ಸುದ್ದಿ

ಪಿಕ್ಅಪ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತ್ಯು

ಬಂಟ್ವಾಳ : ತುಂಬೆ ಜಂಕ್ಷನ್ ಬಳಿಯ ಹೆದ್ದಾರಿಯಲ್ಲಿ ಪಿಕ್ಅಪ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ವಾಹನ ಢಿಕ್ಕಿಯಾಗಿ ಮೃತ ಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತುಂಬೆ ನಿವಾಸಿ ಮಹಾಬಲ (47) ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಕ್ಅಪ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತ್ಯು Read More »

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ.

ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »

ಮಂಗಳೂರು-ಮುಂಬಯಿ ಮಧ್ಯೆ ವಂದೇ ಭಾರತ್‌ ರೈಲು ಓಡಿಸಲು ಸಿದ್ಧತೆ

12 ತಾಸಿನಲ್ಲಿ ಮುಂಬಯಿಯಿಂದ ಮಂಗಳೂರು ತಲುಪಲಿರುವ ರೈಲು ಮಂಗಳೂರು: ಮುಂಬಯಿಯಲ್ಲಿ ನೆಲೆಸಿರುವ ಕರಾವಳಿ ಭಾಗದ ಜನರಿಗೆ ರೈಲ್ವೆ ಸಿಹಿಸುದ್ದಿ ನೀಡಿದೆ. ಭಾರಿ ಜನಮೆಚ್ಚುಗೆಗೆ ಪಾತ್ರವಾಗಿರುವ ವಂದೇ ಭಾರತ್ ರೈಲು ಸೇವೆ ಮಂಗಳೂರು-ಮುಂಬಯಿ ಮಧ್ಯೆ ಶುರುವಾಗಲಿದ್ದು, ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಪ್ರಸ್ತುತ ಮುಂಬಯಿ-ಮಂಗಳೂರು ನಡುವಿನ ರೈಲು ಪ್ರಯಾಣಕ್ಕೆ 15-16 ತಾಸು ಹಿಡಿಯುತ್ತದೆ. ವಂದೇ ಭಾರತ್‌ ರೈಲು ಕೇವಲ 12 ತಾಸಿನಲ್ಲಿ ತಲುಪುತ್ತದೆ. ಹೀಗಾಗಿ ವಂದೇ ಭಾರತ್‌ನಿಂದ ಜನರ ಸಮಯ ಬಹಳಷ್ಟು ಉಳಿತಾಯವಾಗಲಿದೆ. ವಂದೇ ಭಾರತ್‌ ಪ್ರಯಾಣ ಆರಾಮದಾಯಕವೂ ಹೌದು.

ಮಂಗಳೂರು-ಮುಂಬಯಿ ಮಧ್ಯೆ ವಂದೇ ಭಾರತ್‌ ರೈಲು ಓಡಿಸಲು ಸಿದ್ಧತೆ Read More »

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ

ರೌಡಿಶೀಟರ್‌ ಕಾಂಗ್ರೆಸ್‌ ಮುಖಂಡನ ಸೇರ್ಪಡೆಗೆ ಸಚಿವ ದಿನೇಶ್‌ ಗುಂಡೂರಾವ್‌ ಶಿಫಾರಸ್ಸು ಮಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳ ಪೈಕಿ ಆದಾಯದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ಮಾಜಿ ರೌಡಿಶೀಟರ್‌ ಆಗಿರುವ ಕಾಂಗ್ರೆಸ್‌ ಮುಖಂಡರೊಬ್ಬರನ್ನು ಸೇರಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುಂದಾಗಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಕಾಂಗ್ರೆಸ್‌ ಮುಖಂಡ ಹಿಂದೆ ನಕಲಿ ಚೆಕ್ ನೀಡಿ ಹಣ್ಣುಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚಿಸಿದ ಪ್ರಕರಣವಿದೆ. ಮಾಜಿ ರೌಡಿಶೀಟರ್ ಆಗಿರುವ

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕುಕ್ಕೆ ಆಡಳಿತ ಮಂಡಳಿಗೆ ಸೇರಿಸುವ ಯತ್ನ : ಜನರ ವಿರೋಧ Read More »

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌

ಆತ್ಮಹತ್ಯೆ ಹಿಂದೆ ಪ್ರೇಯಸಿಯ ಕೈವಾಡವಿಲ್ಲ ಎಂದು ವರದಿ ಸಲ್ಲಿಸಿದ ಸಿಬಿಐ ಮುಂಬಯಿ: ಬಾಲಿವುಡ್‌ ಸೆಲೆಬ್ರಿಟಿಗಳ ಮ್ಯಾನೇಜರ್‌ ಆಗಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಸಾವಿನ ಪ್ರಕರಣ ಐದು ವರ್ಷಗಳ ಬಳಿಕ ಮರಳಿ ಮುನ್ನೆಲೆಗೆ ಬಂದಿರುವಾಗಲೇ ಇನ್ನೊಂದೆಡೆ ಈ ಕೇಸಿನ ಜೊತೆಗೆ ತಳುಕು ಹಾಕಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ನಟನ ಪ್ರೇಯಸಿಯಾಗಿದ್ದ ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ ನೀಡಿದೆ.2020 ಜೂನ್‌ 14ರಂದು ಸುಶಾಂತ್‌ ಸಿಂಗ್‌ ರಜಪೂತ್‌ ಸಿಂಗ್‌ ತನ್ನ ಫ್ಲ್ಯಾಟ್‌ನಲ್ಲಿ ನೇಣಿಗೆ ಶರಣಾಗಿದ್ದರು.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು:  ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ

ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ           

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ  ಮಾರ್ಚ್ 20 ಗುರುವಾರದಂದು ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ  ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ  ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ  ಅವರ  ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.

ಕೆ ಎಸ್ ಎಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ            Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ಪುತ್ತೂರಿನ ಭಾರತ್‍ ಸಿನಿಮಾಸ್‍ ನಲ್ಲಿ ಸಂಭ್ರಮಾಚರಣೆಗೊಂಡು, ಇದೀಗ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ  ಮಾ. 23(ನಾಳೆ) ರಂದು ಬೆಳಗ್ಗೆ 10:30ಕ್ಕೆ ಮತ್ತು 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top