ಸುದ್ದಿ

ಬಾಂಗ್ಲಾದೇಶದ ನುಸುಳುಕೋರರಿಗೆ ಆಶ್ರಯ ಒದಗಿಸಿ : ಅಕ್ರಮ ವಲಸಿಗರ ಪರವಾಗಿ ಪಿತ್ರೋಡ ಬ್ಯಾಟಿಂಗ್‌

ಅಕ್ರಮವಾಗಿ ಬರುವವರಿಗೆ ನೆಲೆ ಒದಗಿಸಬೇಕೆಂದು ಹೇಳಿದ ರಾಹುಲ್‌ ಗಾಂಧಿ ಮಾರ್ಗದರ್ಶಕ ಹೊಸದಿಲ್ಲಿ: ಬಾಂಗ್ಲಾದೇಶದ ಅಕ್ರಮ ನುಸುಳುಕೋರರಿಗೆ ಭಾರತದಲ್ಲಿ ನೆಲೆ ಕಲ್ಪಿಸಬೇಕೆಂದು ಹೇಳಿರುವ ರಾಹುಲ್‌ ಗಾಂಧಿಯ ಮಾರ್ಗದರ್ಶಕ ಸ್ಯಾಮ್‌ ಪಿತ್ರೋಡ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರ ಸಮಸ್ಯೆ ಬಿಗಡಾಯಿಸಿರುವಾಗ ಮತ್ತು ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಿರಂತರ ಹಿಂಸಾಚಾರ ನಡೆಯುತ್ತಿರುವ ಹೊರತಾಗಿಯೋ ಪಿತ್ರೋಡ ಬಾಂಗ್ಲಾದ ಅಕ್ರಮ ವಲಸಿಗರ ಪರವಾಗಿ ಮಾತನಾಡಿರುವುದು ಕಾಂಗ್ರೆಸ್‌ನ ರಹಸ್ಯ ಅಜೆಂಡಾದ ಭಾಗ ಎಂದು ಅನೇಕರು ಟೀಕಿಸಿದ್ದಾರೆ. ಬಾಂಗ್ಲಾ ವಲಸಿಗರು ಒಂದು ವೇಳೆ […]

ಬಾಂಗ್ಲಾದೇಶದ ನುಸುಳುಕೋರರಿಗೆ ಆಶ್ರಯ ಒದಗಿಸಿ : ಅಕ್ರಮ ವಲಸಿಗರ ಪರವಾಗಿ ಪಿತ್ರೋಡ ಬ್ಯಾಟಿಂಗ್‌ Read More »

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ಜಾತ್ರೋತ್ಸವವು ಫೆ. 28 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಿನ್ನೆ ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಯುವ ಉದ್ಯಮಿ ಹರೀಶ್ ಕುಂಜತ್ತಾಯ, ಗ್ರಾಮ ಪಂಚಾಯತ್ ಸದಸ್ಯ  ಲೋಕೇಶ್ ಚಾಕೋಟೆ, ಹಿರಿಯ ಕರಸೇವಕರಾದ ನಾರಾಯಣ ಆಚಾರ್ಯ ಮಳಿ, ಹಿರಿಯ ಭಜನಾಪಟು ಶೇಷಪ್ಪ ಗೌಡ ಪರ ನೀರು,

ಕಾವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌

ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 201 ರಲ್ಲಿ ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ವಜಾ ಮಾಡಲಾಗಿದೆ. ಕ್ರಿಸ್

ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌ Read More »

ಲಂಚ : ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ

ಮಂಗಳೂರು: ಸ್ಕೂಟರ್ ಬಿಡಿಸಲು ಲಂಚ ಕೇಳಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಠಾಣಾಧಿಕಾರಿಯೊಬ್ಬರ ವಿರುದ್ಧ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗವು ಪ್ರಕರಣ ದಾಖಲಿಸಿದೆ. ದೂರುದಾರರು ಪೊಲೀಸರು ವಶಪಡಿಸಿಕೊಂಡಿದ್ದ ಸ್ಕೂಟರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿತ್ತು. ಆ ಪ್ರಕಾರ್‌ ದೂರುದಾರ ಸ್ಕೂಟರನ್ನು ಬಿಡುಗಡೆ ಮಾಡಲು ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಷರೀಫ್ ಅವರನ್ನು ಸಂಪರ್ಕಿಸಿದ್ದರು. ಷರೀಫ್‌ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ದೂರುದಾರ ಸ್ವಲ್ಪ ಕಡಿಮೆ ಮಾಡಲು

ಲಂಚ : ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ Read More »

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ.

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ 

ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 76ನೇ , ಗಣರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿ Adv ಅಶ್ವಿನಿ ಎಲ್. ಶೆಟ್ಟಿ ಅವರು ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು ಮಕ್ಕಳು ಉತ್ತಮ ವ್ಯಕ್ತಿತ್ವ ಅಳವಡಿಸಿಕೊಂಡು ಸತ್ ಪ್ರಜೆಯಾಗಿ ಬದುಕಿ ಬಾಳಿ ಎಂದು ಕರೆಯಿತ್ತರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ  ಪ್ರತಿಭಾ ಭಟ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಲ್ ಎನ್ಫೀಲ್ಡ್ ರೈಡರ್ಸ್ ಪುತ್ತೂರು, ಸಂಸ್ಥೆಯ ಪ್ರಾಂಶುಪಾಲರುಗಳಾದ ಡಾ. ರಾಜಲಕ್ಷ್ಮಿ, ಶಶಿಕಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ  Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌

ಮಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ ಕುಂಭಮೇಳದಲ್ಲಿ ಪಾಲ್ಗೊಂಡ ಖಾದರ್, ನಾಗಾಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅಲಹಾಬಾದ್‌ನಲ್ಲಿ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ ದರ್ಗಾ ಶರೀಫ್‌ಗೆ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ

ಮೈಸೂರು: ಕಳೆದ ಕೆಲ ಸಮಯದಿಂದ ಜನರನ್ನು ಇನ್ನಿಲ್ಲದಂತೆ ಕಾಡಿ ಜೀವ ಹಿಂಡುತ್ತಿರುವ ಮೈಕ್ರೊ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರಕಾರ ಅಬ್ಬರಿಸುತ್ತಿದ್ದರೂ ಈ ಫೈನಾನ್ಸ್‌ ಸಂಸ್ಥೆಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಫೈನಾನ್ಸ್‌ನವರ ಕಾಟಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್ ಫೈವ್ ಸ್ಟಾರ್ ಮೈಕ್ರೊ ಫೈನಾನ್ಸ್‌

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ Read More »

error: Content is protected !!
Scroll to Top