ಸುದ್ದಿ

ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ

40 ದಿನಗಳಲ್ಲಿ 21 ಯುವಕ-ಯುವತಿಯರನ್ನು ಬಲಿತೆಗೆದುಕೊಂಡ ಹೃದಯಾಘಾತ ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ನಿನ್ನೆ ಮತ್ತೆ ಒಂದೇ ದಿನದಲ್ಲಿ ಮೂವರು ಇದೇ ಕಾರಣದಿಂದ ಮೃತಪಟ್ಟಿರುವುದು ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ಸಂಸದ ಡಾ.ಸಿ.ಎನ್‌. ಮಂಜುನಾಥ ಅವರು ಹಾಸನದ ಸರಣಿ ಹೃದಯಾಘಾತದ ಕಳವಳಕಾರಿ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ ದಿನವೇ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. […]

ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ Read More »

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ

ವೈಟಿಂಗ್‌ ಲಿಸ್ಟ್‌ನಲ್ಲಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ನವದೆಹಲಿ: ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆಯನ್ನು ಇನ್ನಷ್ಟು ಪ್ರಯಾಣಿಕಸ್ನೇಹಿಯಾಗಿಸಲು ಮುಂದಾಗಿರುವ ರೈಲ್ವೆ ರಿಸರ್ವೇಷನ್‌ ಚಾರ್ಟ್‌ ತಯಾರಿಯನ್ನು ಬದಲಾಯಿಸಲಿದೆ. ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೆ ಸಚಿವಾಲಯ ತಿಳಿಸಿದೆ. ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆಯಾಗಲಿದೆ. ಇದರಿಂದ ಮುಖ್ಯವಾಗಿ ವೈಟಿಂಗ್‌ ಲಿಸ್ಟ್‌ನಲ್ಲಿರುವ

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ Read More »

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ

ತ್ಯಾಜ್ಯದ ಲಾರಿಯಲ್ಲಿ ಶವ ಎಸೆದು ಹೋಗಿದ್ದ ಕೊಲೆ ಪಾತಕಿ ಬೆಂಗಳೂರು : ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಕೊನೆಗೂ ಬಯಲಿಗೆಳೆದು ಆರೋಪಿಯನ್ನು ಬಂಧಿಸಿದ್ದಾರೆ. ಇಬ್ಬರು ಮಕ್ಕಳ ತಾಯಿಯ ಜೊತೆ ವಿವಾಹಿತನ ಲಿವಿಂಗ್ ಟುಗೆದರ್​​ ಕೊಲೆಯ ಹಿಂದಿನ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಬಯಲು ಮಾಡಿದ್ದಾರೆ.

ಲಿವಿಂಗ್‌ ಟುಗೆದರ್‌ ಮಹಿಳೆಯ ಹತ್ಯೆ : ಆರೋಪಿ ಸೆರೆ Read More »

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ ತೀಕ್ಷ್ಣ ವಾಗ್ದಾಳಿ ನವದೆಹಲಿ: ಪಾಕಿಸ್ತಾನದ ವಿರುದ್ಧ ಕಳೆದ ಮೇ 7ರಂದು ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಕೆಲವು ಯುದ್ಧ ವಿಮಾನಗಳು ನಾಶವಾಗಿವೆ ಎಂಬುದಾಗಿ ನೌಕಾಪಡೆಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಹೇಳಿಕೊಂಡಿದ್ದು, ಈ ಹೇಳಿಕೆ ಭಾರಿ ಕೋಲಾಹಲ ಎಬ್ಬಿಸಿದೆ. ಮೇ 7ರ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ನೌಕಾಸೇನೆ ಅಧಿಕಾರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ Read More »

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರಿಗೆ ಕ್ಯಾಂಟರ್‌ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ದುರಂತ ಬೆಂಗಳೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16) ಮತ್ತು ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು. ಇವರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ

ಸಾಕುನಾಯಿಯನ್ನು ಕೊಂದು ಮಾಟಮಂತ್ರ ಮಾಡಿದ ಗುಮಾನಿ ಬೆಂಗಳೂರು: ನಗರದ ಮಹದೇವಪುರದ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯ ಕೊಳೆತು ನಾರುತ್ತಿದ್ದ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಆಕೆಯ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿತ್ತು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ Read More »

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು

ದರ್ಶನಕ್ಕಾಗಿ ಭಕ್ತರು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ನವದೆಹಲಿ: ಒಡಿಶಾದ ಪುರಿಯಲ್ಲಿ ಜಗತ್ಪ್ರಸಿದ್ಧ ಜಗನ್ನಾಥನ ರಥಯಾತ್ರೆಯ ಸಮಯದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ.ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು Read More »

error: Content is protected !!
Scroll to Top