ಸುದ್ದಿ

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ

ಅಣ್ವಸ್ತ್ರಗಳ ಮೇಲೆ ದಾಳಿಯಾಗಿರುವುದನ್ನು ಅಲ್ಲಗಳೆದ ಪರಮಾಣು ಕಾವಲು ಸಂಸ್ಥೆ ಇಸ್ಲಾಮಾಬಾದ್ : ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ಥಾನದಲ್ಲಿ ಭಾರತೀಯ ವಾಯುಪಡೆ ನಡೆಸಿದ ಕಾರ್ಯಾಚರಣೆ ಬಳಿಕ ಕಿರಾನ ಬೆಟ್ಟಗಳಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎನ್ನುವ ವದಂತಿ ಸುಳ್ಳು ಎಂದು ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ(ಐಎಇಎ) ಸ್ಪಷ್ಟಪಡಿಸಿದೆ. ಪಾಕಿಸ್ಥಾನದ ಯಾವುದೇ ಪರಮಾಣು ಸ್ಥಾವರದಿಂದ ವಿಕಿರಣ ಸೋರಿಕೆ ಅಥವಾ ಹೊರಸೂಸುವಿಕೆಯ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಪತ್ರಿಕಾ ವಿಭಾಗದ ಫ್ರೆಡೆರಿಕ್ ಡಹ್ಲ್ […]

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ Read More »

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ

ಮಂಗಳೂರಿನ ಸರ್ವೆ ಸೂಪರ್‌ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿ ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಮಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಗಳೂರಿನ ಸರ್ವೆ ಸೂಪರ್ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿಯಾಗಿದೆ ಎಂದು ತಿಳಿದುಬಂದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ Read More »

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು

ಅಪಾರ ಶಸ್ತ್ರಾಸ್ತ್ರ ವಶ; ಮುಂದುವರಿದ ಕಾರ್ಯಾಚರಣೆ ಇಂಫಾಲ: ಮಣಿಪುರದ ಚಾಂದೆಲ್‌ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್ ಘಟಕದ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕ ಮೇ 14ರಂದು

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು Read More »

ಇನ್ನೋರ್ವ ಉಗ್ರನ ಬಲಿ : ನಸುಕಿನ ಹೊತ್ತು ನಡೆದ ಎನ್‌ಕೌಂಟರ್‌

ಮೂವರು ಭಯೋತ್ಪಾದಕರ ಬೇಟೆಗೆ ತೀವ್ರ ಕಾರ್ಯಾಚರಣೆ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಇನ್ನೋರ್ವ ಉಗ್ರನನ್ನು ಬೇಟೆಯಾಡಿವೆ. ಗುರುವಾರ ನಸುಕಿನ ಹೊತ್ತು ನಡೆದ ಗುಂಡಿನ ಕಾಳದಗದಲ್ಲಿ ಓರ್ವ ಉಗ್ರ ಸತ್ತಿದ್ದು, ಹೋರಾಟ ನಡೆಯುತ್ತಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ ನಾದಿರ್‌ ಎಂಬಲ್ಲಿ ಎನ್‌ಕೌಂಟರ್‌ ನಡೆಯುತ್ತಿದೆ. ಜೈಶ್‌ ಇ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಉಗ್ರರು ಇಲ್ಲಿ ಅಡಗಿರುವ ಮಾಹಿತಿ ಸಿಕ್ಕಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಓರ್ವ ಸತ್ತಿದ್ದು, ಇನ್ನಿಬ್ಬರ ಬೇಟೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಇನ್ನೋರ್ವ ಉಗ್ರನ ಬಲಿ : ನಸುಕಿನ ಹೊತ್ತು ನಡೆದ ಎನ್‌ಕೌಂಟರ್‌ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ

ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳು ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ Read More »

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಮೃತರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್

ಪುತ್ತೂರು: ಪುತ್ತೂರು ಕೆ.ಎಸ್.ಆರ್‍.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ  ಹೋಟೆಲ್‍ ಪಾರ್ಕಿಂಗಿಗೆ ಪೊಲೀಸ್‍ ಬ್ಯಾರಿಕೇಡ್‍ ಇಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚೆಗೆ ದಾರಿ ಮಾಡಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಪೊಲೀಸ್ ಬ್ಯಾರಿಕೇಡ್ ಬಳಕೆಯಾಗುವುದು ಎಲ್ಲಿ? ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್ Read More »

ಬಿಎಸ್‍ಎಫ್‍ ಯೋಧ ಪೂರ್ಣಂ ಶಾ ಭಾರತಕ್ಕೆ ಹಸ್ತಾಂತರ | ಪಾಕ್ ವಶದಲ್ಲಿದ್ದ ಯೋಧ

ನವದೆಹಲಿ : ಏ.23 ರಂದು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ ವಿಚಾರವಾಗಿ ಪಾಕ್ ಸೇನೆ ಸೆರೆಹಿಡಿದು ಪಾಕ್‍ ನಲ್ಲಿ ಬಂದಿಸಲಾಗಿತ್ತು. ಇದೀಗ ಬಂಧಿತರಾಗಿದ್ದ ಬಿಎಸ್‌ಎಫ್ ಯೋಧ ಪೂರ್ಣಂ ಶಾ ಅವರನ್ನು ಪಾಕಿಸ್ತಾನ ಪಂಜಾಬ್‌ನ ಅಟ್ಟಾರಿ-ವಾಘಾ ಗಡಿ ಮುಂಭಾಗದ ಮೂಲಕ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಸೇನಾಪಡೆ ತಿಳಿಸಿದೆ. ಬುಧವಾರ ಬೆಳಿಗ್ಗೆ 10.30ಕ್ಕೆ ಪಾಕಿಸ್ತಾನದ ರೇಂಜರ್‌ಗಳು ಸಾಹು ಅವರನ್ನು ಬಿಎಸ್‌ಎಫ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಹಸ್ತಾಂತರವನ್ನು ಶಾಂತಿಯುತವಾಗಿ, ಶಿಷ್ಟಾಚಾರಗಳಿಗೆ ಅನುಸಾರವಾಗಿ ನಡೆಸಲಾಯಿತು ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರರು

ಬಿಎಸ್‍ಎಫ್‍ ಯೋಧ ಪೂರ್ಣಂ ಶಾ ಭಾರತಕ್ಕೆ ಹಸ್ತಾಂತರ | ಪಾಕ್ ವಶದಲ್ಲಿದ್ದ ಯೋಧ Read More »

ಕರ್ನಲ್‌ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿಯಾಗಿದೆ ಎಂದು ಸುದ್ದಿ ಹಬ್ಬಿಸಿದ ಕಿಡಿಗೇಡಿ

ಬೆಳಗಾವಿಯ ಬಾಗೇವಾಡಿಯಲ್ಲಿರುವ ಮನೆಗೆ ಪೊಲೀಸರ ಬಿಗು ಭದ್ರತೆ ಬೆಳಗಾವಿ: ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಗ್ಗೆ ಜಗತ್ತಿಗೆ ಮಾಹಿತಿ ನೀಡುತ್ತಿದ್ದ ಸೇನೆಯ ಉನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಗಂಡನ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಸ್ಪಷ್ಟನೆ ಕೊಟ್ಟಿದ್ದು, ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಆಸ್ಪದ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಅನೀಸ್ ಉದ್ದೀನ್ ಎಂಬ

ಕರ್ನಲ್‌ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿಯಾಗಿದೆ ಎಂದು ಸುದ್ದಿ ಹಬ್ಬಿಸಿದ ಕಿಡಿಗೇಡಿ Read More »

ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ

ಸಮುದ್ರದಲ್ಲಿ ಕಟ್ಟೆಚ್ಚರದಿಂದ ಗುಂಪಾಗಿ ಮೀನುಗಾರಿಕೆ ನಡೆಸಲು ಸಲಹೆ ಉಡುಪಿ: ಯುದ್ಧದ ಕಾರ್ಮೋಡ ಸದ್ಯಕ್ಕೆ ಸರಿದಿದ್ದರೂ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ಕಟ್ಟೆಚ್ಚರದಿಂದಿರಲು ಮೀನುಗಾರರಿಗೆ ಸರಕಾರ ಸೂಚನೆ ನೀಡಿದೆ. ಎರಡು-ಮೂರು ದೋಣಿಗಳು ಗುಂಪಾಗಿ ಮೀನುಗಾರಿಕೆ ನಡೆಸಲು ಸೂಚಿಸಲಾಗಿದೆ ಮತ್ತು ಪ್ರತಿಕ್ಷಣವೂ ಕಟ್ಟೆಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ದೋಣಿ ಮತ್ತು ಅಪರಿಚಿತ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಡಲು ಮೀನುಗಾರಿಕಾ ಮೀನುಗಾರಿಕೆ ಇಲಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಮೀನುಗಾರರಿಗೆ ಸೂಚಿಸಿದ್ದಾರೆ. ಯಾವುದೇ ಸಂದೇಹ ಅಥವಾ ಅನುಮಾನಾಸ್ಪದ ದೃಶ್ಯ ಕಂಡುಬಂದರೆ

ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ Read More »

error: Content is protected !!
Scroll to Top