ಸುದ್ದಿ

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ

ಇನ್‌ಸ್ಟಾಗ್ರಾಂ ಲಿಂಕ್‌ ಕಳುಹಿಸಿ ಮೋಸ ಮಂಗಳೂರು: ವರ್ಕ್‌ ಫ್ರಂ ಹೋಮ್‌ ಪಾರ್ಟ್ ಟೈಂ ಕೆಲಸ ಮಾಡಿ ಹೆಚ್ಚು ಹಣ ಸಂಪಾದಿಸಬಹುದು ಎಂದು ನಂಬಿಸಿ 20 ಲಕ್ಷಕ್ಕೂ ಹೆಚ್ಚು ಹಣ ಮೋಸ ಮಾಡಿದ ಪ್ರಕರಣ ಮಂಗಳೂರಿನಲ್ಲಿ ಸಂಭವಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿ 20,62,713 ರೂ. ಕಳೆದುಕೊಂಡ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 6ರಂದು ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಬಂದ ಸಂದೇಶವನ್ನು ಕ್ಲಿಕ್ ಮಾಡಿದಾಗ ವಾಟ್ಸ್‌ಆ್ಯಪ್ ತೆರೆದುಕೊಂಡಿದೆ. ಬಳಿಕ ಸಂಪರ್ಕಕ್ಕೆ ಬಂದ ಅಪರಿಚಿತ ವ್ಯಕ್ತಿ […]

ವರ್ಕ್‌ ಫ್ರಂ ಹೋಂ ಆಮಿಷವೊಡ್ಡಿ 20.62 ಲಕ್ಷ ರೂ. ವಂಚನೆ Read More »

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ

ನಾಳೆ ಭೂ ಸ್ಪರ್ಶ ಮಾಡಲಿರುವ ಗಗನ ಯಾತ್ರಿಗಳು ನವದೆಹಲಿ: ಶುಭಾಂಶು ಶುಕ್ಲ ಭೂಮಿಗೆ ಮರಳಲು ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ನಾಲ್ವರು ಗಗನಯಾತ್ರಿಗಳು ಇರುವ ಗಗನ ನೌಕೆ ಭೂಮಿಯತ್ತ ಹೊರಡಲಿದೆ. ಭೂಮಿಗೆ ವಾಪಸ್‌ ಆಗಲಿರುವ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಇಂದು ಭಾರತ ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯ, ನಿರ್ಭೀತ, ಆತ್ಮವಿಶ್ವಾಸ ಮತ್ತು ಹೆಮ್ಮೆಯಂತೆ ಕಾಣುತ್ತದೆ. ಭಾರತವು ಇನ್ನೂ ಸಾರೇ ಜಹಾನ್ ಸೆ ಅಚ್ಚಾ ಎಂದು ಶುಕ್ಲಾ

ಶುಭಾಂಶು ಶುಕ್ಲ ಇಂದು ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮನ Read More »

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ

ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಸ್ವದೇಶಿ ಕ್ಷಿಪಣಿ ನವದೆಹಲಿ: ಭಾರತೀಯ ವಾಯುಸೇನೆಗೆ ಮತ್ತೊಂದು ಶಕ್ತಿ ಸೇರ್ಪಡೆಯಾಗಿದ್ದು, ಡಿಆರ್‌ಡಿಒ ಅಭಿವೃದ್ಧಿ ಮಾಡಿರುವ ಏರ್-ಟು -ಏರ್ ಕ್ವಿಪಣಿ ಅಸ್ತ್ರ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಇದನ್ನು ಒಡಿಶಾದ ಕರಾವಳಿ ತೀರದಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 MK1 ಯುದ್ಧ ವಿಮಾನದ ಮೂಲಕ ಡಿಆರ್‌ಡಿಒ ಮತ್ತು ಭಾರತೀಯ ವಾಯುಸೇನೆ ಈ ಕ್ಷಿಪಣಿಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. ಈ ಕ್ಷಿಪಣಿಗಳು ತಮ್ಮ ಗುರಿಗಳನ್ನು ಹೆಚ್ಚಿನ ನಿಖರತೆಯ ಜೊತೆಗೆ ಯಶಸ್ವಿಯಾಗಿ ತಲುಪಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ Read More »

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ

ನವದೆಹಲಿ: ಭಾರತದ ಮರಾಠ ಮಿಲಿಟರಿ ಭೂದೃಶ್ಯಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಜಿರುವ ಪ್ರಧಾನಿ ಮೋದಿ, ಇದು ಭಾರತದ ಸಾಂಸ್ಕೃತಿಕ ಪರಂಪರೆಗೆ ಸಲ್ಲಿಕೆಯಾದ ವಿಶ್ವ ಗೌರವ ಎಂದಿದ್ದಾರೆ. ಇದಕ್ಕಾಗಿ ದೇಶದ ಜನತೆದೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹನ್ನೆರಡು ಕೋಟೆಗಳನ್ನು ಒಳಗೊಂಡಿರುವ ಈ ಮರಾಠ ಮಿಲಿಟರಿ ಭೂದೃಶ್ಯ ಕ್ರಿ.ಶ. 17 ರಿಂದ 19ನೇ ಶತಮಾನದಲ್ಲಿ ಅಭಿವೃದ್ಧಿ ಮಾಡಲಾಗಿರುವಂತಹವುಗಳಾಗಿವೆ. ಮರಾಠರ ಯುದ್ಧ ತಂತ್ರದ ಸೇನಾ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ Read More »

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ

ಕಾರಿನಲ್ಲಿ ಶಾಲೆಗೆ ಕರೆದೊಯ್ದು ವಿಶ್ವಾಸ ಗಳಿಸಿ ಕಿರುಕುಳ ಮಂಗಳೂರು : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪ ಈ ಘಟನೆ ನಡೆದಿದೆ. ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೊ ಕೇಸ್ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಫಾರ್ಚುನರ್‌ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ Read More »

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು

ಕೃತಕ ಬುದ್ಧಿಮತ್ತೆ ಮೂಲಕ ಕಾಲ್ಪನಿಕ ವಿಡಿಯೋ ಮಾಡಿದ ಯೂಟ್ಯೂಬರ್‌ ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಇನ್ನೊಂದು ಸುತ್ತಿನ ಅಪಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಹಲವಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಜಟಾಪಟಿ ಶುರುವಾಗಿದೆ. ಈ ವ್ಯಕ್ತಿ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ ಬಳಿಕ ಈ ದೂರಿನ ಬಗ್ಗೆ ಕಾಲ್ಪನಿಕವಾಗಿ ಕೃತಕ ಬುದ್ಧಿಮತ್ತೆ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವಿಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಯುಟ್ಯೂಬರ್ ಸಮೀರ್

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು Read More »

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು

ಕಿಡಿ ಹಚ್ಚಿದ ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ ಬಲಾಬಲ ಸಾಬೀತುಪಡಿಸಲು ಉಭಯ ಬಣಗಳ ರಹಸ್ಯ ಕಾರ್ಯಾಚರಣೆ ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಬಹಳ ಆತ್ಮವಿಶ್ವಾಸದಿಂದಲೇ ಹೇಳುತ್ತಿದ್ದರೂ ಇದರೊಂದಿಗೆ ಕಾಂಗ್ರೆಸ್‌ನೊಳಗಿನ ಒಳಜಗಳ ಮತ್ತು ತುಮುಲ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ. ಕೈ ಹೈಕಮಾಂಡ್‌ ಯಾವುದನ್ನೂ ಸ್ಪಷ್ಟವಾಗಿ ಹೇಳದ ಕಾರಣ ಕೈ ಕಿತ್ತಾಟ ಅಷ್ಟು ಬೇಗ ಮುಗಿಯುವುದಿಲ್ಲ ಎನ್ನುವುದು ಗ್ಯಾರಂಟಿಯಾಗಿದೆ. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ದಿಲ್ಲಿಗೆ ದೌಡಾಯಿಸಿರುವುದೇ ಸಾಕ್ಷಿ. ಏನೆಲ್ಲ ತಿಪ್ಪರಲಾಗ ಹಾಕಿದರೂ ಸಿದ್ದರಾಮಯ್ಯ ಅವರನ್ನು

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು Read More »

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ

ಧಗಧಗನೆ ಉರಿದ ರೈಲಿನ ವ್ಯಾಗನ್‌ಗಳು ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 4 ವ್ಯಾಗನ್‌ಗಳು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ Read More »

ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ

ಪುತ್ತೂರು, ವಿಟ್ಲ, ಉಪ್ಪಿನಂಗಡಿ ಮತ್ತಿತರೆಡೆ ಕಳ್ಳತನ ಮಾಡಿದ್ದ ಆರೋಪಿಗಳು ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತರ್‌ ರಾಜ್ಯ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೊಯ್ದ ಗ್ರಾಮದ ಕಲಾಯಿ ಹೌಸ್ ನಿವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಉರ್ಮಿಚಾಲ್ ಬೇಕೂರು ನಿವಾಸಿ ಮಹಮ್ಮದ್ ರಿಯಾಜ್ ಅಲಿಯಾಸ್ ಕಡಪ್ಪ ರಿಯಾಜ್

ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ Read More »

ಹಿರಿಯ ನಟ ಕೋಟ ಶ್ರೀನಿವಾಸ್‌ ರಾವ್‌ ನಿಧನ

ಕನ್ನಡ ಸೇರಿ ವಿವಿಧ ಭಾಷೆಗಳ 750ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಹೈದರಾಬಾದ್‌: ತೆಲುಗಿನ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಭಾನುವಾರ ಬೆಳಗಿನ ಜಾವ ನಿಧನರಾದರು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಅವರ ಕೊನೆಯ ಚಿತ್ರ 2023ರಲ್ಲಿ ಬಿಡುಗಡೆಯಾದ ‘ಸುವರ್ಣ ಸುಂದರಿ’. ಕೋಟ ಶ್ರೀನಿವಾಸ ರಾವ್ ಅವರು 750ಕ್ಕೂ

ಹಿರಿಯ ನಟ ಕೋಟ ಶ್ರೀನಿವಾಸ್‌ ರಾವ್‌ ನಿಧನ Read More »

error: Content is protected !!
Scroll to Top