಿರುದ್‌ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Naveen Gowda (https://facebook.com/naveen.gowda.938621) ಎಂಬ ಫೇಸ್‌ಬುಕ್ ಖಾತೆಯಲ್ಲಿ ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ ಎಂದು ಆರಂಭಿಸಿ

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌ Read More »

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ

ಪ್ರಯಾಣಿಕರಿಗೆ ಅನುಕೂಲವಾಗುವ ಸೂಪರ್‌ ಆ್ಯಪ್ ನವದೆಹಲಿ: ಭಾರತೀಯ ರೈಲ್ವೆ ರೈಲ್ ಒನ್ ಎಂಬ ಹೊಸ ಆ್ಯಪ್ ಬಿಡುಗಡೆ ಮಾಡಿದೆ. ರೈಲ್ವೆ ಪ್ರಯಾಣಿಕರ ಎಲ್ಲ ಅಗತ್ಯಗಳನ್ನು ಪೂರೈಸಬಲ್ಲ ಸೂಪರ್ ಆ್ಯಪ್ ಇದು. ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಮ್ಸ್​​ನ 40ನೇ ಸಂಸ್ಥಾಪನಾ ದಿನ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆ್ಯಪ್ ಬಿಡುಗಡೆ ಮಾಡಿದ್ದಾರೆ. ರೈಲ್ ​ಒನ್ ಆ್ಯಪ್ ಆಂಡ್ರಾಯ್ಡ್ ಮತ್ತು ಆ್ಯಪಲ್ ಪ್ಲಾಟ್​​ಫಾರ್ಮ್ ಎರಡರಲ್ಲೂ ಲಭ್ಯ ಇದೆ. ರೈಲ್ವೆಗೆ ಸಂಬಂಧಿತ ಯಾವುದೇ ಮಾಹಿತಿಯನ್ನು ಪಡೆಯಲು

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ Read More »

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ?

ನವದೆಹಲಿ: ಭಾರತವು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಸಶಕ್ತಗೊಳಿಸುವ ಗುರಿಯನ್ನು ಹೊಂದಿದ್ದು, ಬಂಕರ್ ಬರ್ಸ್ಟರ್ ಕ್ಷಿಪಣಿ ಯೋಜನೆಯನ್ನು ತೀವ್ರಗೊಳಿಸಿದೆ. ಅಮೆರಿಕಾದ ಬಂಕರ್ ಬರ್ಸ್ಟರ್ ಬಾಂಬಿಗಿಂತಲೂ ಹೆಚ್ಚು ಬಲಿಷ್ಟವಾದ ಅಸ್ತ್ರವನ್ನು ಭಾರತ ಅಭಿವೃದ್ಧಿ ಮಾಡುತ್ತಿದೆ. ಈ ಹೊಸ ಅಗ್ನಿ -5 ಕ್ಷಿಪಣಿಯು ವಾಯುಸೇನೆಯ ಹೊಸ ಆವೃತ್ತಿಯಾಗಿದ್ದು ಇದು ಶತ್ರು ರಾಷ್ಟ್ರಗಳ ರಹಸ್ಯ ಪರಮಾಣು ಬಂಕರ್‌ಗಳನ್ನು ಕೆಲವೇ ನಿಮಿಷಗಳಲ್ಲಿ ನಾಶಪಡಿಸುವ ‌ಸಾಮರ್ಥ್ಯ ಹೊಂದಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈಗಾಗಲೇ ಬಾಲಕೋಟ್

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ? Read More »

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಬೆಂಗಳೂರು 1: ಐಪಿಎಲ್ ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನರ ಸಾವಿಗೆ ಕಾರಣವಾಗಿದ್ದ ಕಾಲ್ತುಳಿತ ಘಟನೆಗೆ ಹೊಣೆಯಾಗಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿದ ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಅವರಿಗೆ ಹಿಂದಿನ ಎಲ್ಲ ಭತ್ಯೆ, ಸೌಲಭ್ಯ ಒದಗಿಸಲು

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು Read More »

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌

ಕದ್ದ ಚಿನ್ನವನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ವಂಚನೆ ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬ ತನ್ನದೇ ಬ್ಯಾಂಕಿನಿಂದ 6.5 ಕೆಜಿಯಷ್ಟು ಚಿನ್ನ ಕದ್ದು ಅದನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್‌ ಗ್ರಾಹಕರು ತನ್ನ ಬ್ಯಾಂಕಿನಲ್ಲಿ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ಕದ್ದು, ಕೋ-ಆಪರೇಟಿವ್‌ ಸೊಸೈಟಿ ಒಂದರಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ ಪಡೆದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವಾ ವ್ಯವಸಾಯ

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌ Read More »

error: Content is protected !!
Scroll to Top