ಸುದ್ದಿ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ […]

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ

ವಿಶೇಷ ಪ್ರಾರ್ಥನೆ, ಹೊಸ ಉಡುಪು ಧರಿಸಿ ಸಂಭ್ರಮ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಬಕ್ರೀದ್‌ ಹಬ್ಬ ಆಚರಿಸಲಾಗುತ್ತದೆ. ಮುಂಜಾನೆಯಿಂದಲೇ ಮುಸ್ಲಿಮರು ಈದುಲ್ ಅಝ್‌ಹಾ (ಬಕ್ರೀದ್) ಸಡಗರದಲ್ಲಿದ್ದಾರೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ನಾನಾ ಬಗೆಯ ತಿಂಡಿ-ತಿನಿಸು

ಕರಾವಳಿಯಲ್ಲಿ ಇಂದು ಬಕ್ರೀದ್‌ ಆಚರಣೆ Read More »

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡಿಂಗ್‌ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿರಾಟ್‌ ಕೊಹ್ಲಿ ವಿರುದ್ಧವೂ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಕೇಸ್‌ ದಾಖಲಾಗಿದೆ. ಆದರೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ Read More »

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು

ಪ್ರವಾಸಿ ತಾಣಗಳ ಪ್ರವೇಶಕ್ಕಿದ್ದ ನಿರ್ಬಂಧ ತೆರವು ಬೆಳ್ತಂಗಡಿ : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ. ಮೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದ ಕಾರಣ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿತ್ತು. ನದಿ ಹಳ್ಳಗಳು ಉಕ್ಕಿ ಹರಿದು ಒಳ ಹರಿವು ಜಾಸ್ತಿ ಇದ್ದುದರಿಂದ ಪ್ರವಾಸಿಗರ ಚಾರಣಕ್ಕೆ ಮೇ 31ರಂದು ಮುಂದಿನ

ಇಂದಿನಿಂದ ಗಡಾಯಿಕಲ್ಲು ಚಾರಣ ಮಾಡಬಹುದು Read More »

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು

ಶೈಕ್ಷಣಿಕ ವರ್ಷದ 244 ದಿನ ವಿತರಿಸಲು ಇಲಾಖೆ ಆದೇಶ ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಾರದಲ್ಲಿ 2 ದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಮತ್ತು ಉಳಿದ ನಾಲ್ಕು ದಿನ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು Read More »

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌

ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್‌ ಅವರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನ

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌ Read More »

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ

ಜನರ ಆಕ್ರೋಶದ ಹಿನ್ನೆಲೆಯಲ್ಲಿ ತನ್ನ ಮೇಲೆ ಆರೋಪ ಎಂದು ದೂರು ಬೆಂಗಳೂರು : ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ Read More »

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ

ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಚೆನ್ನೈ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಳಗ್ಗೆ ತಮಿಳುನಾಡು ಬಳಿ ಅಪಘಾತಕ್ಕೀಡಾಗಿ ಚಾಕೊ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರಗಾಯಗಳಾಗಿವೆ. ಅಪಘಾತದ ಸಮಯದಲ್ಲಿ, ಶೈನ್, ಹಾಗೂ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶೈನ್‌ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ Read More »

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ?

ಸಿಎಂ ನೀಡಿದ ಸುಳಿವಿನಿಂದಲೇ ಆರೋಪಿಗಳು ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರು: ಆರ್‌ಸಿಬಿ ಐಪಿಎಲ್‌ ಗೆದ್ದಾಗ ಸನ್ಮಾನ ಏರ್ಪಡಿಸಿ ಪ್ರಚಾರ ಪಡೆಯಲು ಯತ್ನಿಸಿದ ರಾಜ್ಯ ಸರ್ಕಾರ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳೆಲ್ಲ ಪರಾರಿಯಾಗಿದ್ದು, ಇವರು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ? Read More »

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ

ಚೆನಾಬ್ ನದಿಯ ಮೇಲೆ ನಿರ್ಮಿಸಿದ 1.3 ಕಿಮೀ ಉದ್ದ 359 ಮೀಟರ್ ಎತ್ತರದ ಬ್ರಿಜ್‌ ನವದೆಹಲಿ: ಪ್ಯಾರಿಸ್‌ನ ಐಫೆಲ್‌ ಟವರ್‌ಗಿಂತಲೂ ಎತ್ತರವಾದ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ ಮೋದಿ ಇಂದು ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಒಟ್ಟು ಸುಮಾರು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ಮೋದಿ ಇಂದು ಕಾಶ್ಮೀರದಲ್ಲಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಚೆನಾಬ್‌ ಸೇತುವೆ ವಿಶ್ವದ

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ Read More »

error: Content is protected !!
Scroll to Top