ಪುತ್ತೂರು: ಮೇ 5 : ಶೃಂಗೇರಿಯಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಚಾಲನೆ | ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ
ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಧರ್ಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಗ್ರಾಮ ಸಹಿತ ತಾಲೂಕು ಸಮಿತಿಗಳನ್ನು ರಚಿಸಲಾಗಿದ್ದು, ಮೇ ೫ ರಂದು ಅಪರಾಹ್ನ 3 ಗಂಟೆಗೆ ಹಿಂದೂ ಧರ್ಮ ಶಿಕ್ಷಣ ತರಗತಿಗೆ ಶೃಂಗೇರಿಯಲ್ಲಿ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಸಮಿತಿ ಉಪಾಧ್ಯಕ್ಷ ಆರ್.ಸಿ.ನಾರಾಯಣ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು ಧಾರ್ಮಿಕ ಶಿಕ್ಷಣದ ಕೇಂದ್ರವಾಗಬೇಕು. ಈ ಮೂಲಕ ಕರ್ನಾಟಕದಾದ್ಯಂತ ಶಿಕ್ಷಣದ ಮಹತ್ವ ಪಸರಿಸಬೇಕು. […]










