ಸುದ್ದಿ

ಜೆಲ್ಲಿ ಚಾಕೊಲೇಟ್‌ ರೂಪದಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ

ಬೆಂಗಳೂರು : ಈಗ ಹೊಸ ಮಾದರಿಯ ಜೆಲ್ಲಿ ಗಾಂಜಾ ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳೇ ಇದರ ಗ್ರಾಹಕರು. ಈ ಬಗ್ಗೆ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಜೆಲ್ಲಿ ಗಾಂಜಾ ಗ್ಯಾಂಗನ್ನು ಬಂಧಿಸಿದ್ದಾರೆ. ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಬ್ಯಾಟರಾಯನಪುರ ಇನ್ಸ್‌ಪೆಕ್ಟರ್ ಕೆ.ಜೀವನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ಮಾಡಿದ್ದು, ಒಟ್ಟು […]

ಜೆಲ್ಲಿ ಚಾಕೊಲೇಟ್‌ ರೂಪದಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ Read More »

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ಹಲವು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಮಂಗಳವಾರ ರಾತ್ರಿ ಕುಸಿತ ಸಂಭವಿಸಿದ ಸ್ಥಳದ ಸಮೀಪವೇ ಮತ್ತಷ್ಟು ಭೂಕುಸಿತವಾಗಿದೆ. ಮಂಗಳವಾರ ಸಂಭವಿಸಿದ ಭೂಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಬಂಡೆಗಳು ರಸ್ತೆಗೆ ಉರುಳಿದ್ದು, ನಿನ್ನೆಯಷ್ಟೇ ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ಪೂರ್ತಿಯಾಗಿತ್ತು. ಅದರ ಬೆನ್ನಿಗೆ ಇಂದು ಮತ್ತೆ ಕುಸಿದಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ Read More »

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ : ಮಹಿಳೆ ಸಹಿತ ಏಳು ಮಂದಿ ಸೆರೆ

ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರಿಂದ ಹಣ ವಸೂಲಿ ದಂಧೆ ಮೈಸೂರು: ಜಾನುವಾರು ರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆ ಸೇರಿ ಏಳು ಮಂದಿಯನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರು ಎನ್ನಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಸಹಿತ ಏಳು ಮಂದಿಯನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಈ ಘಟನೆ ನಡೆದಿದೆ. ಹಿಂದೂ ಸಂಘಟನೆ ಹೆಸರಿನಲ್ಲಿ

ಜಾನುವಾರು ರಕ್ಷಣೆ ನೆಪದಲ್ಲಿ ಹಣ ವಸೂಲಿ : ಮಹಿಳೆ ಸಹಿತ ಏಳು ಮಂದಿ ಸೆರೆ Read More »

ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿ : 12 ಮಂದಿ ಸಾವು

ಮೆಕ್ಸಿಕೋ : ಮೆಕ್ಸಿಕನ್ ರಾಜ್ಯದ ಗುವಾನಾಜುವಾಟೊದ ಇರಾಪುವಾಟೊ ನಗರದಲ್ಲಿ ಬುಧವಾರ ರಾತ್ರಿ ಸಂಭ್ರಮಾಚರಣೆ ವೇಳೆ ಬಂದೂಕುಧಾರಿಗಳು ಗುಂಡು ಹಾರಿಸಿದಾಗ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇಂಟ್ ಜಾನ್ ದಿ ಬ್ಯಾಪ್ಟಿಸ್ಟ್ ಗೌರವಾರ್ಥ ಸ್ಥಳೀಯರು ನೃತ್ಯ ಮತ್ತು ಮದ್ಯಪಾನ ಮಾಡುತ್ತಿದ್ದಾಗ ಈ ದಾಳಿ ನಡೆದಿದೆ. ಆನ್‌ಲೈನ್‌ನಲ್ಲಿ ವೈರಲ್‌ ಆಗಿರುವ ವೀಡಿಯೊಗಳಲ್ಲಿ ಗುಂಡಿನ ದಾಳಿಯಿಂದ ಭಯಭೀತರಾದ ಜನ ಓಡಿಹೋಗುವುದನ್ನು ಹಾಗೂ ಶವಗಳನ್ನು ಕಾಣಬಹುದು. ಇರಾಪುವಾಟೊ ಅಧಿಕಾರಿ ರೊಡಾಲ್ಫೊ ಗ್ಮೆಜ್ ಸೆರ್ವಾಂಟೆಸ್ ಪತ್ರಿಕಾಗೋಷ್ಠಿಯಲ್ಲಿ ಸಾವಿನ ಸಂಖ್ಯೆ 12ಕ್ಕೆ

ಸಂಭ್ರಮಾಚರಣೆ ವೇಳೆ ಗುಂಡಿನ ದಾಳಿ : 12 ಮಂದಿ ಸಾವು Read More »

ಅಸಮಾಧಾನಿತ ಶಾಸಕರ ಬಾಯಿಗೆ ಬೀಗ ಜಡಿದ ಸಿದ್ದರಾಮಯ್ಯ

ಬಹಿರಂಗ ಹೇಳಿಕೆ ನೀಡಿ ಮುಜುಗರವುಂಟು ಮಾಡದಂತೆ ತಾಕೀತು ಬೆಂಗಳೂರು: ವಸತಿ ಇಲಾಖೆಯ ಭ್ರಷ್ಟಾಚಾರ ಮತ್ತು ಅನುದಾನ ಸಿಗದ ಕುರಿತು ಧ್ವನಿಯೆತ್ತಿದ್ದ ಕಾಂಗ್ರೆಸ್‌ನ ಇಬ್ಬರು ಶಾಸಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಬುಧವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೂಡಲೇ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ್ದ ಅಸಮಾಧಾನಿತ ಶಾಸಕ ರಾಜು ಕಾಗೆ ಹಾಗೂ ಭ್ರಷ್ಟಾಚಾರ ಬಾಂಬ್‌ ಸಿಡಿಸಿದ ಶಾಸಕ ಬಿ.ಆರ್‌ ಪಾಟೀಲ್‌ ಅವರನ್ನ ಭೇಟಿಯಾಗಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಿ.ಆರ್ ಪಾಟೀಲ್‌ಗೆ

ಅಸಮಾಧಾನಿತ ಶಾಸಕರ ಬಾಯಿಗೆ ಬೀಗ ಜಡಿದ ಸಿದ್ದರಾಮಯ್ಯ Read More »

ಶಿರಾಡಿ ಘಾಟಿಯಲ್ಲಿ ಭೂಕುಸಿತ : ಮಂಗಳೂರು-ಬೆಂಗಳೂರು ಸಂಚಾರ ಕಡಿತ

ಚಾರ್ಮಾಡಿ, ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ಮಂಗಳೂರು: ಮಳೆ ಅಬ್ಬರಕ್ಕೆ ಸಕಲೇಶಪುರ ಬಳಿ ಶಿರಾಡಿ ಘಾಟಿಯಲ್ಲಿ ಭೂಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ

ಶಿರಾಡಿ ಘಾಟಿಯಲ್ಲಿ ಭೂಕುಸಿತ : ಮಂಗಳೂರು-ಬೆಂಗಳೂರು ಸಂಚಾರ ಕಡಿತ Read More »

ನಭಕ್ಕೆ ಚಿಮ್ಮಿದ ಶುಭಾಂಶು ಶುಕ್ಲ ರಾಕೆಟ್‌ : ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಗಗನಯಾತ್ರೆಗೆ ಚಾಲನೆ

ಜಗತ್ತಿನಾದ್ಯಂತ ಹರ್ಷೋದ್ಗಾರ ಫ್ಲೋರಿಡಾ: ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಬಾಹ್ಯಾಕಾಶ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್-‌9 ರಾಕೆಟ್‌ನಲ್ಲಿ ನಭಕ್ಕೆ ಚಿಮ್ಮಿದೆ. ಈ ಮೂಲಕ ಭಾರತದ ಬಾಹ್ಯಾಕಾಶ ಪರಿಕ್ರಮದಲ್ಲಿ ಹೊಸದೊಂದು ಮೈಲುಗಲ್ಲು ಸ್ಥಾಪನೆಯಾಗಿದೆ. ಆರು ಸಲ ಮುಂದೂಡಿಕೆಯಾಗಿದ್ದ ಶುಭಾಂಶು ಶುಕ್ಲ ಗಗನಯಾನ ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಯಶಸ್ವಿಯಾಗಿ ನಡೆಯಿತು. ಇದನ್ನು ನೋಡಿ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಜನರು

ನಭಕ್ಕೆ ಚಿಮ್ಮಿದ ಶುಭಾಂಶು ಶುಕ್ಲ ರಾಕೆಟ್‌ : ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಗಗನಯಾತ್ರೆಗೆ ಚಾಲನೆ Read More »

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌

ಸಮರ ವಿರಾಮದ ಬೆನ್ನಿಗೆ ದೇಶದ್ರೋಹಿಗಳ ಬೇಟೆ; 700 ಮಂದಿ ಸೆರೆ ಟೆಹ್ರಾನ್‌ : ಸಮರ ವಿರಾಮ ಜಾರಿಗೆ ಬಂದ ಮರುದಿನವೇ ಇರಾನ್‌ ತನ್ನಲ್ಲಿರುವ ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ ಶುರುಮಾಡಿದ್ದು, ಇಸ್ರೇಲ್‌ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಮೂವರನ್ನು ನೇಣಿಗೇರಿಸಿದೆ. ಇಸ್ರೇಲ್‌ ಮತ್ತು ಇರಾನ್‌ ನಡುವೆ 12 ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಶಾಂತಿ ಮಾತುಕತೆಯ ಬಳಿಕ ನಿನ್ನೆ ಕೊನೆಗೊಂಡಿದೆ. ಇದರ ಬೆನ್ನಿಗೆ ಇರಾನ್‌ ಸರ್ಕಾರ ಇಸ್ರೇಲ್‌ಗೆ ನೆರವಾಗಿರುವವರ ಬೇಟೆಯಾಡಲು ಪ್ರಾರಂಭಿಸಿದೆ. ನಿನ್ನೆಯೇ ಇಸ್ರೇಲ್‌ನ ಬೇಹುಪಡೆ ಮೊಸಾದ್‌ಗೆ ನೆರವಾದ

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌ Read More »

ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ

ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕದಲ್ಲಿ ನೆನಪುಗಳನ್ನು ಬಿಚ್ಚಿದ ಪ್ರಧಾನಿ ನವದೆಹಲಿ: ಇಂದಿರಾ ಗಾಂಧಿ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭವನ್ನು ಭಾರತೀಯರು ಎಂದಿಗೂ ಮರೆಯದ ಕರಾಳ ದಿನ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮೋದಿ ಆ ದಿನಗಳ ಕುರಿತು ಟವೀಟ್‌ ಮಾಡಿದ್ದಾರೆ. ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ

ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ Read More »

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ

ಮನಪಾ ಬಳಿಕ ಮಂಗಳೂರು ಆರ್‌ಟಿಒ ಕಚೇರಿಯ ಅವ್ಯವಹಾರ ಬಯಲಿಗೆ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ದಾಳಿಯಾದ ಬಳಿಕ ಅಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಬುದ್ಧಿವಂತರ ಮತ್ತು ಪ್ರಜ್ಞಾವಂತರ ಜಿಲ್ಲೆ ಎಂಬ ಖ್ಯಾತಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೃದಯ ಭಾಗಕ್ಕೆ ಕಳಂಕ ಅಂಟಿಕೊಂಡಿದೆ. ಈಗ ಸಾರಿಗೆ ಕಚೇರಿಯ ಸರದಿ. ಮಂಗಳೂರಿನ ಸಾರಿಗೆ ಕಚೇರಿಯಲ್ಲಿ ವಾಹನ ನೋಂದಣಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಹಗರಣ ಮಂಗಳೂರು ಸಾರಿಗೆ ಅಧಿಕಾರಿ

2.5 ಕೋಟಿ ರೂ. ಕಾರಿಗೆ 50 ಲ.ರೂ. ಮೌಲ್ಯ ತೋರಿಸಿ ನೋಂದಾಯಿಸಿ ತೆರಿಗೆ ವಂಚನೆ Read More »

error: Content is protected !!
Scroll to Top