ಸುದ್ದಿ

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.25 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಳ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ (61) ಎಂದು ಪತ್ತೆಹಚ್ಚಲಾಗಿದೆ. ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋದವರು ತಿರುಗಿ ಬರಲಿಲ್ಲ. ಇವರ ಬಳಿ ಇದ್ದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿನ ಹಸಿರು

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ Read More »

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು

ಪುತ್ತೂರು : ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ. ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದ್ದು, ಚಾಲಕ ಮತ್ತು ಇನ್ನೋರ್ವ ವ್ಯಕ್ತಿ ರಿಕ್ಷಾದಲ್ಲಿದ್ದರು ಸಹ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹೊಸದಾಗಿ ಖರೀದಿಸಿದ ರಿಕ್ಷಾ ಪಲ್ಟಿ | ಚಾಲಕ ಅಪಾಯದಿಂದ ಪಾರು Read More »

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ?

ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಗೃಹ ಸಚಿವರ ಅಸಹಾಯಕತೆ ಬೆಂಗಳೂರು: ದೇಶಾದ್ಯಂತ ಸುದ್ದಿ ಮಾಡಿರುವ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಗೃಹ ಸಚಿವ ಜಿ.ಪರಮೇಶ್ವರ ಮತ್ತೆಅಸಹಾಯಕತೆ ಪ್ರದರ್ಶಿಸಿದ್ದಾರೆ. ಯಾರಾದರೂ ದೂರು ಕೊಡದೆ ಪ್ರಕರಣದ ತನಿಖೆ ಮಾಡಲು ಸಾಧ್ಯವಿಲ್ಲ, ಯಾರ ವಿರುದ್ಧ ಎಂದು ತನಿಖೆ ಮಾಡಬಹುದು ಎಂದು ಬೇಜವಾಬ್ದಾರಿಯಾಗಿ ಮಾತನಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ? ಎಫ್‌ಐಆರ್ ಆಗದೇ ತನಿಖೆಗೆ ಕೊಡಲು ಆಗಲ್ಲ. ರಾಜಣ್ಣ ಏನು ಮಾಡುತ್ತಾರೋ ನೋಡೋಣ.

ನಾನೇನು ಮಾಡಲಿ? ಯಾರ ವಿರುದ್ಧ ತನಿಖೆ ನಡೆಸಲಿ? Read More »

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ

ಡಾ.ಕೆ.ಚಿನ್ನಪ್ಪ ಗೌಡರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ

ಪುತ್ತೂರು : ಹತ್ತೂರು ಒಡೆಯ ಪುತ್ತೂರಿನ ಮಹತೋಬಾರ ಶ್ರೀ ಮಹಾಲಿಂಗೇಶ್ವರ ಅನೇಕ ಇತಿಹಾಸವನ್ನು ಒಳಗೊಂಡಿದೆ. ಕಾರಣಿಕ ಕಥೆಯನ್ನು ಹೊಂದಿರುವ  ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದ ಅಗಳುಗಳು ಮುತ್ತಾಗಿರುವ  ಇತಿಹಾಸವಿದೆ. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಬಾರಿಯ ಜಾತ್ರೆಯಲ್ಲಿ ಭಕ್ತರಿಗೆ ಅನ್ನಪ್ರಸಾದವನ್ನು ದೇವಳದ ಕೆರೆಯ ಬಳಿಯ ವಿಶಾಲವಾದ ಜಾಗದಲ್ಲಿ ವಿತರಣೆ ಮಾಡುವುದೆಂದು ತೀರ್ಮಾನಿಸಿದಂತೆ ಮಾ.24ರಂದು ದೇವಳದ ಕೆರೆಯ ಬಳಿ ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಇದೀಗ ಈ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಅನ್ನದಾನ | ಇಂದು ಅನ್ನಪ್ರಸಾದ ವಿತರಣೆಗೆ ಚಪ್ಪರ ಮುಹೂರ್ತ Read More »

ಆನ್‌ಲೈನ್ ಮೂಲಕ  ಬಡಜನರ ಬ್ಯಾಂಕ್‍ ಖಾತೆ ವಂಚನೆ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಆನ್‌ಲೈನ್ ವಂಚನೆಯ ಮೂಲಕ  ಬಡ ಜನರ ಬ್ಯಾಂಕ್ ಖಾತೆಗಳನ್ನು ದುರುಪಯೋಗಿಸುತ್ತಿದ್ದ  ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ ಅನೂಪ್ ಕಾರೇಕರ್ (42) ಬಂಧಿತ ಆರೋಪಿಗಳು. ದಕ್ಷಿಣ ಕನ್ನಡ ಸೈಬರ್ ಕ್ರೈಂ ಪ್ರಕರಣದ ತನಿಖೆ ವೇಳೆ ಆರೋಪಿಗಳ ಪ್ಲಾನ್ ತಿಳಿದು ಬಂದಿದೆ. ಮುಗ್ಧ ಜನರ ಬ್ಯಾಂಕ್ ಖಾತೆಯೇ ಇವರ ಗುರಿಯಾಗಿತ್ತು. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯಲು

ಆನ್‌ಲೈನ್ ಮೂಲಕ  ಬಡಜನರ ಬ್ಯಾಂಕ್‍ ಖಾತೆ ವಂಚನೆ : ಇಬ್ಬರು ಆರೋಪಿಗಳ ಬಂಧನ Read More »

ಜೈಲಿನ ಮೊಬೈಲ್‌ ಜಾಮರ್‌ನಿಂದ ಪರಿಸರದ ನಾಗರಿಕರಿಗೆ ನೆಟ್‌ವರ್ಕ್‌ ಸಮಸ್ಯೆ

ನೆಟ್‌ವರ್ಕ್‌ ಇಲ್ಲದೆ ತುರ್ತು ಸಂದರ್ಭದಲ್ಲಿ ಉಂಟಾದ ಸಮಸ್ಯೆಯನ್ನು ವಿವರಿಸಿದ್ದಾರೆ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಮಂಗಳೂರು: ಜೈಲಿನಲ್ಲಿರುವ ಕೈದಿಗಳು ಮೊಬೈಲ್‌ ಫೋನ್‌ ಬಳಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜೈಲಿನೊಳಗೆ ಜಾಮರ್‌ಗಳನ್ನು ಜೈಲು ಅಧಿಕಾರಿಗಳು ಅಳವಡಿಸುತ್ತಾರೆ. ಆದರೆ ಈ ಜಾಮರ್‌ಗಳು ಜೈಲಿನ ಸುತ್ತುಮುತ್ತಲಿನ ಸಮಾರು 1 ಕಿಲೋಮೀಟರ್‌ ವ್ಯಾಪ್ತಿಯಲ್ಲಿರುವ ಮೊಬೈಲ್‌ಗಳ ನೆಟ್‌ವರ್ಕ್‌ ಸಂಪರ್ಕವನ್ನು ತೀವ್ರವಾಗಿ ಬಾಧಿಸುತ್ತವೆ. ಜನರು ನಿತ್ಯ ಮೊಬೈಲ್‌ ನೆಟ್‌ವರ್ಕ್‌ ಇಲ್ಲದೆ ಪರದಾಡಬೇಕಾಗುತ್ತದೆ. ಇದು ಕೆಲವು ತುರ್ತು ಸಂದರ್ಭದಲ್ಲಿ ಭಾರಿ ಅನಾಹುತಗಳಿಗೆ ಎಡೆಮಾಡಿಕೊಡಬಹುದು. ಇಂಥ ಒಂದು ಪರಿಸ್ಥಿಯನ್ನು

ಜೈಲಿನ ಮೊಬೈಲ್‌ ಜಾಮರ್‌ನಿಂದ ಪರಿಸರದ ನಾಗರಿಕರಿಗೆ ನೆಟ್‌ವರ್ಕ್‌ ಸಮಸ್ಯೆ Read More »

error: Content is protected !!
Scroll to Top