ಸುದ್ದಿ

ಭಾರಿ ಮಳೆ : ಮಂಗಳೂರಲ್ಲಿ ಗುಡ್ಡ, ಗೋಡೆ ಕುಸಿತ

ಎರಡು ದಿನ ಸುರಿದ ಮಳೆಗೆ ನಗರದಲ್ಲಿ ಹಲವು ಅವಾಂತರ ಮಂಗಳೂರು : ಕಳೆದೆರಡು ದಿನಗಳಿಂದ ಮಂಗಳೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ಹಲವು ಅವಾಂತರಗಳು ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್-ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಬಿಜೈ ಬಟ್ಟಗುಡ್ಡ, ಆರ್ಯ ಸಮಾಜ ರಸ್ತೆ, ಪಂಪ್ವೆಲ್, ಮಾಲೆಮಾರ್, ಕಾವೂರು ಉಲ್ಲಾಸ […]

ಭಾರಿ ಮಳೆ : ಮಂಗಳೂರಲ್ಲಿ ಗುಡ್ಡ, ಗೋಡೆ ಕುಸಿತ Read More »

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಡ್ರಗ್ಸ್‌, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕಾಲೇಜುಗಳಲ್ಲಿ ಡ್ರಗ್ಸ್‌, ರ‍್ಯಾಗಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್,

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ Read More »

ಮೂರು ತಿಂಗಳು ಮೀನುಗಾರಿಕೆ ನಿಷೇಧಕ್ಕೆ ಚಿಂತನೆ

ಮತ್ಸ್ಯ ಸಂಪತ್ತು ಉಳಿಸುವ ಸಲುವಾಗಿ ಹೊಸ ನಿಯಮ ಮಂಗಳೂರು: ಕಡಲಲ್ಲಿ ಮತ್ಸ್ಯ ಸಂಪತ್ತು ಬರಿದಾಗುತ್ತಿದೆ ಎನ್ನುವುದು ಇತ್ತೀಚೆಗೆ ವ್ಯಾಪಕವಾಗಿ ಕೇಳಿ ಬರುತ್ತಿರುವ ಆತಂಕ. ಹೀಗಾಗಿ ಮೀನು ಸಂತಾನೋತ್ಪತ್ತಿ ಕಾಲದಲ್ಲಿ ಯಾಂತ್ರೀಕೃತ ಬೋಟ್‌ಗಳು ಕಡಲಿಗೆ ಇಳಿಯದಿದ್ದರೆ ಮತ್ಸ್ಯ ಸಂಪತ್ತು ಹೇರಳವಾಗಿ ಸಿಗಲಿದೆ ಎಂಬುದು ಲೆಕ್ಕಚಾರ. ಈ ಕಾರಣಕ್ಕೆ ಮಳೆಗಾಲದಲ್ಲಿ ಎರಡು ತಿಂಗಳು ಮೀನಿಗಾರಿಕೆಗೆ ನಿಷೇಧ ಹೇರಲಾಗುತ್ತಿದೆ. ಆದರೆ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಅವಧಿಯಲ್ಲಿ ನಿಷೇಧ ಜಾರಿಗೆ ಬರುವುದರಿಂದ ನಿಷೇಧದ ನೈಜ ಉದ್ದೇಶ ಈಡೇರುತ್ತಿಲ್ಲ. ಹೀಗಾಗಿ ಇಡೀ

ಮೂರು ತಿಂಗಳು ಮೀನುಗಾರಿಕೆ ನಿಷೇಧಕ್ಕೆ ಚಿಂತನೆ Read More »

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ

ಕಾಂಬೋಡಿಯಾದ ಸೈಬರ್‌ ವಂಚಕರ ಹೊಸ ತಂತ್ರ ಬೆಂಗಳೂರು: ಮುಂಬಯಿಯ ಎನ್‌ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್‌ ಅಧಿಕಾರಿ ಕನ್ನಡಿಗ ದಯಾ ನಾಯಕ್ಹೆಸರು ಹೇಳಿ ಚಿಕ್ಕಬಳ್ಳಾಪುರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿವೃತ್ತ ಭೂ ವಿಜ್ಞಾನಿಗೆ ಸೈಬರ್​ ವಂಚಕರು ಲಕ್ಷಾಂತರ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ದಯಾ ನಾಯಕ್ ಹೆಸರಿನಲ್ಲಿ ಸೈಬರ್ ವಂಚಕರು ಕರೆ ಮಾಡಿದ್ದಾರೆ. ಮುಂಬೈಯ ಕೆನರಾ ಬ್ಯಾಂಕ್​ನಲ್ಲಿ

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಹೆಸರಿನಲ್ಲಿ ಕರೆ ಮಾಡಿ ನಿವೃತ್ತ ವಿಜ್ಞಾನಿಗೆ ವಂಚನೆ Read More »

ಸ್ಮಾರ್ಟ್‌ ಮೀಟರ್‌ ಹಗರಣ : ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಕೋರ್ಟಿಗೆ ದೂರು

900 ರೂಪಾಯಿಯ ಮೀಟರ್‌ಗೆ ಗ್ರಾಹಕರಿಂದ 9,000 ರೂ. ವಸೂಲು ಮಾಡಿ ಲೂಟಿ ಬೆಂಗಳೂರು : ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಬಿಜೆಪಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಬಿಜೆಪಿ ದೂರು ನೀಡಿದೆ. ಈ ಹಿಂದೆ ಲೋಕಾಯುಕ್ತ ಡಿವೈಎಸ್​ಪಿಗೆ ದೂರು ನೀಡಿದ್ದ ಬಿಜೆಪಿ ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ್,

ಸ್ಮಾರ್ಟ್‌ ಮೀಟರ್‌ ಹಗರಣ : ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಕೋರ್ಟಿಗೆ ದೂರು Read More »

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ

ನಗರದಲ್ಲಿ ಮಾದಕ ವಸ್ತು ಮಾರುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳು ಮಂಗಳೂರು, ಜು.16: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಎಂಟು ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಬಂದರ್ ದಕ್ಕೆಯಲ್ಲಿ ಎಂಡಿಎಂಎ ಮಾರಾಟದಲ್ಲಿ ನಿರತರಾಗಿದ್ದಾಗ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್‌ ಮಾರಾಟ : ಎಂಟು ವಿದ್ಯಾರ್ಥಿಗಳ ಬಂಧನ Read More »

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ

ನಿಮ್ಮ ಐಡಿ ಕಾರ್ಡ್‌ ಬಳಸಿ ಡ್ರಗ್ಸ್‌ ದಂಧೆ ನಡೆಸಿದ್ದಾರೆ ಎಂದು ಬೆದರಿಕೆಯೊಡ್ಡಿ ಮೋಸ ಮಂಗಳೂರು: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಫೋನ್ ಕರೆ ಮಾಡಿ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಂತ ಹಂತವಾಗಿ 61.15 ಲ.ರೂ. ವರ್ಗಾಯಿಸಿಕೊಂಡು ವಂಚಿಸಿರುವ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೂ.19ರಂದು ಬೆಳಗ್ಗೆ ತನಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ಮುಂಬೈಯ ಕೊಲಾಬ ಪೊಲೀಸ್ ಠಾಣೆಯ ಅಧಿಕಾರಿ ಸಂದೀಪ್ ಎನ್ನುತ್ತಾ ಇಂಗ್ಲಿಷ್‌ನಲ್ಲಿ ಮಾತನಾಡಿದ. ನಿಮ್ಮ ಗುರುತಿನ ಚೀಟಿ ಬಳಸಿ ಯಾರೋ ಮಾನವ

ಮಂಗಳೂರು : ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 61 ಲ.ರೂ. ವಂಚನೆ Read More »

ಭಾರಿ ಮಳೆ : ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡುಬಿದಿರೆ, ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್‌ಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರರು ಘೋಷಣೆ ಮಾಡಿದ್ದಾರೆ.

ಭಾರಿ ಮಳೆ : ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು

ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರು ನೀರುಪಾಲು ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾರೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು Read More »

ಮದ್ಯದ ದರದಲ್ಲಿ ಭಾರಿ ಇಳಿಕೆ!

ಬಾಟಲಿಗೆ 10ರಿಂದ 100 ರೂ. ತನಕ ಕಡಿತ ಮಾಡಿದ ಸರ್ಕಾರ ಅಮರಾವತಿ: ಸರ್ಕಾರ ಮದ್ಯದ ದರದಲ್ಲಿ ಭಾರಿ ಇಳಿಕೆ ಮಾಡಿದೆ. ಬಾಟಲಿಗೆ 10ರಿಂದ 100 ರೂ. ತನಕ ಇಳಿಕೆಯಾಗಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ ಈ ಸುದ್ದಿ ನೋಡಿ ಕರ್ನಾಟಕದ ಮದ್ಯಪ್ರಿಯರು ಖುಷಿಯಿಂದ ಕುಪ್ಪಳಿಸುವ ಅಗತ್ಯವಿಲ್ಲ. ದರ ಇಳಿಕೆಯಾಗಿರುವುದು ಪಕ್ಕದ ಆಂಧ್ರ ಪ್ರದೇಶದಲ್ಲಿ. ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳು ಕಂದಾಯ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತಿದ್ದರೆ ಆಂಧ್ರದ ಚಂದ್ರಬಾಬು ನಾಯ್ಡು ಸರ್ಕಾರ ಮಾತ್ರ ಮದ್ಯದ ದರ

ಮದ್ಯದ ದರದಲ್ಲಿ ಭಾರಿ ಇಳಿಕೆ! Read More »

error: Content is protected !!
Scroll to Top